ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಗೀತಮ್ ಕಾಲೇಜ್ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಗ್ಯಾಂಗ್ ನನ್ನು ಬಂಧಿಸುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ. ನೇತೃತ್ವದ ತಂಡವು ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಗ್ಯಾಂಗ್ ನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಆರೋಪಿಗಳಿಂದ 6 ಲಕ್ಷ ಮೌಲ್ಯದ 5.670 ಕೆಜಿ ಗಾಂಜಾವನ್ನು ಜಪ್ತಿ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸೆಪ್ಟೆಂಬರ್ 21ರ ಬೆಳಿಗ್ಗೆ ತಾಲ್ಲೂಕಿನ ಗೀತಮ್ ಕಾಲೇಜ್ ಬಳಿಯಿರುವ ಕೆ.ಐ.ಎ.ಡಿ.ಬಿ ಕೈಗಾರಿಕಾ ಪ್ರದೇಶದಲ್ಲಿ ಗಾಂಜಾ ಸೊಪ್ಪು ಮಾರಾಟಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗ್ರಾಮಾಂತರ ಪೊಲೀಸರು ಮೂವರು ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಗಳ ಗ್ಯಾಂಗ್ ಅನ್ನು ಬಂಧಿಸಿದ್ದಾರೆ, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಸುರೇಶ ಸಹಾನಿ (34), ರೋಹಿತ್ ಕುಮಾರ್ (25), ರೂಪೇಶ್ ಕುಮಾರ್ (30) ಎಂದು ಗುರುತಿಸಲಾಗಿದೆ, ಆರೋಪಿಗಳು ಬಿಹಾರ ಮತ್ತು ಜರ್ಖಾಂಡ್ ರಾಜ್ಯದವರು ಎಂದು ಗುರುತಿಸಲಾಗಿದ್ದು , ಮೂರು ಜನರು ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದರೆಂದು ತಿಳಿದುಬಂದಿದೆ.
ಬಂಧಿತರಿಂದ ₹6,00,000 ಮೌಲ್ಯದ 5 ಕೆಜಿ 670ಗ್ರಾಂ ಗಾಂಜಾ ಸೊಪ್ಪು ಹಾಗೂ ಸುಮಾರು ₹1,00,000 ಮೌಲ್ಯದ ಪ್ಯಾಷನ್ ಪ್ರೋ ದ್ವಿ ಚಕ್ರ ವಾಹನವನ್ನು ಜಪ್ತಿ ಮಾಡಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಎಂ.ವಿ., ಅಪರ ಪೊಲೀಸ್ ಅಧೀಕ್ಷಕರಾದ ಡಾ.ವೆಂಕಟೇಶ್ ಪ್ರಸನ್ನ, ಲಕ್ಷ್ಮೀನಾರಾಯಣ ಎ.ವಿ, ದೊಡ್ಡಬಳ್ಳಾಪುರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರು ಪಾಂಡುರಂಗ ಡಿ.ವೈ.ಎಸ್.ಪಿ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ. ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಬಂಧಿಸಿದೆ.
ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಪಿ.ಎಸ್.ಐ ನಾರಾಯಣಸ್ವಾಮಿ, ಪ್ರೊ.ಪಿ.ಎಸ್.ಐ ವಿನಾಯಕ ಪಾಟೀಲ್, ಪ್ರೋ ಪಿ.ಎಸ್.ಐ ನಾಗರಾಜು, ರಾಧಾಕೃಷ್ಣ ಎ.ಎಸ್.ಐ, ಹೆಚ್.ಸಿ. ರಂಗನಾಥ್, ಹೆಚ್.ಸಿ. ಸುನಿಲ್ ಭಾಸಗಿ, ಹೆಚ್.ಸಿ ಮಂಜುನಾಥ, ಹೆಚ್.ಸಿ ಚಂದ್ರಶೇಖರ್, ಎ.ಹೆಚ್.ಸಿ ನಟರಾಜು, ಪಿಸಿ ಪ್ರವೀಣ್ ಹಾಗೂ ತಾಂತ್ರಿಕ ಸಿಬ್ಬಂದಿಯವರನ್ನುಎಸ್,ಪಿ ಚಂದ್ರಕಾಂತ್ ಶ್ಲಾಘಿಸಿದ್ದಾರೆ.




