ಚಂದ್ರವಳ್ಳಿ ನ್ಯೂಸ್, ಮೈಸೂರು:
ಹೆಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹಮ್ಮಿಕೊಳ್ಳಲಾಗಿದ್ದ ಬೂತ್ ಮಟ್ಟದ ಏಜೆಂಟ್‌ಗಳ ಕಾರ್ಯಾಗಾರ ಯಶಸ್ವಿಯಾಗಿ ಜರುಗಿದೆ. ಪಕ್ಷದ ಸಂಘಟನೆ ಮತ್ತು ಮುಂಬರುವ ದಿನಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ನಡೆದ ಈ ಕಾರ್ಯಾಗಾರಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಾರ್ಯಾಗಾರವನ್ನು ಯಶಸ್ವಿಯಾಗಿ ಮುನ್ನಡೆಸಿದ ಪಕ್ಷದ ಪ್ರಮುಖ ಮುಖಂಡರಾದ ಕೆ. ಎಂ. ಕೃಷ್ಣನಾಯಕ ಅವರಿಗೆ ಹಾಗೂ ತಾಲ್ಲೂಕು ಅಧ್ಯಕ್ಷ ಗೋಪಾಲಸ್ವಾಮಿ ಅವರಿಗೆ ನಿಖಿಲ್ ಕುಮಾರಸ್ವಾಮಿ ಅವರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕಾರ್ಯಾಗಾರದಲ್ಲಿ ಪಾಲ್ಗೊಂಡು, ಬೂತ್ ಮಟ್ಟದ ಏಜೆಂಟ್‌ಗಳಿಗೆ ಅಗತ್ಯ ಮಾಹಿತಿ ಹಾಗೂ ತರಬೇತಿ ನೀಡಿದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಜಿ. ಪಿ. ಅಶ್ವಿನ್ ಕುಮಾರ್ ಅವರಿಗೂ ಅವರು ವಿಶೇಷ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
"ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯು ಅತ್ಯಂತ ಪ್ರಮುಖವಾದ ಪ್ರಕ್ರಿಯೆಯಾಗಿದ್ದು, ಇದರಲ್ಲಿ ಬೂತ್ ಮಟ್ಟದ ಏಜೆಂಟ್‌ಗಳ ಪಾತ್ರ ದೊಡ್ಡದಿದೆ. ಕ್ಷೇತ್ರದಲ್ಲಿ ಕಾರ್ಯಾಗಾರ ಸಂಘಟಿಸಿ, ಕಾರ್ಯಕರ್ತರಿಗೆ ಸೂಕ್ತ ಮಾರ್ಗದರ್ಶನ ನೀಡಿದ ನಾಯಕರಿಗೆ ಧನ್ಯವಾದಗಳು."
ನಿಖಿಲ್ ಕುಮಾರಸ್ವಾಮಿ.
ಈ ಪ್ರಮುಖ ಸಭೆ ಹಾಗೂ ತರಬೇತಿ ಕಾರ್ಯಾಗಾರದಲ್ಲಿ ಹೆಚ್.ಡಿ. ಕೋಟೆ ತಾಲ್ಲೂಕಿನ ಜೆಡಿಎಸ್ ಪಕ್ಷದ ಹಲವಾರು ಹಿರಿಯ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯ ಉತ್ಸಾಹಿ ಕಾರ್ಯಕರ್ತ ಬಂಧುಗಳು ಭಾಗವಹಿಸಿದ್ದರು. ಸಭೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಪ್ರತಿಯೊಬ್ಬರಿಗೂ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಹೃದಯಪೂರ್ವಕ ಕೃತಜ್ಞತೆಗಳನ್ನು ತಿಳಿಸಿದ್ದಾರೆ.



