Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ತುಮಕೂರಿಗೆ ಮೆಟ್ರೋ ಬಂದರೆ ಬೆಂಗಳೂರಿನ ಒತ್ತಡ ತಗ್ಗಲಿದೆ-ಪರಮೇಶ್ವರ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು-ತುಮಕೂರು ಮೆಟ್ರೋ ಯೋಜನೆ ಕುರಿತು ಸಂಸದ ತೇಜಸ್ವಿ ಸೂರ್ಯ ಅಪಸ್ವರ ಎತ್ತಿರುವುದು ಸರಿಯಲ್ಲ ಅವರಿಗೆ ಈ ಯೋಜನೆ ಕುರಿತು ಗಮನದಲ್ಲಿಲ್ಲ. ಇದೇ ಕಾರಣದಿಂದ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಗೃಹ ಸಚಿವ ಡಾ‌. ಜಿ. ಪರಮೇಶ್ವರ್ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತುಮಕೂರಿನಿಂದ ನಿತ್ಯ ಸಾವಿರಾರು ಜನರು ಪ್ರಯಾಣ ಮಾಡುತ್ತಿದ್ದಾರೆ.


ನೆಲಮಂಗಲ, ದಾಬಸ್‌ಪೇಟೆ, ಕ್ಯಾತ್ಸಂದ್ರ ವೇಗವಾಗಿ ಬೆಳೆಯುತ್ತಿವೆ. ಕೈಗಾರಿಕೆ ಉದ್ದೇಶದಿಂದ ಜನರ ಸಂಚಾರ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಒತ್ತಡ ಜಾಸ್ತಿ ಇದೆ. ನೀರಿಗೆ ಕಷ್ಟ, ಓಡಾಡೋಕೆ ಟ್ರಾಫಿಕ್ ಸಮಸ್ಯೆ ಇದೆಲ್ಲ ನೋಡಿಕೊಂಡು ಆ ಕಡೆ ಜೀವನ ನಡೆಸುತ್ತಿದ್ದಾರೆ ಎಂದು ಸಚಿವರು ಹೇಳಿದರು.

20 ಸಾವಿರ ಎಕರೆಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ತುಮಕೂರಿನಲ್ಲಿ ನಿರ್ಮಿಸಲಾಗಿದೆ. ಈಗಾಗಲೇ 200 ಕೈಗಾರಿಕೆಗಳು ಬಂದಿವೆ. ಫುಡ್‌ಪಾರ್ಕ್, ಟೈಮೆಕ್ ಜಪಾನೀಸ್ ಫ್ಯಾಕ್ಟರಿ, ಜಪಾನೀಸ್ ಟೌನ್‌ಶಿಪ್‌ಗೆ ಜಾಗ ಕೊಟ್ಟಿದ್ದೇವೆ. ಇಷ್ಟು ವೇಗವಾಗಿ ಬೆಳೆಯುತ್ತಿರುವಾಗ ಸಂಪರ್ಕ (ಕನೆಕ್ಟಿವಿಟಿ) ವ್ಯವಸ್ಥೆ ಬೇಕಲ್ಲವೇ ಎಂದು ಪರಮೇಶ್ವರ್ ಪ್ರಶ್ನಿಸಿದರು.


ಸಾಕಷ್ಟು ಸಂಖ್ಯೆಯಲ್ಲಿ ಮೆಟ್ರೋ, ರೈಲು ಸಂಪರ್ಕ ಇದ್ದರೆ ಬೆಂಗಳೂರು ರಸ್ತೆ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ರಾಮನಗರ, ಕೋಲಾರ, ತುಮಕೂರು ನಗರಗಳನ್ನು ಬೆಳೆಸಿದರೆ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂದು ಸಚಿವರು ತಿಳಿಸಿದರು.

ತುಮಕೂರಿಗೆ ಎರಡು ವರ್ಷದ ಹಿಂದೆಯೇ ಮೆಟ್ರೋ ಯೋಜನೆ ತೆಗೆದುಕೊಂಡು ಹೋಗಬೇಕು ಎಂದು ಪ್ರಸ್ತಾಪ ಮಾಡಿದ್ದೆ. ಮುಖ್ಯಮಂತ್ರಿಗಳು ಫಿಸಿಬಲಿಟಿ ಸ್ಟಡಿ ಮಾಡುವುದಾಗಿ 2024ರ ಬಜೆಟ್‌ನಲ್ಲಿ ಘೋಷಿಸಿದ್ದರು. ಫಿಸಿಬಲಿಟಿ ವರದಿಯಲ್ಲಿ ತುಮಕೂರು ಮೆಟ್ರೋ ಯೋಜನೆ ಬಗ್ಗೆ ಪಾಸಿಟಿವ್ ಆಗಿ ಕೊಟ್ಟಿದ್ದಾರೆ. ಎಲ್ಲರೊಂದಿಗೆ ಚರ್ಚೆ ಮಾಡಿ ಡಿಪಿಆರ್ ಮಾಡಲು ಅನುಮತಿ ಕೊಟ್ಟಿದ್ದಾರೆ ಎಂದು ಡಾ.ಪರಮೇಶ್ವರ್ ತಿಳಿಸಿದರು.

ಎರಡು-ಮೂರು ಕಂಪನಿಗಳು ಪಿಪಿಪಿ ಮಾದರಿಯಲ್ಲಿ ಹೂಡಿಕೆ ಮಾಡಲು ಈಗಾಗಲೇ ಮುಂದೆ ಬಂದಿದ್ದು ಕತಾರ್ ಮೂಲದ ಕಂಪನಿಯವರು ಮುಖ್ಯಮಂತ್ರಿಯವರಿಗೆ ಅಧಿಕೃತವಾಗಿ ಪತ್ರ ನೀಡಿದ್ದಾರೆ.


ಇಷ್ಟೆಲ್ಲ ಆಗಿರುವಾಗ, ಸಂಸದ ತೇಜಸ್ವಿ ಸೂರ್ಯ ಏನೂ ಅರಿಯದೆ, ಯಾವ ಉದ್ದೇಶಕ್ಕಾಗಿ ಆ ರೀತಿಯಾಗಿ ಮಾತಾಡಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ‌. ಈ ಬಗ್ಗೆ ನಾನು ಅವರೊಂದಿಗೆ ಮಾತಾಡುತ್ತೇನೆ‌. ಇದು ಸಂಘರ್ಷದ ಪ್ರಶ್ನೆಯಲ್ಲ. ನಮಗೆ ಬೇಕು-ಬೇಡದ ಪ್ರಶ್ನೆಯೂ ಅಲ್ಲ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಯೋಚನೆ ಮಾಡಬೇಕು‌ಎಂದು ಸಚಿವ ಡಾ.ಪರಮೇಶ್ವರ್​ ಹೇಳಿದರು.

ಕರ್ನಾಟಕ ಪ್ರಗತಿಯ ರಾಜ್ಯ‌. ವಿಶ್ವವೇ ಕರ್ನಾಟಕದ ಕಡೆ ನೋಡುತ್ತಿದ್ದಾರೆ. ನಾನು ಅನೇಕ ದೇಶಗಳಿಗೆ ಹೋಗಿದ್ದೇನೆ. ಟೋಕಿಯೋದಲ್ಲಿ ನರೀಟ ಏರ್‌ಪೋರ್ಟ್ 70 ಕಿ.ಮೀ. ದೂರದಲ್ಲಿದೆ. ಮಲೇಷ್ಯಾದಲ್ಲಿ ಕೌಲಲಾಂಪುರಗೆ 20 ನಿಮಿಷದಲ್ಲಿ ಹೋಗುತ್ತಾರೆ. ಆ ರೀತಿ ಪಾಸಿಟಿವ್ ಆಗಿ ಯೋಚಿಸಬೇಕು. ನೆಗಿಟಿವ್ ಆಗಿ ಯೋಚಿಸಬೇಕಿಲ್ಲ ಎಂದು ಸಚಿವರು ಮೆಟ್ರೋ ಯೋಜನೆ ಸಮರ್ಥಿಸಿಕೊಂಡರು.

ಬಿಜೆಪಿಯವರು ಅಭಿವೃದ್ಧಿ ವಿರುದ್ಧವಾಗಿದ್ದಾರೆ ಎಂದು ಏಕಾಏಕಿ ಹೇಳುವುದಿಲ್ಲ. ಅವರು ನಡೆದುಕೊಳ್ಳುವ ರೀತಿಯ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ. ಕರ್ನಾಟಕ ಅಭಿವೃದ್ಧಿಯಾಗಬೇಕು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇಂಜಿನಿಯರಿಂಗ್, ಮೆಡಿಕಲ್ ಓದಲು ಕರ್ನಾಟಕಕ್ಕೆ ಬರುತ್ತಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಇಂಜಿನಿಯರಿಂಗ್ ಕಾಲೇಜು, ಮೆಡಿಕಲ್ ಕಾಲೇಜುಗಳಿವೆ. ಅಲ್ಲಿಗೆ ಯಾಕೆ ಓದಲು ಹೋಗುವುದಿಲ್ಲ ಎಂದು ಪ್ರಶ್ನಿಸಿದ ಅವರು,
 ಕರ್ನಾಟಕದಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತದೆ. ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣ ಸಿಗುತ್ತಿದೆ ಎಂದು ಬರುತ್ತಿದ್ದಾರೆ. ಕರ್ನಾಟಕದ ಬೆಳವಣಿಗೆಯ ದೃಷ್ಟಿಯಿಂದ ನಾವು ನೋಡಬೇಕೆ ಹೊರತು, ಬೇರೆ ವಿಚಾರಗಳಿಂದಲ್ಲ ಎಂದು ಸಚಿವ ಪರಮೇಶ್ವರ್ ಹೇಳಿದರು‌.

ಮಹಿಳೆಯೊಬ್ಬರು ಕಳೆದ ಒಂದು ವರ್ಷದಿಂದ ಡಿಜಿಟಲ್ ಅರೆಸ್ಟ್ ವಂಚನೆಗೆ ಒಳಗಾಗಿದ್ದಾರೆ. ಸುಮಾರು 187 ಬಾರಿ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆಯಾಗಿದೆ. ಇಷ್ಟೆಲ್ಲ ವಂಚನೆಯಾದ ಬಳಿಕ ಎಚ್ಚೆತ್ತುಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ ಎಂದರೆ, ಸೈಬರ್ ವಂಚಕರು ಎಷ್ಟರ ಮಟ್ಟಿಗೆ ಹೆದರಿಸಬಹುದು. ಈ ಪ್ರಕರಣವನ್ನೂ ಗಂಭೀರವಾಗಿ ಪರಿಗಣಿಸಿದ್ದೇವೆ. ರಾಜ್ಯದಲ್ಲಿ ಇಷ್ಟು ದೊಡ್ಡ ಪ್ರಮಾಣದ ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆ ಇದೇ‌ಮೊದಲು. ಬೆಂಗಳೂರಿನಲ್ಲಿದ್ದುಕೊಂಡು ಅಮೆರಿಕಾದಲ್ಲಿದ್ದವರಿಗೆ ಡಿಜಿಟಲ್ ಅರೆಸ್ಟ್ ಸೈಬರ್ ವಂಚನೆ ಮಾಡಿರುವ ಪ್ರಕರಣಗಳ ಆರೋಪಿಗಳನ್ನು ಪತ್ತೆ ಹಚ್ಚಿದ್ದೇವೆ. ಈ ಪ್ರಕರಣವನ್ನು ಪತ್ತೆಹಚ್ಚುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!