LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್! ಸೋಮವಾರ ಪ್ರಮಾಣವಚನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ಒಪ್ಪಿಗೆ ನೀಡಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಬಹುನಿರೀಕ್ಷಿತ ಸಂಪುಟ ವಿಸ್ತರಣೆ ಬರುವ ಸೋಮವಾರ (ಸಂಜೆ 5 ಗಂಟೆಗೆ) ವಿಧಾನಸೌಧದ ಗ್ಲಾಸ್ ಹೌಸ್‌ನಲ್ಲಿ ನಡೆಯುವ ಸಾಧ್ಯತೆ ಹೆಚ್ಚಾಗಿದೆ.

ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಿಎಂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಕೆ.ಸಿ. ವೇಣುಗೋಪಾಲ್ ಅವರ ನಡುವೆ ನಡೆದ ಸುದೀರ್ಘ ಸಭೆಯ ಬಳಿಕ ಈ ಅಂತಿಮ ನಿರ್ಧಾರಕ್ಕೆ ಬರಲಾಗಿದೆ.

18 ಸ್ಥಾನಗಳ ಭರ್ತಿ ಸಾಧ್ಯತೆ:
ಪ್ರಸ್ತುತ ಖಾಲಿ ಇರುವ 20 ಸಚಿವ ಸ್ಥಾನಗಳ ಪೈಕಿ 18 ಸ್ಥಾನಗಳನ್ನು ಭರ್ತಿ ಮಾಡುವ ನಿರೀಕ್ಷೆಯಿದ್ದು, ಉಳಿದ 2 ಸ್ಥಾನಗಳನ್ನು ಭವಿಷ್ಯದ ರಾಜಕೀಯ ಬೆಳವಣಿಗೆ ಹಾಗೂ ಅಸಮಾಧಾನ ಶಮನಕ್ಕಾಗಿ ಕಾಯ್ದಿರಿಸುವ ಸಾಧ್ಯತೆಯಿದೆ. ನೂತನ ಪಟ್ಟಿಯಲ್ಲಿ ಇಬ್ಬರು ಮಹಿಳಾ ಶಾಸಕರಿಗೆ ಅವಕಾಶ ಸಿಗುವ ಸಾಧ್ಯತೆ ದಟ್ಟವಾಗಿದೆ.

ಭಾನುವಾರ ಬೆಂಗಳೂರಿಗೆ 'ಅಂತಿಮ ಪಟ್ಟಿ':
ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಭಾನುವಾರ ಅಂತಿಮ ಸಚಿವರ ಪಟ್ಟಿಯೊಂದಿಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಪ್ರಮಾಣವಚನ ಸ್ವೀಕರಿಸುವ ಮುನ್ನ ನೂತನ ಸಚಿವರ ಹೆಸರುಗಳನ್ನು ಅಧಿಕೃತವಾಗಿ ಪ್ರಕಟಿಸಲಾಗುವುದು.

ಮಧ್ಯಪ್ರವೇಶಿಸಿದ ರಾಹುಲ್ ಗಾಂಧಿ:
ಕಾವೇರಿ ವಿವಾದದ ನಡುವೆಯೂ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಬಗ್ಗೆ ವಿರೋಧ ಪಕ್ಷ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿತ್ತು. ಈ ಬೆನ್ನಲ್ಲೇ ರಾಹುಲ್ ಗಾಂಧಿ ಖುದ್ದು ಮಧ್ಯಪ್ರವೇಶಿಸಿ, ಗೊಂದಲಕ್ಕೆ ತಕ್ಷಣ ತೆರೆ ಎಳೆದು ರಾಜ್ಯ ನಾಯಕರು ಬೆಂಗಳೂರಿಗೆ ಮರಳಿ ಪರಿಸ್ಥಿತಿ ನಿಭಾಯಿಸುವಂತೆ ಸೂಚಿಸಿದ್ದಾರೆ.

ಜಮೀರ್ ಸೇರ್ಪಡೆ ಚರ್ಚೆ:
ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮತ್ತೆ ಸಂಪುಟಕ್ಕೆ ಸೇರ್ಪಡೆಗೊಳಿಸುವ ವಿಷಯ ಸಭೆಯಲ್ಲಿ ಸುದೀರ್ಘವಾಗಿ ಚರ್ಚೆಯಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸೋಮವಾರವೇ ಪ್ರಮಾಣವಚನ ಏಕೆ?:
ಶುಕ್ರವಾರ-ಶನಿವಾರ: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮಧ್ಯಪ್ರದೇಶ ಪ್ರವಾಸ ಮುಗಿಸಿ ಹಿಂತಿರುಗಲಿದ್ದು, ಮೈಸೂರಿನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಭಾನುವಾರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾವೇರಿ ನೀರು ಹಂಚಿಕೆ ಕುರಿತು ಕರೆಯಲಾಗಿರುವ ಪ್ರಮುಖ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸೋಮವಾರ: ರಾಜಕೀಯ ಹಾಗೂ ಆಡಳಿತಾತ್ಮಕ ವೇಳಾಪಟ್ಟಿಯನ್ನು ಪರಿಗಣಿಸಿ ಸೋಮವಾರವೇ ನೂತನ ಸಚಿವರ ಪ್ರಮಾಣವಚನಕ್ಕೆ ಸೂಕ್ತ ದಿನವೆಂದು ತೀರ್ಮಾನಿಸಲಾಗಿದೆ.

ತಮಿಳುನಾಡು ಸಿಎಂ ಭೇಟಿ ಅನಿಶ್ಚಿತ:
ಕಾವೇರಿ ಕಾಯಂ ವಿವಾದ ಹಾಗೂ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ತಮಿಳುನಾಡು ಸಿಎಂ ಸಿ. ವಿಜಯ್ ಜೋಸೆಫ್ ಅವರ ಬೆಂಗಳೂರು ಭೇಟಿ ಅನಿಶ್ಚಿತತೆಯಲ್ಲಿದ್ದು, ಅಗತ್ಯವಿದ್ದರೆ ಉಭಯ ಮುಖ್ಯಮಂತ್ರಿಗಳು ವರ್ಚುವಲ್ (ಆನ್‌ಲೈನ್) ಮೂಲಕ ಮಾತುಕತೆ ನಡೆಸುವ ಸಾಧ್ಯತೆಯಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನದಲ್ಲಿ ಜಾತಿ ಉಳಿದಿರುವವರೆಗೂ, ಜಾತ್ಯತೀತತೆ ಕೇವಲ ಮುಖವಾಡ ​ ಅಂತರಂಗದ ಬೇಸಾಯವೇ ಬದುಕಿನ ಸಾರ್ಥಕ ಬೆಳೆ*ಶಿಕ್ಷಕ-ರಕ್ಷಕ*ಆತ್ಮಹತ್ಯೆಗೆ ಶರಣಾದ ರೈತ ದಂಪತಿ ಮನೆಗೆ ಕುಮಾರಸ್ವಾಮಿ ಭೇಟಿ- ಸಾಂತ್ವನ, ಧೈರ್ಯ ತುಂಬಿದ ನಾಯಕಗೋಪೂಜೆ ಮತ್ತು ರಾಗಿಹುಲ್ಲು ವಿತರಣೆಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ದಿಗ್ವಿಜಯ್ ಸಿಂಗ್ ಭೇಟಿ:ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ ಅಧಿಕೃತವಾಗಿ ಉದ್ಘಾಟನೆ: ಎಂ.ಬಿ. ಪಾಟೀಲ್ ಹರ್ಷ​‘ಕಾಂಗ್ರೆಸ್‌ನ 6ನೇ ಗ್ಯಾರೆಂಟಿ ಅಂದರೆ ಕೃಷಿ ಕಾರ್ಮಿಕರಿಗೆ ಗುಳೆ ಗ್ಯಾರೆಂಟಿ’: ಆರ್‌. ಅಶೋಕ್ ತೀವ್ರ ವಾಗ್ದಾಳಿ!ಕಾಂಗ್ರೆಸ್ ಸರ್ಕಾರ ‘ಮನೆಗೆ ಮಾರಿ, ಪರರಿಗೆ ಉಪಕಾರಿ’: ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆತಮಿಳುನಾಡಿಗೆ ಕಾವೇರಿ ನೀರು ಹರಿಸಲು ಪ್ರಾಧಿಕಾರದ ಆದೇಶ: ರಾಜ್ಯದ ಹಿತ ಕಾಯುವಲ್ಲಿ ಕಾಂಗ್ರೆಸ್‌ಸರ್ಕಾರ ವಿಫಲ - ಸಿ.ಟಿ. ರವಿ ಆಕ್ರೋಶ