Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ-ಡಾ.ಹೊನ್ನೂರುಸ್ವಾಮಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳು ಭಾರತೀಯ ಕಲೆ ಮತ್ತು ವಾಸ್ತುಶಿಲ್ಪದ ಜ್ಞಾನ ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಸ್ನಾತಕೋತ್ತರ ಇತಿಹಾಸ ಮತ್ತು ಪುರಾತತ್ವ ವಿಭಾಗದ ಮುಖ್ಯಸ್ಥ  ಡಾ.ಹೊನ್ನೂರು ಸ್ವಾಮಿ ಅಭಿಪ್ರಾಯಪಟ್ಟರು.


ನಗರದ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಸ್ನಾತಕೋತ್ತರ ಸಭಾಂಗಣದಲ್ಲಿ ಮಂಗಳವಾರ ಸರ್ಕಾರಿ ಕಲಾ ಕಾಲೇಜು ಇತಿಹಾಸ ವಿಭಾಗ ಹಾಗೂ ಐಕ್ಯೂಎಸಿ  ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಭಾರತೀಯ ಕಲೆ ಮತ್ತು ವಾಸ್ತುಶಿಲ್ಪ’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೌದ್ಧ ಸ್ತೂಪಗಳು, ವಿಹಾರಗಳು ಹಾಗೂ ಚೈತ್ಯಾಲಯಗಳ ಅಧ್ಯಯನದಿಂದ ವಿವಿಧ ಧರ್ಮಗಳ ಮೂಲ ಆಶಯಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಜೆ. ಕರಿಯಪ್ಪ ಮಾಳಿಗೆ ಮಾತನಾಡಿ, ದೇವಾಲಯ ಮತ್ತು ವಾಸ್ತುಶಿಲ್ಪಗಳು ಜಾತ್ಯತೀತ ಮೌಲ್ಯಗಳನ್ನು ಒಳಗೊಂಡಿದ್ದು, ಸಮಾಜದಲ್ಲಿ ಸಾಮರಸ್ಯ ಮೂಡಿಸುವ ಕೆಲಸ ಮಾಡುತ್ತಿವೆ. ಹಾಗಾಗಿ, ಪ್ರಾಚೀನ ಪರಂಪರೆಯ ಬಗ್ಗೆ ವಿದ್ಯಾರ್ಥಿಗಳು ತೀವ್ರ ಕಳಕಳಿ ಹೊಂದಬೇಕು ಎಂದರು.

ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಬಿ. ಸುರೇಶ್ ಅವರು ಗಾಂಧಾರ ಮತ್ತು ಮಥುರಾ ಕಲೆಗಳ ವಿಶೇಷತೆ ಪರಿಚಯಿಸಿದರು. ಐಕ್ಯೂಎಸಿ ಸಂಚಾಲಕಿ ಪ್ರೊ. ತಾರಿಣಿ ಶುಭದಾಯಿನಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಧ್ಯಾಪಕರ ಸಂಘದ ಕಾರ್ಯದರ್ಶಿ ಪ್ರೊ. ಹನುಮಂತಪ್ಪ, ಡಾ. ರೇವಣಸಿದ್ದಪ್ಪ ಹಾಗೂ ಸ್ನಾತಕ ಪದವಿ ಮುಖ್ಯಸ್ಥ ಪ್ರೊ. ಮಹ್ಮದ್ ಬಾಷ ಇದ್ದರು. ಇತಿಹಾಸ ಪ್ರಾಧ್ಯಾಪಕ ಪ್ರೊ. ಬಿ. ಜಗನ್ನಾಥ ಕಾರ್ಯಕ್ರಮ ನಿರೂಪಿಸಿದರು. ಪ್ರೊ. ಎಸ್. ಬಿ. ಶಿವಪ್ರಸಾದ್ ಸ್ವಾಗತಿಸಿದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಪ್ರೀತಿ, ವಿಶ್ವಾಸ, ಸಹೋದರತ್ವ, ಆತ್ಮವಿಶ್ವಾಸ ಬೆಳೆಸುವುದೇ ಕ್ರೀಡೆಯ ಉದ್ದೇಶ ಪ್ರಾಮಾಣಿಕತೆಗೆ ಸ್ಟಿಂಗ್ ಆಪರೇಶನ್ ಭಯವೇಕೆ?:ಮನಸ್ಸಿನ ಆರೋಗ್ಯಕ್ಕೆ ಅರಿವೇ ಮೊದಲ ಚಿಕಿತ್ಸೆ:ಮೈಸೂರು ದಸರಾ ಸಂಸ್ಕೃತಿ, ಪರಂಪರೆ, ವೈಭವ  ದೃಷ್ಟಿಕೋನ ಚಿಂತನೆ ಕಾರ್ಯಕ್ರಮ ಆಯೋಜನೆವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಗೆ ಸರ್ಕಾರದಿಂದ ಆಹ್ವಾನಚಿತ್ರದುರ್ಗ ಜಿಲ್ಲೆಯ ರೈತರಿಗೆ ವಿಮಾ ಮೊತ್ತ ಶೀಘ್ರ ಬಿಡುಗಡೆಗೆ ಕೃಷಿ ಆಯುಕ್ತರಿಗೆ ಮನವಿ ಸಲ್ಲಿಸಿದ ಶಿವಲಿಂಗಪ್ಪಎನ್ ಡಿಎ ಅಭ್ಯರ್ಥಿ ಕೆ.ಎಂ ಸುರೇಶ್ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆ ಆಗುವುದು ನಿಶ್ಚಿತ-ಸಂಸದ ಕಾರಜೋಳದೇಶದ ಯುವಕರನ್ನು ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿರಾಹುಲ್ ಗಾಂಧಿ ಪ್ರಧಾನಿಯಾಗಲು ಹುಚ್ಚರಂತೆ ಓಡಾಡುತ್ತಿದ್ದಾರೆ: ಸಂಸದ ಗೋವಿಂದ್ ಕಾರಜೋಳ ವಾಗ್ದಾಳಿಅನುಭವ ಮತ್ತು ಜ್ಞಾನ ಎರಡೂ ನನ್ನಲ್ಲಿಲ್ಲ- ಸಂಸದ ಗೋವಿಂದ್ ಕಾರಜೋಳ