Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 2026-27ನೇ ಸಾಲಿಗೆ ಅರ್ಹ ಶಿಕ್ಷಕರಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಅಹರ್ನಿಶಿ ಶ್ರಮಿಸುತ್ತಿರುವ, ತೆರೆಮರೆಯ ಸಾಧಕರಾಗಿ ಉಳಿದಿರುವ ಅತ್ಯುತ್ತಮ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರನ್ನು ಸ್ವಯಂಪ್ರೇರಿತವಾಗಿ ಗುರುತಿಸಿ ಗೌರವಿಸುವುದು ಪ್ರಶಸ್ತಿಯ ಮುಖ್ಯ ಆಶಯವಾಗಿದೆ.

ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಆಯ್ಕೆ ಪ್ರಕ್ರಿಯೆಯ ಎಲ್ಲಾ ಹಂತಗಳನ್ನು ಪಾರದರ್ಶಕವಾಗಿ ಇಲಾಖೆಯ ಅಧಿಕೃತ ಪೆÇೀರ್ಟಲ್ ಮೂಲಕವೇ ನಿರ್ವಹಿಸಲು ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಅರ್ಹ ಶಿಕ್ಷಕರಿಗೆ ಜುಲೈ 10 ರಿಂದ ಜುಲೈ 31 ರವರೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಥಮ ಹಂತದಲ್ಲಿ ಅವಕಾಶ ಕಲ್ಪಿಸಲಾಗಿದೆ. ಆಗಸ್ಟ್ 3 ರಿಂದ ಆಗಸ್ಟ್ 8 ರವರೆಗೆ ತಾಲೂಕು ಮಟ್ಟದ ಆಯ್ಕೆ ಸಮಿತಿಗಳ ಪರಿಶೀಲನೆ ನಡೆಯಲಿದೆ. ಆಗಸ್ಟ್ 10 ರಿಂದ ಆಗಸ್ಟ್ 18 ರ ಅವಧಿಯಲ್ಲಿ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಗಳು ತಮ್ಮ ಶಿಫಾರಸ್ಸಿನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿವೆ. ಆಗಸ್ಟ್ 19 ರಿಂದ ಆಗಸ್ಟ್ 24 ರವರೆಗೆ ರಾಜ್ಯ ಮಟ್ಟದ ಆಯ್ಕೆ ಸಮಿತಿಯು ಅಂತಿಮ ಮೌಲ್ಯಮಾಪನ ನಡೆಸಿ, ಆಗಸ್ಟ್ 25 ರಂದು ಸರ್ಕಾರಕ್ಕೆ ಅಧಿಕೃತ ವರದಿ ಸಲ್ಲಿಸಲಿದೆ. ಸೆಪ್ಟೆಂಬರ್ 3 ರಂದು ಪ್ರಶಸ್ತಿ ವಿಜೇತ ಶಿಕ್ಷಕರಿಗೆ ಅಧಿಕೃತ ಮಾಹಿತಿ ಲಭ್ಯವಾಗಲಿದ್ದು, ಸೆಪ್ಟೆಂಬರ್ 5 ರ ಶುಕ್ರವಾರದಂದು ಜರುಗಲಿರುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಮಹೋತ್ಸವದಲ್ಲಿ ಈ ಗೌರವಾನ್ವಿತ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.

ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಶಿಕ್ಷಕರು ಸರ್ಕಾರಿ ಅಥವಾ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕನಿಷ್ಠ 10 ವರ್ಷಗಳ ತೃಪ್ತಿದಾಯಕ ಸೇವೆಯನ್ನು ಪೂರೈಸಿರಬೇಕು. ಕಳೆದ ಐದು ವರ್ಷಗಳಿಂದ ನಿರಂತರವಾಗಿ ಶಾಲೆಯಲ್ಲಿ ಬೋಧನಾ ವೃತ್ತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದು ಕಡ್ಡಾಯವಾಗಿದೆ. ಅಭ್ಯರ್ಥಿಗಳು ತಮ್ಮ ಕಳೆದ ಐದು ವರ್ಷಗಳ ವೈಯಕ್ತಿಕ ಹಾಗೂ ಶೈಕ್ಷಣಿಕ ಸಾಧನೆಗಳ ನಿಖರ ಅಂಕಿ-ಅಂಶಗಳು ಮತ್ತು ಪೂರಕ ದಾಖಲೆಗಳನ್ನು ಗರಿಷ್ಠ 2 ಎಂ.ಬಿ ಮಿತಿಯೊಳಗೆ ಪಿ.ಡಿ.ಎಫ್, ಆಡಿಯೋ ಅಥವಾ ವೀಡಿಯೋ ರೂಪದಲ್ಲಿ ಅಪ್‍ಲೋಡ್ ಮಾಡಬೇಕಿದೆ. ಯಾವುದೇ ರೀತಿಯ ಗಂಭೀರ ಆರೋಪ, ಶಿಸ್ತು ಪ್ರಕರಣ, ಕ್ರಿಮಿನಲ್ ಮೊಕದ್ದಮೆ ಅಥವಾ ಇಲಾಖಾ ವಿಚಾರಣೆ ಎದುರಿಸುತ್ತಿರುವವರು ಮತ್ತು ಈಗಾಗಲೇ ಒಮ್ಮೆ ರಾಜ್ಯ ಅಥವಾ ರಾಷ್ಟ್ರ ಪ್ರಶಸ್ತಿ ಪಡೆದ ಶಿಕ್ಷಕರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

  ತಾಂತ್ರಿಕ ನೆರವು ಅಥವಾ ಮೊಬೈಲ್ ಸಂಖ್ಯೆ ಇಂದೀಕರಣದ ಸಮಸ್ಯೆಗಳಿದ್ದಲ್ಲಿ  teacheraward2025@gmail.com ಇ-ಮೇಲ್ ಮೂಲಕ ಸಂಪರ್ಕಿಸಬಹುದು ಎಂದು ಡಯಡ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!