Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಧ್ಯಾನಸ್ಥ ಸ್ಥಿತಿಯಲ್ಲಿದ್ದರೆ ಬರವಣಿಗೆ ಸಾಧ್ಯ: ಜೋಗಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪತ್ರಕರ್ತ ವೃತ್ತಿಯನ್ನಾಗಿಸಿಕೊಂಡವರಲ್ಲಿ ಬಹಳಷ್ಟು ಜನರು ಪ್ರವೃತ್ತಿಯಾಗಿ ಸಾಹಿತ್ಯ ರಚನೆಯಲ್ಲಿಯೂ ತೊಡಗಿಸಿಕೊಂಡಿರುವುದು ಮಹತ್ವದ ಬೆಳವಣಿಗೆ ಎಂದು ಸಾಹಿತಿ ಜೋಗಿ ಅಭಿಪ್ರಾಯಪಟ್ಟರು.


ನಯನ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಪ್ರಕಾಶ್ ಜಿ. ಅವರು ರಚಿಸಿದ ನನ್ಸಿರಿ ಕಾದಂಬರಿ ಬಿಡುಗಡೆಗೊಳಿಸಿ ಅವರು ಮಾತನಾಡಿದ ಅವರು, ಸಾಹಿತ್ಯದ ಬರವಣಿಗೆಯಲ್ಲಿ ತೊಡಗಿಸಿಕೊಂಡವರಲ್ಲಿ ಶಿಕ್ಷಕರು ಮತ್ತು ಪತ್ರಕರ್ತರ ಸಂಖ್ಯೆ ಹೆಚ್ಚಿದೆ ಎಂದರು.


ಬೂಕರ್ ಪ್ರಶಸ್ತಿಗೆ ಪಾತ್ರರಾದ ಬಾನುಮುಷ್ತಾಕ್, ಅವರ ಕೃತಿಯನ್ನು ಇಂಗ್ಲೀಷ್‌ಗೆ ಅನುವಾದಿಸಿದ ದೀಪಾಭಾಸ್ತಿ ಅವರು ಇಬ್ಬರೂ ಪತ್ರಕರ್ತರು ಎನ್ನುವುದನ್ನು ಸಾಹಿತ್ಯಲೋಕ ಗಮನಿಸುತ್ತಿದೆ ಎಂದರು.


ಸಾಹಿತ್ಯಕ್ಕೆ ಭಿನ್ನ ಬರಹಗಳು ಹೆಚ್ಚೆಚ್ಚು ಬರಬೇಕೆಂದರೆ ಉತ್ತಮ ಭಾಷಾ ಸಂವಹನ ಕೌಶಲ್ಯ ಹೊಂದಿರುವ ವರದಿಗಾರರು ಬರವಣಿಗೆಯಲ್ಲಿ ತೊಡಗಿಸಿಕೊಳ್ಳಬೇಕು. ಧ್ಯಾನಸ್ಥ ಸ್ಥಿತಿಯಲ್ಲಿದ್ದರೆ ಮಾತ್ರವೇ ಬರವಣಿಗೆ ಮಾಡಲು ಸಾಧ್ಯ. ನಿತ್ಯವೂ ಓದು ಮತ್ತು ಬರೆಯುವ ಹವ್ಯಾಸವನ್ನು ತಪ್ಪದೇ ರೂಡಿಸಿಕೊಳ್ಳಬೇಕು ಎಂದು ಹೇಳಿದರು.


ವಿಜಯ ಕರ್ನಾಟಕ ಸಂಪಾದಕ ಸುದರ್ಶನ ಚನ್ನಂಗಿಹಳ್ಳಿ ಮಾತನಾಡಿ, ತಾವು ನೋಡಿದ ಸಂಗತಿಗಳನ್ನು, ಸಮಾಜದಲ್ಲಿ ಆಗುತ್ತಿರುವ ಬದಲಾವಣೆ, ತಲ್ಲಣಗಳನ್ನು ನನ್ಸಿರಿ ಕಾದಂಬರಿ ರೂಪಕ್ಕೆ ತರುವಲ್ಲಿ ಪ್ರಕಾಶ್ ಉತ್ತಮ ಪ್ರಯತ್ನ ಮಾಡಿದ್ದಾರೆ ಎಂದರು.


ಕರ್ನಾಟಕ ಕಾರ್ಯನಿರ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಕ್ರೀಯಾಶೀಲ ವರದಿಗಾರರಾಗಿರುವ ಪ್ರಕಾಶ್, ಬರವಣಿಗೆಯ ಮೂಲಕ ಸಾಹಿತ್ಯ ಲೋಕಕ್ಕೂ ತೆರೆದುಕೊಂಡಿದ್ದಾರೆ. ಅವರಿಂದ ಇನ್ನಷ್ಟು ಉತ್ತಮ ಕೃತಿಗಳು ಬರಲಿ ಎಂದು ಆಶಿಸಿದರು.

ಜನಮಿತ್ರ ಪತ್ರಿಕೆ ಸಂಪಾದಕ ಮತ್ತು ಕೆಯುಡಬ್ಲೂಕೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಬಿ. ಮದನಗೌಡ, ರವಿ ನಾಕಲಗೋಡು ಅವರು ಪ್ರಕಾಶ್ ಪ್ರಯತ್ನಕ್ಕೆ ಶುಭ ಕೋರಿದರು.


ಪತ್ರಕರ್ತೆ ವಿದ್ಯಾರಶ್ಮಿ ಪೆಲತ್ತಡ್ಕ ಅವರು ನನ್ಸಿರಿ ಕೃತಿಯನ್ನು ಪರಿಚಯಿಸಿದರು.  ಕೃತಿ ಕತೃ ಪ್ರಕಾಶ್ ಮಾತನಾಡಿ, ಇದು ತಮ್ಮ ಚೊಚ್ಚಲ ಪ್ರಯತ್ನವಾಗಿದ್ದು, ಈ ನಿಟ್ಟಿನಲ್ಲಿ ಸಹಕಾರ ನೀಡಿ, ಬೆನ್ನು ತಟ್ಟಿದ ಎಲ್ಲರಿಗೂ ಧನ್ಯವಾದ ತಿಳಿಸಿದರು. ಹಿರಿಯ ಪತ್ರಕರ್ತರಾದ ತಿಮ್ಮಪ್ಪಭಟ್ ಸೇರಿದಂತೆ ಹಲವು ಹಿರಿಯ ಪತ್ರಕರ್ತರು ಶುಭ ಹಾರೈಸಿದರು. 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!