ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನಾದ್ಯಂತ ಐದು ವರ್ಷ ದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ತಾಲ್ಲೂಕು ವೈದ್ಯಾಧಿಕಾರಿ ಡಾ.ಚಾಲನೆ ನೀಡಿದರು.
ತಾಲ್ಲೂಕಿನಾದ್ಯಂತ 153 ಬೂತ್ ಗಳಲ್ಲಿ 28,242 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.
ಇದನ್ನು ಹೊರತುಪಡಿಸಿ. ಮೋಬೈಲ್ ಪಲ್ಸ್ ಪೋಲಿಯೊ ಲಸಿಕೆಯನ್ನು ಹಾಕುವ ಗುರಿಯನ್ನು ಹೊಂದಲಾಗಿದ್ದು ಕೊನಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಆರೋಗ್ಯ ನಿರೀಕ್ಷಣಾಧಿಕಾರಿ ಎನ್ ಈರಣ್ಣ ಪೋನ್ ಕರೆಯ ಮೇರೆಗೆ ನಗರದ ಹೊರ ವಲಯದ ಇಂಪೋ ಸಿಟಿ 2ಯ ಸುಮಾರು ಇಪ್ಪತ್ತು ಹೆಚ್ಚು ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ನೀಡಲಾಯಿತು.



