ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜಧಾನಿ ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ 'ಜೆ.ಪಿ. ಭವನ'ದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಮತ್ತು ಯುವ ಸಮೂಹದ ಪ್ರಮುಖ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪಾಲ್ಗೊಂಡಿದ್ದರು.
ಪಕ್ಷದ ಬಲವರ್ಧನೆ ಹಾಗೂ ಯುವಜನರನ್ನು ಸಂಘಟಿಸುವ ಕುರಿತು ನಡೆದ ಈ ಸಭೆಯಲ್ಲಿ, ಪಕ್ಷದ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ಗ್ರೇಟರ್ ಬೆಂಗಳೂರು ಜೆಡಿಎಸ್ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ಉಪಸ್ಥಿತರಿದ್ದರು.
ಇವರೊಂದಿಗೆ ವಿಧಾನ ಪರಿಷತ್ ಮಾಜಿ ಸದಸ್ಯರುಗಳಾದ ಈ. ಕೃಷ್ಣಪ್ಪ ಮತ್ತು ಚೌಡರೆಡ್ಡಿ, ಮುಖಂಡರುಗಳಾದ ಪ್ರಕಾಶ್, ಹೆಚ್.ಸಿ. ಕೃಷ್ಣ ಸೇರಿದಂತೆ ಹಲವು ಪ್ರಮುಖ ನಾಯಕರು ಹಾಗೂ ಪಕ್ಷದ ಯುವ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.



