ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸರ್ಕಾರ ಆದೇಶದಂತೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.
ಹೋಂಸ್ಟೇ ಮಾಲೀಕರು ನೋಂದಣಿಗೆ ಅವಶ್ಯಕವಿರುವ ಅಗತ್ಯ ದಾಖಲೆಗಳ ಮಾಹಿತಿಯೊಂದಿಗೆ https://portal.karnatakatourism.org/login ಇಲ್ಲಿ ಆನ್‍ಲೈನ್ ಮೂಲಕ ನೋಂದಣಿ ಮಾಡಬಹುದು.
ನೋಂದಣಿ ಮಾಡಿಕೊಂಡು ಅನುಮೋದನೆ ಪಡೆಯದ ಹೋಂಸ್ಟೇ ಮಾಲೀಕರ ವಿರುದ್ದ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.



