Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಪ್ಯಾನಲ್ ವಕೀಲರ ಆಯ್ಕೆಗಾಗಿ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಲು ಪ್ಯಾನಲ್ ವಕೀಲರ ಆಯ್ಕೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇ 07 ಅರ್ಜಿ ಸಲ್ಲಿಸಲು ಕೊನೆಯ ದಿನ.

ಆಸಕ್ತರು ತಮ್ಮ ವೈಯಕ್ತಿಕ ವಿವರಗಳೊಂದಿಗೆ ಸ್ವ ಹಸ್ತಾಕ್ಷರದಿಂದ ಭರ್ತಿ  ಮಾಡಿದ ಅರ್ಜಿಯನ್ನು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಿತ್ರದುರ್ಗ ಅವರಿಗೆ ಸಲ್ಲಿಸಬಹುದಾಗಿರುತ್ತದೆ. ಅವಧಿ ಮುಗಿದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಚಿತ್ರದುರ್ಗ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ಯಾನಲ್ ವಕೀಲರ ಅವಧಿಯು ಮುಕ್ತಾಯಗೊಳ್ಳುತ್ತಿದ್ದು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಹಾಗೂ ಮಾನ್ಯ ಕಾರ್ಯಾಧ್ಯಕ್ಷರು,

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ 03 ವರ್ಷಕ್ಕಿಂತ ಮೇಲ್ಪಟ್ಟು ವಕೀಲರ ವೃತ್ತಿಯಲ್ಲಿ ಅನುಭವ ಇರುವ ವಕೀಲರನ್ನು ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಕಾನೂನು ನೆರವು ನೀಡುವ ಪ್ರಕರಣಗಳಲ್ಲಿ ಹಾಜರಾಗಲು ಹಾಗೂ ಫ್ರಂಟ್ ಆಫೀಸ್ (ನ್ಯಾಯಾಲಯದ ಆವರಣ), ತಹಸೀಲ್ದಾರ್ ಕಛೇರಿ, ಸಿ.ಡಿ.ಪಿ ಕಛೇರಿ, ಕಾರಾಗೃಹ, ಬಾಲ ನ್ಯಾಯಮಂಡಳಿ, ಗ್ರಾಮೀಣ ಕಾನೂನು ನೆರವು ಮತ್ತು ಸಲಹಾ ಕೇಂದ್ರ, .ಆರ್.ಟಿ ಕೇಂದ್ರಗಳಲ್ಲಿನ ಕಾನೂನು ಸಲಹಾ ಕೇಂದ್ರಗಳಿಗೆ, “ಸಖಿಕೇಂದ್ರಗಳಲ್ಲಿ ಕಾನೂನು ಸಲಹೆ ನೀಡಲು ಮತ್ತು ಕಾನೂನು ಸಾಕ್ಷರತಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳಲ್ಲಿ ಕಾರ್ಯ ನಿರ್ವಹಿಸಲು ಪ್ಯಾನಲ್ ವಕೀಲರುಗಳ ಆಯ್ಕೆ ಅವಶ್ಯಕವಾಗಿರುತ್ತದೆ.

ಪ್ಯಾನಲ್ ವಕೀಲರ ಆಯ್ಕೆ ಪ್ರಕ್ರಿಯೆಯು THE NATIONAL LEGAL SERVICES AUTHORITY (FREE AND COMPETENT LEGAL SERVICES) REGULATIONS, 2010 (As amended vide notification F.No. L/61/10/NALSA dated 28.08.2019 published in the Gazette of India on 06.09.2019) ರೆಗ್ಯೂಲೇಷನ್ 8(2) ಮತ್ತು 10 (4) ಗೆ ಒಳಪಟ್ಟಿರುತ್ತದೆ ಮತ್ತು ಮೌಖಿಕ ಸಂದರ್ಶನದ ಮುಖಾಂತರ ಪ್ಯಾನಲ್ ವಕೀಲರನ್ನು ಆಯ್ಕೆ ಮಾಡಲಾಗುವುದು.

ಆದ್ದರಿಂದ ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಲ್ಲಿ ಪ್ಯಾನಲ್ ವಕೀಲರಾಗಿ ಕಾರ್ಯನಿರ್ವಹಿಸಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ದಿನಾಂಕ 07/05/2025 ರಂದು ಸಂಜೆ 5.00 ಗಂಟೆಯೊಳಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಚಿತ್ರದುರ್ಗಲ್ಲಿ ಸಲ್ಲಿಸಲು ಕೋರಲಾಗಿದೆ. ಅಭ್ಯರ್ಥಿಗಳ ಆಯ್ಕೆ ಕೆಳಗಿನ ನಿಬಂಧನೆಗಳಿಗೆ ಒಳಗೊಂಡಂತೆ ಅರ್ಜಿಯನ್ನು ಕರೆಯಲಾಗಿದೆ.

ನಿಬಂಧನೆಗಳು: ವಕೀಲ ವೃತ್ತಿಯಲ್ಲಿ ಕನಿಷ್ಠ 3 ವರ್ಷಗಳ ಅನುಭವವಿರಬೇಕು. ಕರ್ನಾಟಕ ಬಾರ್ ಕೌನ್ಸಿಲ್ ನಿಂದ ನೊಂದಾವಣಿ ಆಗಿರಬೇಕು ಹಾಗೂ ಅದರ ಪ್ರಮಾಣಪತ್ರವನ್ನು ಲಗತ್ತಿಸಬೇಕು. ಕಾನೂನು ಸೇವೆಗಳ ಪ್ರಾಧಿಕಾರದ ನಿಯಮಗಳನ್ನು ತಿಳಿದಿರಬೇಕು. ವಕೀಲರುಗಳಿಗೆ ಪ್ರತ್ಯೇಕವಾದ ವಾಹನ ಭತ್ಯೆ ನೀಡಲಾಗುವುದಿಲ್ಲ. ಬೈಠಕ್ ಭತ್ಯೆ ಮಾತ್ರ ನೀಡಲಾಗುತ್ತದೆ. ವಕೀಲರ ಸಾಮಥ್ರ್ಯ, ಸಮಗ್ರತೆ, ಸೂಕ್ತತೆ ಮತ್ತು ಅನುಭವಗಳನ್ನು ಪರಿಗಣಿಸಲಾಗುತ್ತದೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ತಿಳಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!