Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಗ್ಯಾರಂಟಿ ಹಠಾವೋ" ಆಂದೋಲನ ಶುರು? ಶ್ವೇತಪತ್ರ ಹೊರಡಿಸಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
"
ಗ್ಯಾರಂಟಿ ಹಠಾವೋ" ಆಂದೋಲನ ಶುರು? ಆಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನವರೇ, ಕಳೆದ ಮೂರು ವರ್ಷಗಳಲ್ಲಿ ವಿಪಕ್ಷಗಳು, ಮಾಧ್ಯಮದವರು ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಪ್ರಶ್ನೆ ಮಾಡಿದಾಗಲೆಲ್ಲಾ ತಿಪ್ಪೆ ಸರಿಸುವ ಮಾತಾಡಿ, ಸುಳ್ಳು ಹೇಳುತ್ತಲೇ ಬಂದಿದ್ದೀರಿ.

ಈಗ ಮಾರ್ಚ್ 6ರಂದು ತಾವು ಮಂಡಿಸುವ ಬಜೆಟ್ ನಲ್ಲಿ "ಗ್ಯಾರಂಟಿ ಹಠಾವೋ" ಆಂದೋಲನ ಶುರುವಾಗುವ ಮುನ್ಸೂಚನೆಗಳು ಸಿಗುತ್ತಿವೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯದ ಜನರ ಮನದಲ್ಲಿ ಹಲವಾರು ಪ್ರಶ್ನೆಗಳಿವೆ. ಈಗಲಾದರೂ ರಾಜ್ಯದ ಜನತೆಗೆ ಸತ್ಯಾಂಶ ತಿಳಿಸಿ ಸ್ವಾಮಿ ಎಂದು ಅಶೋಕ್ ತಾಕೀತು ಮಾಡಿದ್ದಾರೆ.

1 ಅಸಲಿಗೆ ಗ್ಯಾರೆಂಟಿ ಯೋಜನೆಗಳ ಬಗ್ಗೆ ಐಡಿಯಾ ಕೊಟ್ಟಿದ್ದು ಯಾರು? ತಾವೋ, ಕೆಪಿಸಿಸಿ ಅಧ್ಯಕ್ಷರೋ, ಅಥವಾ ಕಾಂಗ್ರೆಸ್ ಪಕ್ಷದ ಚುನಾವಣಾ ತಂತ್ರಜ್ಞರೋ?

2 ಚುನಾವಣೆ ಸಂದರ್ಭದಲ್ಲಿ 5 ಗ್ಯಾರೆಂಟಿ ಯೋಜನೆಗಳನ್ನು ಘೋಷಿಸುವ ಮುನ್ನ ಇದಕ್ಕೆ ತಗುಲುವ ವೆಚ್ಚದ ಬಗ್ಗೆ ಅಂದಾಜು ಮಾಡಲಾಗಿತ್ತಾ?

3 ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ಸಾಧ್ಯಾಧ್ಯಾತೆಗಳ ಬಗ್ಗೆ ಯಾರಾದರೂ ಆರ್ಥಿಕ ತಜ್ಞರ ಸಲಹೆ, ಅಭಿಪ್ರಾಯ ಪಡೆಯಲಾಗುತ್ತಾ?

4 ಅಥವಾ ಕೇವಲ ಚುನಾವಣೆ ಗೆಲ್ಲುವ ಹಪಹಪಿಯಿಂದ ಯಾವುದೇ ಮುಂದಾಲೋಚನೆ ಇಲ್ಲದೆ ಬೇಕಾಬಿಟ್ಟಿ ಘೋಷಣೆ ಮಾಡಿದ್ದಾ?

5 ಪಂಚ ಗ್ಯಾರೆಂಟಿ ಯೋಜನೆಗಳ ಘೋಷಣೆ ಬಗ್ಗೆ ಹೈಕಮಾಂಡ್ ಸೇರಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಸರ್ವಾನುಮತ ಇತ್ತಾ? ಅಥವಾ ಭಿನ್ನಾಭಿಪ್ರಾಯಗಳು ಇದ್ದವಾ?

ಬಜೆಟ್ ಮಂಡನೆಗೂ ಮುನ್ನ ಕರ್ನಾಟಕದ ಮತದಾರರನ್ನು ಕಾಡುತ್ತಿರುವ ಈ ಪ್ರಶ್ನೆಗಳಿಗೆ ಉತ್ತರಿಸಿ, ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಒಂದು ಶ್ವೇತಪತ್ರ ಹೊರಡಿಸಿ ಎಂದು ಅಶೋಕ್ ತಾಕೀತು ಮಾಡಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST