Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸ್ ದರ ಏರಿಕೆ ಖಂಡಿಸಿ ಜೆಡಿಎಸ್‌ ಬೃಹತ್ ಪ್ರತಿಭಟನೆ

Advertisement
Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ಬಸ್ ಪ್ರಯಾಣ ದರ ಶೇ.೧೫ರಷ್ಟು ಏರಿಕೆ ಮಾಡಿರುವುದನ್ನು ಖಂಡಿಸಿ ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು.


ಜೆಡಿಎಸ್ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ಬಸ್ ಪ್ರಯಾಣ ದರ ಏರಿಕೆ ವಾಪಸ್ ಪಡೆಯುವಂತೆ ಆಗ್ರಹಿಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಎಂ.ಜಯಣ್ಣ ಮಾತನಾಡಿ, ರಾಜ್ಯ ಸರ್ಕಾರ ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಜನಸಾಮಾನ್ಯರ ಮೇಲೆ ದರ ಹೆಚ್ಚಳದ ಹೊರೆ ಹೊರಿಸಿದೆ. ಸುಭದ್ರವಾಗಿದ್ದ ಕರ್ನಾಟಕದ ಆರ್ಥಿಕತೆಯನ್ನು ಹದಗೆಡೆಸಿರುವ ಕಾಂಗ್ರೆಸ್ ಸರ್ಕಾರ ಸಾರಿಗೆ ಪ್ರಯಾಣ ದರವನ್ನು ಶೇ.೧೫ರಷ್ಟು ಹೆಚ್ಚಳ ಮಾಡಿ ಈಗ ಜನಸಾಮಾನ್ಯರ ಮೇಲೆ ಅನಗತ್ಯವಾಗಿ ಬೆಲೆ ಏರಿಕೆಯ ಹೊರೆ ಹಾಕುತ್ತಿದೆ.

ಗ್ಯಾರಂಟಿ ಯೋಜನೆಗಳಿಂದ ಸಾರಿಗೆ ಸಂಸ್ಥೆ ದಿವಾಳಿಯಾಗಿದ್ದು, ಈಗಾಗಲೇ ರಾಜ್ಯ ಸಾರಿಗೆ ಸಂಸ್ಥೆಗೆ ೨,೦೦೦ ಕೋಟಿ ಸಾಲ ಪಡೆಯಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿ, ಅದರ ನಷ್ಟವನ್ನು ಸರಿದೂಗಿಸಲು ದರ ಹೆಚ್ಚಿಸಿ ಪುರುಷ ಪ್ರಯಾಣಿಕರಿಂದ ವಸೂಲಿ ಮಾಡಲಾಗುತ್ತಿದೆ. ಸರ್ಕಾರ ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಸಿದು ಕೊಳ್ಳುತ್ತಿದೆ ಎಂದು ಕಿಡಿ ಕಾರಿದರು.

ರಾಜ್ಯ ಸರ್ಕಾರದ ಈ ತೀರ್ಮಾನ ಜನವಿರೋಧಿ ಮತ್ತು ಬಡವರ ವಿರೋಧಿ ಕ್ರಮವಾಗಿದೆ. ಬಸ್ ದರ ಏರಿಕೆ ಕೂಡಲೇ ಹಿಂಪಡೆಯಬೇಕೆಂದು ಜನತಾದಳ ಆಗ್ರಹಿಸಿದರು.

ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ, ನಗರಸಭೆ ಸದಸ್ಯ ನಸ್ರುರುಲ್ಲಾ, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ಸಣ್ಣ ತಿಮ್ಮಣ್ಣ, ಹೂಸದುರ್ಗ ಅಧ್ಯಕ್ಷ ಗಣೇಶ್‌ಮೂರ್ತಿ, ಹಿರಿಯೂರು ಅಧ್ಯಕ್ಷ ಹನುಮಂತರಾಯಪ್ಪ, ಮೊಳಕಾಲ್ಮೂರು ಅಧ್ಯಕ್ಷ ಕರಿಬಸಪ್ಪ, ವೀರಭದ್ರಪ್ಪ, ಲಿಂಗರಾಜು ಮಠದಹಟ್ಟಿ ವೀರಣ್ಣ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಗೀತಮ್ಮ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಬು ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ!ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಲೋಕಭವನಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್: ಸೋನಿಯಾ ಗಾಂಧಿ ಶುಭ ಹಾರೈಕೆ!ಡಿ.ಕೆ. ಶಿವಕುಮಾರ್ ಸಂಪುಟಕ್ಕೆ ಮುಹೂರ್ತ: ಡಿಸಿಎಂ ಆಗಿ ಜಿ. ಪರಮೇಶ್ವರ್ ಪದಗ್ರಹಣ, ರಾಜ್ಯಾದ್ಯಂತ ನೇರ ಪ್ರಸಾರ!ರಾಜ್ಯದ ಇತಿಹಾಸದಲ್ಲೇ ಪ್ರಥಮ: ಸ್ವಾಮೀಜಿ, ಫಾದರ್, ಮೌಲ್ವಿಗಳ ಸಮ್ಮುಖದಲ್ಲಿ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪದಗ್ರಹಣ!ಡಿ.ಕೆ.ಶಿವಕುಮಾರ್ ಸಿಎಂ ಬೆನ್ನಲ್ಲೇ ಕೆಪಿಸಿಸಿಗೆ ನೂತನ ಸಾರಥಿ: ಬಿ.ಕೆ. ಹರಿಪ್ರಸಾದ್ ಹೆಗಲಿಗೆ ಕೈ ಪಟ್ಟ?ದೆಹಲಿಯ ರೆಸ್ಟೋರೆಂಟ್‌ನಲ್ಲಿ ಭೀಕರ ಅಗ್ನಿ ದುರಂತ: 21 ಮಂದಿ ಸಜೀವ ದಹನ!ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ: ಇತಿಹಾಸ ಬರೆದ ಅದ್ಧೂರಿ ಸಮಾರಂಭ!ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ವಿ. ಸೋಮಣ್ಣಜಲ್ ಜೀವನ್ ಮಿಷನ್ 2.0: ನಾಗಾಲ್ಯಾಂಡ್ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿಜೆಡಿಎಸ್ ಬೂತ್ ಮಟ್ಟದ ಏಜೆಂಟ್‌ಗಳ ಕಾರ್ಯಾಗಾರ ಯಶಸ್ವಿ: ಪ್ರಮುಖ ನಾಯಕರಿಗೆ ಅಭಿನಂದನೆ