Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ವಲಸಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ- ಗೃಹ ಸಚಿವ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರ ಅಕ್ರಮ ವಲಸಿಗರ ಪತ್ತೆಹಚ್ಚಲು ವಿಶೇಷ ಕಾರ್ಯಾಚರಣೆ ಆರಂಭಿಸಿದೆ.
ಬಾಂಗ್ಲಾದೇಶ ಮತ್ತು ಇತರ ದೇಶಗಳಿಂದ ಅನಧಿಕೃತವಾಗಿ ನೆಲೆಸಿರುವ ವಿದೇಶಿಯರನ್ನು ಗುರುತಿಸುವುದು ಕಾರ್ಯಾಚರಣೆಯ ಮುಖ್ಯ ಉದ್ದೇಶವಾಗಿದೆ. ರಾಜ್ಯ ಸರ್ಕಾರ ಹೈಕೋರ್ಟ್‌ ಸೂಚನೆ ನಂತರ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈ ಕಾರ್ಯಕ್ಕೆ ಮುಂದಾಗಿ ಈಗಾಗಲೇ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.


ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಪರಮೇಶ್ವರ್, ರಾಜ್ಯಾದ್ಯಂತ ಅನಧಿಕೃತವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿಗರು ಮತ್ತು ವಿದೇಶಿಯರನ್ನು ಹುಡುಕಲು ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.
ಈ ಹಿಂದೆ
370 ಜನರನ್ನು ಗಡೀಪಾರು ಮಾಡಲಾಗಿತ್ತು ಎಂದು ಸದನದಲ್ಲಿ ಉತ್ತರ ನೀಡಿದ್ದನ್ನೂ ಈ ವೇಳೆ ಅವರು ಉಲ್ಲೇಖಿಸಿದರು.


ಎಫ್‌ಆರ್‌ಒ (ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ) ದಾಖಲೆಗಳಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಅನಧಿಕೃತ ವಲಸಿಗರು ಕಾಣಸಿಗದಿರುವುದರಿಂದ ಸರ್ಕಾರವು ಈ ವಿಶೇಷ ಡ್ರೈವ್ ಮೂಲಕ ಅವರನ್ನು ಪತ್ತೆಹಚ್ಚಲು ಮುಂದಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST