Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಇಂದಿರಾ ಗಾಂಧಿ ಸ್ಮರಣಾರ್ಥ ರಕ್ತದಾನ ಶಿಬಿರ ಆಯೋಜನೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತದ ಪ್ರಥಮ ಮಹಿಳಾ ಪ್ರಧಾನಮಂತ್ರಿ, ‘ಉಕ್ಕಿನ ಮಹಿಳೆ’ ಶ್ರೀಮತಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಅಂಗವಾಗಿ ಸೇವಾದಳ ಯಂಗ್ ಬ್ರಿಗೇಡ್ ವತಿಯಿಂದ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.

ಈ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು, ಕಾರ್ಯಕರ್ತರು ಹಾಗೂ ಇಂದಿರಾಗಾಂಧಿಯವರ ಅಭಿಮಾನಿಗಳು ಸಕ್ರಿಯವಾಗಿ ಪಾಲ್ಗೊಂಡು ರಕ್ತದಾನ ಮಾಡಿದರು.

ಶಿಬಿರದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್‌ಪೀರ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ಆರ್. ಶಿವಣ್ಣ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ರಫಿ, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ಪದವೀಧರ ವಿಭಾಗದ ಅಧ್ಯಕ್ಷ ಪ್ರಕಾಶ್ ರಾಮ ನಾಯಕ್ ಹಾಗೂ ಮುಖಂಡರಾದ ಗುರು ಶೆಟ್ಟಿ, ಶಶಾಂಕ್, ಮೊಹಮ್ಮದ್ ಆಜಮ್, ಜೆ.ಬಿ.ಎಂ. ಅಧ್ಯಕ್ಷ ದಾದಾಪೀರ್, ಸಂದೀಪ್, ಫಜಲೂರ್ ರೆಹಮಾನ್, ಸುಹೇಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು ರಕ್ತದಾನ ಮಾಡಿದರು.

 

 

 

ಐಮಂಗಳದಲ್ಲಿ ನವೆಂಬರ್ 3 ರಂದು ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ: ಜೆಟ್ ಸಿಬಿಎಸ್‌ಇ ಶಾಲೆಯಲ್ಲಿ ಭರ್ಜರಿ ಸಿದ್ಧತೆ
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲೂಕಿನ ಐಮಂಗಳ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ 3 ರ ಮಂಗಳವಾರದಂದು ಗೊಲ್ಲಹಳ್ಳಿಯ ಜೆಟ್ ಸಿಬಿಎಸ್‌ಇ ಶಾಲೆಯಲ್ಲಿ ಅದ್ದೂರಿಯಾಗಿ ಆಯೋಜಿಸಲಾಗಿದೆ.

ಕನ್ನಡ ನಾಡು, ನುಡಿ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯ ಬಗ್ಗೆ ಮಕ್ಕಳಲ್ಲಿ ಅರಿವು ಮತ್ತು ಅಭಿಮಾನ ಮೂಡಿಸುವ ಸದುದ್ದೇಶದಿಂದ ಈ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ತಮ್ಮ ಶಾಲೆಯಲ್ಲಿ ನಡೆಸಲು ಅವಕಾಶ ಕಲ್ಪಿಸಿಕೊಟ್ಟ ಕನ್ನಡ ಸಾಹಿತ್ಯ ಪರಿಷತ್ತಿನ ಐಮಂಗಳ ಘಟಕಕ್ಕೆ ಜಾಗೃತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ಬೆಳಗೆರೆ ಹಾಗೂ ಶಾಲಾ ಆಡಳಿತ ಮಂಡಳಿ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.

ಕಡ್ಡಾಯ ಹಾಜರಾತಿ: ಅಂದು ಎಲ್ಲಾ ಮಕ್ಕಳು ಎಂದಿನಂತೆ ಶಾಲೆಗೆ ಹಾಜರಾಗುವುದು ಕಡ್ಡಾಯವಾಗಿದೆ.
ಬ್ಯಾಗ್‌ಲೆಸ್ ಡೇ: ಸಮ್ಮೇಳನದ ದಿನದಂದು ಶಾಲೆಯಲ್ಲಿ ಬ್ಯಾಗ್‌ಲೆಸ್ ಡೇ ಆಚರಿಸಲಾಗುತ್ತಿದ್ದು
, ಮಕ್ಕಳು ಪುಸ್ತಕದ ಬ್ಯಾಗ್ ಹಾಗೂ ಲಂಚ್ ಬಾಕ್ಸ್ ತರುವ ಅಗತ್ಯವಿರುವುದಿಲ್ಲ.

ಊಟದ ವ್ಯವಸ್ಥೆ: ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಪೋಷಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ.

ಕನ್ನಡ ನಾಡು-ನುಡಿಯ ಸೇವೆ ಮತ್ತು ಈ ಸಾಹಿತ್ಯಿಕ ಚಟುವಟಿಕೆಯಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಆಡಳಿತ ಮಂಡಳಿ ವಿನಂತಿಸಿದೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೊಡ್ಡ ತಿಮ್ಮನಹಳ್ಳಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆಸಾಮಾಜಿಕ ಅನಿಷ್ಟ ತಡೆಗಟ್ಟಲು ಕಾನೂನಿನ ಅರಿವು ಅತ್ಯಗತ್ಯ:ದಾಸರಿ ಕ್ರಾಂತಿ ಕಿರಣ್ಹಿರಿಯ ರಂಗಭೂಮಿ ಕಲಾವಿದ ಜಿ.ಡಿ. ತಿಮ್ಮಯ್ಯ ಅವರ ಸಾಧನೆ ಮತ್ತು ಪರಿಚಯಹಿರಿಯ ಪತ್ರಕರ್ತ ಚಿತ್ರದುರ್ಗದ  ಉಮಾಪತಿ ಅವರಿಗೆ 'ರಾಜ್ಯೋತ್ಸವ ಪ್ರಶಸ್ತಿ' ಗೌರವಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಮುಖಭಂಗ: ಬೆಂಬಲವಿದ್ದರೂ ಎಡವಿದ್ದೆಲ್ಲಿ?ರಾಹುಲ್ ಗಾಂಧಿ ನೇತೃತ್ವದ ಒಕ್ಕೂಟದಿಂದ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನ: ಶೋಭಾ ಕರಂದ್ಲಾಜೆಬದರಿನಾಥದಿಂದ ಹೊರಟ ಹೆಲಿಕಾಪ್ಟರ್ ಜೋಶಿಮಠ ಬಳಿ ಪತನ: ಆರು ಮಂದಿ ಪ್ರಯಾಣಿಕರ ಸಾವುನ್ಯಾಯಾಂಗದ ವಿರುದ್ಧ ಹೇಳಿಕೆ: CJP ನಾಯಕ ಸೌರವ್ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್ಯುವಕನಿಗೆ ಚಾಕು ತೋರಿಸಿ 20 ಲಕ್ಷ ಮೌಲ್ಯದ ಚಿನ್ನ ದೋಚಿದ ಡೇಟಿಂಗ್ ಬಂದಿದ್ದ ಯುವತಿಮುಖ್ಯ ಚುನಾವಣಾ ಆಯುಕ್ತರ ವಿರುದ್ಧ 'ಸಾರ್ವಜನಿಕ ದೋಷಾರೋಪಣೆ' ಮುಂದೂಡಿದ 'ಇಂಡಿಯಾ' ಒಕ್ಕೂಟ