Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

'ಇಂಡಿಯಾ' ಮೈತ್ರಿಕೂಟದ ಬೃಹತ್ ಪ್ರತಿಭಟನಾ ಮೆರವಣಿಗೆ: ಪ್ರಜಾಪ್ರಭುತ್ವ ರಕ್ಷಣೆಗೆ ಆಗ್ರಹ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು, ಸೋಮವಾರ ದೆಹಲಿಯಲ್ಲಿ 'ದಿಲ್ಲಿ ಚಲೋ' ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿವೆ. 'ಮತ ಕಳ್ಳತನ'ವನ್ನು ತಡೆಯುವಂತೆ ಆಗ್ರಹಿಸಿ ಸುಪ್ರೀಂ ಕೋರ್ಟ್‌ವರೆಗೆ ಈ ಮೆರವಣಿಗೆ ನಡೆಯುತ್ತಿದೆ.

ಕಾಂಗ್ರೆಸ್ ಕರೆ ನೀಡಿರುವ ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಶಶಿ ತರೂರ್, ಸಚಿನ್ ಪೈಲಟ್ ಮತ್ತು ಮುಕುಲ್ ವಾಸ್ನಿಕ್, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಹಾಗೂ ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ತೇಜಸ್ವಿ ಯಾದವ್ ಸೇರಿದಂತೆ 'ಇಂಡಿಯಾ' ಮೈತ್ರಿಕೂಟದ ಹಲವು ಪ್ರಮುಖ ನಾಯಕರು ಭಾಗವಹಿಸಿದ್ದಾರೆ.

ಸಿಜೆಐ ಭೇಟಿಗೆ ನಿರಾಕರಣೆ:
ಇದಕ್ಕೂ ಮುನ್ನ, ವಿರೋಧ ಪಕ್ಷಗಳ ನಿಯೋಗವು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಲು ಸಮಯ ಕೋರಿತ್ತಾದರೂ, ಅದನ್ನು ಸಿಜೆಐ ನಿರಾಕರಿಸಿದ್ದಾರೆ. ಬದಲಿಗೆ, ನೇರವಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಪ್ರತಿಪಕ್ಷಗಳು ಪ್ರಸ್ತಾಪಿಸಲು ಉದ್ದೇಶಿಸಿರುವ ವಿಷಯಗಳು ಈಗಾಗಲೇ ನ್ಯಾಯಾಲಯದ ಪರಿಶೀಲನೆಯಲ್ಲಿವೆ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಅವುಗಳ ವಿಚಾರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾಪ್ರಭುತ್ವಕ್ಕಾಗಿ ಮೆರವಣಿಗೆ:
'ಇಂಡಿಯಾ' ಮೈತ್ರಿಕೂಟದ ಸಂಸದರು ಇಂದು ಮೊದಲು 'ಕಾನ್ಸ್ಟಿಟ್ಯೂಷನ್ ಕ್ಲಬ್'ನಲ್ಲಿ ಜಮಾಯಿಸಿದರು. ನಂತರ ಸುಪ್ರೀಂ ಕೋರ್ಟ್‌ವರೆಗೆ ತಮ್ಮ ಪ್ರತಿಭಟನಾ ಮೆರವಣಿಗೆ ನಡೆಸಲು ಬಾರಾಖಂಬ ರಸ್ತೆ ಜಂಕ್ಷನ್‌ನತ್ತ ತೆರಳಿದರು. ಬಾರಾಖಂಬ ರಸ್ತೆಯಿಂದ ಸುಪ್ರೀಂ ಕೋರ್ಟ್‌ವರೆಗೆ "ಪ್ರಜಾಪ್ರಭುತ್ವಕ್ಕಾಗಿ ಮೆರವಣಿಗೆ"ಯನ್ನು ಆರಂಭಿಸಿರುವ ನಾಯಕರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ನ್ಯಾಯಾಲಯದಲ್ಲಿ ಅಧಿಕೃತವಾಗಿ ಅರ್ಜಿ ಸಲ್ಲಿಸಲಿದ್ದಾರೆ.

ದೆಹಲಿಯಲ್ಲಿ ಬಿಗಿ ಭದ್ರತೆ, ರಾಹುಲ್ ಗಾಂಧಿ ಆಕ್ಷೇಪ:
ಸುಪ್ರೀಂ ಕೋರ್ಟ್‌ಗೆ ಮೈತ್ರಿಕೂಟವು ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ಮೆರವಣಿಗೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ವ್ಯಾಪಕ ಭದ್ರತಾ ನಿರ್ಬಂಧಗಳನ್ನು ವಿಧಿಸಲಾಗಿದೆ. ಇದನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಪ್ರಶ್ನಿಸಿದ್ದಾರೆ. ಸಾಮಾನ್ಯ ಜನರ ಓಡಾಟವನ್ನು ಯಾಕೆ ನಿರ್ಬಂಧಿಸಲಾಗುತ್ತಿದೆ ಎಂದು ಪ್ರಶ್ನಿಸಿದ ಅವರು, "ಇಂದು ದೆಹಲಿಯನ್ನು ಯಾಕೆ ಜೈಲಿನಂತೆ ಮಾಡಲಾಗಿದೆ? ದೆಹಲಿ ಒಂದು ಕೋಟೆಯಂತಾಗಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಆಯುಧ ಪೂಜೆಕೆಪಿಸಿಸಿ ನಿಧಿಗೆ ಶಾಲೂ-ಹಾರದ ಬದಲು ದೇಣಿಗೆ ನೀಡಿ: ಬಿ.ಕೆ. ಹರಿಪ್ರಸಾದ್ ಕರೆ ಹಿರಿಯೂರು ತಾಲೂಕಿನಲ್ಲಿ ಮಳೆ ಅಬ್ಬರ: ಬಬ್ಬೂರು ಸಮೀಪದ ಜಮೀನಿನಲ್ಲಿ ನಿಂತ ಮಳೆ ನೀರುಸಮಾನತೆಗಾಗಿ ಸಹಭೋಜನ: ಅರಿವು ಭಾರತದಿಂದ ವಿಶಿಷ್ಟ ಚಿಂತನೆ–ರಾಹುಲ್ ಗಾಂಧಿ ವಿರುದ್ಧ ಗರ್ಭಿಣಿ ಪತ್ರಕರ್ತೆಯ ಗಂಭೀರ ಆರೋಪ: ಪೊಲೀಸ್ ಆಯುಕ್ತರಿಗೆ ಕ್ರಿಮಿನಲ್ ದೂರುಸರ್ಕಾರಿ ನೌಕರರು ಹಾಗೂ ಗುತ್ತಿಗೆ ಸಿಬ್ಬಂದಿಗೆ ರಾತ್ರಿ ಹಾಜರಾತಿ ಕಡ್ಡಾಯ: ರಾಜ್ಯ ಸರ್ಕಾರದ ಮಹತ್ವದ ಆದೇಶಮಹತ್ವದ ಆಡಳಿತಾತ್ಮಕ ಸುಧಾರಣೆ: ಸಕಾಲ ವ್ಯಾಪ್ತಿಗೆ ಎಲ್ಲಾ ಸರ್ಕಾರಿ ಸೇವೆಗಳು ಹಾಗೂ ಆರ್‌ಟಿಐ ಆನ್‌ಲೈನ್ ಕಡ್ಡಾಯನೈಸ್ ರಸ್ತೆಯಲ್ಲಿ ಕೆಮಿಕಲ್ ಟ್ಯಾಂಕರ್ ಸ್ಫೋಟ: ಮುಗಿಲು ಮುಟ್ಟಿದ ದಟ್ಟ ಕಪ್ಪು ಹೊಗೆ, ಟ್ರಾಫಿಕ್ ಜಾಮ್!1,000 ಗ್ರಾಮೀಣ ಬಸ್ ತಂಗುದಾಣಗಳ ನಿರ್ಮಾಣಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆಬಿ.ಎಸ್. ಯಡಿಯೂರಪ್ಪ ಸ್ಫೋಟಕ ಹೇಳಿಕೆ: ಸಿದ್ದರಾಮಯ್ಯ ವಿರುದ್ಧ ಪಿತೂರಿ ನಡೆಸಿ ಕೆಳಗಿಳಿಸಲಾಗಿದೆ