ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಪ್ರಜಾಪ್ರಭುತ್ವ ಎಂದರೆ ಕೇವಲ ಚುನಾವಣೆ ನಡೆಯುವುದು ಅಥವಾ ಮತಚಲಾಯಿಸುವುದು ಮಾತ್ರವಲ್ಲ. ಜನರ ಭಾಗವಹಿಸುವಿಕೆ, ಸಮಾನತೆ, ಸ್ವಾತಂತ್ರ್ಯ, ನ್ಯಾಯ, ಮಾನವ ಹಕ್ಕುಗಳ ಗೌರವ ಎಂದು ಎನ್.ಎಸ್.ಎಸ್ ಅಧಿಕಾರಿ ಡಾ.ಎಂ ಚಿಕ್ಕಣ್ಣ ಹೇಳಿದರು.
ಶ್ರೀ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದಲ್ಲಿ ಪ್ರಜಾಪ್ರಭುತ್ವ ದಿನ ಹಾಗೂ ಯುವ ಸಂಸತ್ತು ಕುರಿತು ಕಾರ್ಯಕ್ರಮದಲ್ಲಿ ಭಾಗವಹಿಸಿ
ಮಾತನಾಡಿದ ಅವರು ಭಾರತವು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಒಂದಾಗಿದೆ, ನಮ್ಮ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯದ ಮೌಲ್ಯಗಳನ್ನು ನೀಡಿದೆ. ವಿವಿಧ ಭಾಷೆ, ಧರ್ಮ, ಜಾತಿ, ಸಂಸ್ಕೃತಿ ಮತ್ತು ಪ್ರದೇಶಗಳ ಜನರು ಒಂದಾಗಿ ಬದುಕುತ್ತಿರುವುದು ನಮ್ಮ ಪ್ರಜಾಪ್ರಭುತ್ವದ ವೈಶಿಷ್ಟ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಮ್ಶುಪಾಲ ರಾದ ಡಾ. ಎಂ. ಎಸ್. ಗೌರಪ್ಪ ಮಾತನಾಡಿ ಪ್ರಜಾಪ್ರಭುತ್ವದ ಯಶಸ್ಸು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕನೂ ತನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿದಾಗ ಮಾತ್ರ ಪ್ರಜಾಪ್ರಭುತ್ವ ಬಲಿಷ್ಠವಾಗುತ್ತದೆ.ನಾವು ನಮ್ಮ ಹಕ್ಕುಗಳನ್ನು ತಿಳಿದುಕೊಳ್ಳುವುದರ ಜೊತೆಗೆ ನಮ್ಮ ಕರ್ತವ್ಯಗಳನ್ನೂ ಅರಿತುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಹರಿಪ್ರಿಯ, ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಡಾ. ನೀರಜ್ ಕುಮಾರ್ ಬೋಧಕ ಬೋಧಕೇತರ ಸಿಬ್ಬಂದಿ ಹಾಜರಿದ್ದರು.




