Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂತರರಾಷ್ಟ್ರೀಯ ಚಿತ್ರಕಲಾವಿದ ಕೆ.ಟಿ ಶಿವಪ್ರಸಾದ್ ನಿಧನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 
ಅಂತರರಾಷ್ಟ್ರೀಯ ಖ್ಯಾತಿಯ ಚಿತ್ರಕಲಾವಿದ
, ಪ್ರಗತಿಪರ ಚಿಂತಕ ಕೆ.ಟಿ. ಶಿವಪ್ರಸಾದ್ (79) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಕಿಡ್ನಿ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗೆ ಅವರು ದೀರ್ಘ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ರೈತ ಹಾಗೂ ದಲಿತ ಚಳವಳಿಗಳೊಂದಿಗೆ ನಿಕಟವಾಗಿ ಗುರುತಿಸಿಕೊಂಡಿದ್ದ ಶಿವಪ್ರಸಾದ್ ಅವರು ತಮ್ಮ ಕಲೆಯ ಮೂಲಕ ಸಾಮಾಜಿಕ ಬದ್ಧತೆಯನ್ನು ಅಭಿವ್ಯಕ್ತಿಸಿದ ಅಪರೂಪದ ಕಲಾವಿದರಾಗಿದ್ದರು.

ಖ್ಯಾತ ಉದ್ಯಮಿ ಕಾರ್ಲೆ ಅವರ ಪುತ್ರರಾಗಿದ್ದ ಅವರು ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಆಪ್ತ ಸ್ನೇಹಿತರಾಗಿಯೂ ಪರಿಚಿತರಾಗಿದ್ದರು.

ಸಂತಾಪ: ಕೆ.ಟಿ. ಶಿವಪ್ರಸಾದ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕೆ.ಟಿ ಶಿವಪ್ರಸಾದ್ ಅವರು ಕೇವಲ ಪ್ರತಿಭಾವಂತ ಚಿತ್ರಕಲಾವಿದರಷ್ಟೇ ಅಲ್ಲ, ಸಮಾಜಮುಖಿ ಚಿಂತನೆಗಳನ್ನು ತಮ್ಮ ಕಲೆಯ ಮೂಲಕ ಜನರಿಗೆ ತಲುಪಿಸಿದ ಅಪರೂಪದ ಸೃಜನಶೀಲ ವ್ಯಕ್ತಿತ್ವವಾಗಿದ್ದರು. ಅವರ ನಿಧನದಿಂದ ಕರ್ನಾಟಕದ ಸಾಂಸ್ಕೃತಿಕ ಮತ್ತು ಕಲಾ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬದ ಸದಸ್ಯರು, ಬಂಧು-ಬಳಗ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ. ಅಗಲಿದ ಆತ್ಮಕ್ಕೆ ಚಿರಶಾಂತಿ ದೊರೆಯಲಿಎಂದು ಅವರು ಪ್ರಾರ್ಥಿಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು ನಿಧಿ ಹಂಚಿಕೆಯಲ್ಲಿ ತಾರತಮ್ಯ: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್‌ಅಶೋಕ್ ತೀವ್ರ ವಾಗ್ದಾಳಿ!ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಪಾರದರ್ಶಕತೆ: ಚುನಾವಣಾ ಆಯೋಗಕ್ಕೆ ಕರ್ನಾಟಕ ಸಚಿವ ಸಂಪುಟದ ಬಿಗಿ ಷರತ್ತುಗಳು!ಖ್ಯಾತ ಹಿರಿಯ ಚಿತ್ರ ಕಲಾವಿದ ಕೆ.ಟಿ ಶಿವಪ್ರಸಾದ್ ನಿಧನ!ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಬೇಲೂರು ಶಾಸಕ ಆಣೆ ಪ್ರಮಾಣ!ಜಿಲ್ಲಾಸ್ಪತ್ರೆಯಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಕೋಟ್ಯಂತರ ಮೌಲ್ಯದ ಸಲಕರಣೆ ಭಸ್ಮ, ಕೂದಲೆಳೆ ಅಂತರದಲ್ಲಿ ತಪ್ಪಿದ ಪ್ರಾಣಾಪಾಯ!ವಿಚಾರಣೆ ನೆಪದಲ್ಲಿ ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ: ಪಿಎಸ್‌ಐ ಪೋಕ್ಸೋ ಕಾಯ್ದೆಯಡಿ ಬಂಧನ!ಬಿಡದಿ ಬೃಹತ್ ಉಪನಗರ ಯೋಜನೆಗೆ ಹೈಕೋರ್ಟ್ ಬ್ರೇಕ್? ಸರ್ಕಾರದ ವಿರುದ್ಧ ಸಲ್ಲಿಕೆಯಾಯ್ತು ಸಾರ್ವಜನಿಕ ಹಿತಾಸಕ್ತಿ ಅರ್ಜಿ!ಶತಮಾನದ ಸಾಮಾಜಿಕ ಅಂತರಕ್ಕೆ ಬ್ರೇಕ್: ಸೌಹಾರ್ದಯುತವಾಗಿ ದೇವಸ್ಥಾನ ಪ್ರವೇಶಿಸಿದ ದಲಿತರು!ಹದಿಹರೆಯ ವಯಸ್ಸಿನ ಆವೇಗಕ್ಕೆ ವಿವೇಕದ ಅಂಕುಶ ಅಗತ್ಯಅಂತರರಾಷ್ಟ್ರೀಯ ಚಿತ್ರಕಲಾವಿದ ಕೆ.ಟಿ ಶಿವಪ್ರಸಾದ್ ನಿಧನ