Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಜ.26ರಂದು ಭಾರತದ ಗಣರಾಜ್ಯೋತ್ಸವ ದಿನಾಚರಣೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ ವತಿಯಿಂದ ಇದೇ ಜ.26ರಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ನಗರದ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಭಾರತದ ಗಣರಾಜ್ಯೋತ್ಸವ ದಿನಾಚರಣೆ ಆಯೋಜಿಸಲಾಗಿದೆ.


ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ರಾಷ್ಟ್ರ ಧ್ವಜಾರೋಹಣ ಮತ್ತು ಗಣರಾಜ್ಯೋತ್ಸವ ಸಂದೇಶ ನೀಡುವರು. ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿವಹಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.

ಗೌರವಾನ್ವಿತ ಅತಿಥಿಗಳಾಗಿ ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಪಿ.ರಘು, ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜಪೀರ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಸೇರಿದಂತೆ ನಗರಸಭೆ ಸದಸ್ಯರು, ಜಿಲ್ಲೆಯ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸುವರು.

ಜಿಲ್ಲಾ ಆಡಳಿತ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ನಗರಸಭೆ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ಸಂಜೆ 6ಕ್ಕೆ ಚಿತ್ರದುರ್ಗ ಪ್ರಶಾಂತ ನಗರದ ಜಿ.ಜಿ.ಕಲ್ಯಾಣ ಮಂಟಪದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಅಧಿಕಾರಿ ಸಿಬ್ಬಂದಿಗೆ ಸನ್ಮಾನ:
ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ 14 ಮಂದಿ ಅಧಿಕಾರಿಗಳು ಹಾಗೂ ನೌಕರರು ಗಣರಾಜ್ಯೋತ್ಸವ ಸಂದರ್ಭದಲ್ಲಿ ಸನ್ಮಾನಕ್ಕೆ ಆಯ್ಕೆಯಾಗಿದ್ದಾರೆ.


  ಹೊಳಲ್ಕೆರೆ ತಾಲ್ಲೂಕು ಕಚೇರಿಯ ಚುನಾವಣಾ ಶಿರಸ್ತೇದಾರ್ ಹೆಚ್.ಆರ್.ಸನಾವುಲ್ಲಾ, ಹೊಸದುರ್ಗ ತಾಲ್ಲೂಕು ಕಚೇರಿಯ ಚುನಾವಣಾ ಶಿರಸ್ತೇದಾರ್ ಬಿ.ಎಂ.ಶಿವಾನಂದ ಮೂರ್ತಿ, ಚಳ್ಳಕೆರೆ ತಾಲ್ಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಜಿ.ಛಾಯಪತಿ, ಶಿಕ್ಷಣ ಇಲಾಖೆ-ಮಠದ ಕುರುಬರಹಟ್ಟಿಯ ಸಮೂಹ ಸಂಪನ್ಮೂಲ ವ್ಯಕ್ತಿ ಎಂ.ಎಲ್.ತಿಮ್ಮರಾಜ್,

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ, ಚಿತ್ರದುರ್ಗ ಬಡಾವಣೆ ವೃತ್ತ ಪೊಲೀಸ್ ವೃತ್ತ ನಿರೀಕ್ಷಕ ಎನ್.ತಿಮ್ಮಣ್ಣ, ಹಿರಿಯೂರು ಗ್ರಾಮಾಂತರ ಠಾಣೆ  ಪೊಲೀಸ್  ನಿರೀಕ್ಷಕ ಆನಂದ, ಚಳ್ಳಕೆರೆ  ಪೊಲೀಸ್   ಠಾಣೆಯ  ಪೊಲೀಸ್   ನಿರೀಕ್ಷಕ ಕುಮಾರ್, ಕೃಷಿ ಇಲಾಖೆ ಹೊಸದುರ್ಗ ಸಹಾಯಕ ನಿರ್ದೇಶಕ ಸಿ.ಎಸ್.ಈಶ, ಹಿರಿಯೂರು ತಾಲ್ಲೂಕು ಗ್ರಾಮ ಆಡಳಿತ ಅಧಿಕಾರಿ ಜಿ.ರೇಖಾವತಿ, ಚಿತ್ರದುರ್ಗ ತಾಲ್ಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಹಿತ್ ಕುಮಾರ್ ಯಾದವ್,

ಚಿತ್ರದುರ್ಗ ತಾಲ್ಲೂಕು ಭರಮಸಾಗರ ಹೋಬಳಿ ಬ್ಯಾಲಹಾಳು ಕಂದಾಯ ವೃತ್ತ, ಪ್ರಭಾರ ಕೊಳಹಾಳು ವೃತ್ತದ ಗ್ರಾಮ ಆಡಳಿತ ಅಧಿಕಾರಿ ಬಿ.ಆರ್.ಪ್ರಿಯ, ಚಿತ್ರದುರ್ಗ ತಾಲ್ಲೂಕು ಕಸಬಾ ಹೋಬಳಿ ಗೊಡಬನಹಾಳು ಕಂದಾಯ ವೃತ್ತದ ಗ್ರಾಮ ಆಡಳಿತ ಅಧಿಕಾರಿ ಶ್ರೀದೇವಿ, ಹೊಳಲ್ಕೆರೆ ತಾಲ್ಲೂಕು ಕಸಬಾ ಹೋಬಳಿ ಗ್ರಾಮ ಸಹಾಯಕಿ ಟಿ.ಭಾಗ್ಯಮ್ಮ ಅವರು ಸೇರಿದಂತೆ ಒಟ್ಟು 14 ಮಂದಿ ಅಧಿಕಾರಿ, ನೌಕರರನ್ನು ಗಣರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!