Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹಿರಿಯೂರು ತಾಲೂಕಿನ ಕೆರೆಯಲ್ಲಿ ಅಕ್ರಮ ಮಣ್ಣು ಸಾಗಾಟ ವಾಹನಗಳು ಪೊಲೀಸ್ ವಶಕ್ಕೆ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ವಡ್ಡನಹಳ್ಳಿ ಗ್ರಾಮದ ಕೆರೆಯಲ್ಲಿ ಸರ್ಕಾರದಿಂದ ಯಾವುದೇ ಅಧಿಕೃತ ಪರವಾನಗೆ ಪಡೆಯದೆ, ಕಳ್ಳತನದಿಂದ ಅಕ್ರಮವಾಗಿ ಮಣ್ಣು ತುಂಬಿ ಸಾಗಿಸುತ್ತಿದ್ದ ವಾಹನಗಳನ್ನು ವಶಪಡಿಸಿಕೊಂಡು, ಚಾಲಕರು ಮತ್ತು ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

​ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕುಶಾಲ್ ಚೌಕ್ಸ್ ಅವರ ಸೂಚನೆ ಹಾಗೂ ಹಿರಿಯೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಗೋಪಾಲಕೃಷ್ಣ ಬಿ.ಎನ್. ಅವರ ಮಾರ್ಗದರ್ಶನದಲ್ಲಿ ವಿಶೇಷ ಪೊಲೀಸ್ ತಂಡವು ಈ ದಾಳಿ ನಡೆಸಿದೆ.

ಹಿರಿಯೂರು ನಗರ ಪೊಲೀಸ್ ನಿರೀಕ್ಷಕರಾದ ಮೊಹಮ್ಮದ್ ಸಿರಾಜ್ (ಹಿ.ಗ್ರಾ.ಠಾಣೆ ಪ್ರಭಾರೆ) ಮತ್ತು ಪಿಎಸ್‌ಐ ಮಹೇಶ್ ಗೌಡ ಅವರ ನೇತೃತ್ವದ ತಂಡದಲ್ಲಿದ್ದ ಸಿಬ್ಬಂದಿ ವೆಂಕಟೇಶ್, ಹನೀಫ್ ಹಡಗಲಿ, ಸಿದ್ದಪ್ಪ, ನವೀನ್ ಕುಮಾರ್, ಜಾಫರ್ ಸಾಧಿಕ್ ಹಾಗೂ ಶ್ರೀಧರ್ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. 

​ವಡ್ಡನಹಳ್ಳಿ ಕೆರೆಯ ಅಂಗಳದಲ್ಲಿ ಸರ್ಕಾರದ ಬೊಕ್ಕಸಕ್ಕೆ ತೆರಿಗೆ ಪಾವತಿಸದೆ, ಅಕ್ರಮ ಲಾಭಕ್ಕಾಗಿ ಇಟಾಚಿ ಮೂಲಕ ಟಿಪ್ಪರ್ ಲಾರಿಗಳಿಗೆ ಮಣ್ಣು ತುಂಬಿ ಬೇರೆಡೆಗೆ ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು, ಅಕ್ರಮ ಸಾಗಾಟಕ್ಕೆ ಬಳಸುತ್ತಿದ್ದ KA 03 AP 9024, RJ 19 GJ 7587, RJ 19 GJ 7588, KA 03 AP 9022 ಸಂಖ್ಯೆಯ ಟಿಪ್ಪರ್ ಲಾರಿಗಳು, KA 06 AC 7972 ಜೀಪ್ ಹಾಗೂ ಹಿಟಾಚಿ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

​ಈ ಕುರಿತು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೊ.ನಂ. 369/2026, ಕಲಂ: 303(2) BNS-2023 ಮತ್ತು 42, 43, 44 KMMCR-1994 ರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ. ಸಮಯೋಚಿತವಾಗಿ ಕಾರ್ಯನಿರ್ವಹಿಸಿ ಅಕ್ರಮ ತಡೆದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಂತ್ರಜ್ಞಾನದ ಅತಿರೇಕ -ಸಾಮಾಜಿಕ ಸಾಮರಸ್ಯಕ್ಕೆ ಗಂಡಾಂತರ— ಜಾಗೃತಿ ಅಗತ್ಯಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಆಯುಧ ಪೂಜೆಕೆಪಿಸಿಸಿ ನಿಧಿಗೆ ಶಾಲೂ-ಹಾರದ ಬದಲು ದೇಣಿಗೆ ನೀಡಿ: ಬಿ.ಕೆ. ಹರಿಪ್ರಸಾದ್ ಕರೆ ಹಿರಿಯೂರು ತಾಲೂಕಿನಲ್ಲಿ ಮಳೆ ಅಬ್ಬರ: ಬಬ್ಬೂರು ಸಮೀಪದ ಜಮೀನಿನಲ್ಲಿ ನಿಂತ ಮಳೆ ನೀರುಸಮಾನತೆಗಾಗಿ ಸಹಭೋಜನ: ಅರಿವು ಭಾರತದಿಂದ ವಿಶಿಷ್ಟ ಚಿಂತನೆ–ರಾಹುಲ್ ಗಾಂಧಿ ವಿರುದ್ಧ ಗರ್ಭಿಣಿ ಪತ್ರಕರ್ತೆಯ ಗಂಭೀರ ಆರೋಪ: ಪೊಲೀಸ್ ಆಯುಕ್ತರಿಗೆ ಕ್ರಿಮಿನಲ್ ದೂರುಸರ್ಕಾರಿ ನೌಕರರು ಹಾಗೂ ಗುತ್ತಿಗೆ ಸಿಬ್ಬಂದಿಗೆ ರಾತ್ರಿ ಹಾಜರಾತಿ ಕಡ್ಡಾಯ: ರಾಜ್ಯ ಸರ್ಕಾರದ ಮಹತ್ವದ ಆದೇಶಮಹತ್ವದ ಆಡಳಿತಾತ್ಮಕ ಸುಧಾರಣೆ: ಸಕಾಲ ವ್ಯಾಪ್ತಿಗೆ ಎಲ್ಲಾ ಸರ್ಕಾರಿ ಸೇವೆಗಳು ಹಾಗೂ ಆರ್‌ಟಿಐ ಆನ್‌ಲೈನ್ ಕಡ್ಡಾಯನೈಸ್ ರಸ್ತೆಯಲ್ಲಿ ಕೆಮಿಕಲ್ ಟ್ಯಾಂಕರ್ ಸ್ಫೋಟ: ಮುಗಿಲು ಮುಟ್ಟಿದ ದಟ್ಟ ಕಪ್ಪು ಹೊಗೆ, ಟ್ರಾಫಿಕ್ ಜಾಮ್!