ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ನಗರದ ಹೊರವಲಯದ ನರಹರಿ ನಗರದಲ್ಲಿರುವ ಶ್ರೀನರಹರಿ ಸದ್ಗುರು ಆಶ್ರಮದ ಶ್ರೀನರಹರೇಶ್ವರ ದೇವಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ 'ಮಾತೃಶ್ರೀ ಪ್ರಸಾದ ನಿಲಯ'ದ ಉದ್ಘಾಟನಾ ಸಮಾರಂಭವು ಅಕ್ಟೋಬರ್ 12ರ ಸೋಮವಾರ ಬೆಳಿಗ್ಗೆ 9 ಗಂಟೆಯಿಂದ ವಿಜೃಂಭಣೆಯಿಂದ ನಡೆಯಲಿದೆ.
ಪೂಜ್ಯ ಶಾಂತಾರಾಂ ಸ್ವಾಮಿಗಳು, ಮಾತೃಶ್ರೀ ವಿಜಯಲಕ್ಷ್ಮೀ ಹಾಗೂ ಶ್ರೀನರಹರಿ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಪೂಜ್ಯ ಡಾ. ವೈ. ರಾಜಾರಾಮ್ ಗುರುಗಳು ಮತ್ತು ಅವರ ಸಹೋದರರ ದಿವ್ಯ ಸಾನಿಧ್ಯದಲ್ಲಿ ಈ ಕಾರ್ಯಕ್ರಮ ಜರುಗಲಿದೆ.
ಉದ್ಘಾಟನಾ ಸಮಾರಂಭದ ಅಂಗವಾಗಿ ಗೋ ಪ್ರವೇಶ, ಗೃಹ ಪ್ರವೇಶ, ವಿವಿಧ ಹೋಮಗಳು, ಸಭಾ ಕಾರ್ಯಕ್ರಮ ಹಾಗೂ ಅನ್ನಪ್ರಸಾದ ವಿನಿಯೋಗ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ. ಭಕ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀನರಹರಿ ಸೇವಾ ಪ್ರತಿಷ್ಠಾನದ ಪ್ರಕಟಣೆಯಲ್ಲಿ ಕೋರಲಾಗಿದೆ.




