Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿರುದ್ಯೋಗಿಗಳಿಗೆ ರುಡ್‍ಸೆಟ್  ಸಂಸ್ಥೆಯಿಂದ ಉದ್ಯೋಗ ತರಬೇತಿ

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗದ ರುಡ್‍ಸೆಟ್ ಸಂಸ್ಥೆಯು ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗಾಗಿ ಸ್ವಯಂ ಉದ್ಯೋಗ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮೇ
18ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಮಹಿಳೆಯರ 30 ದಿನಗಳ ಟೈಲರಿಂಗ್ ಹಾಗೂ  35 ದಿನಗಳು ಮಹಿಳೆಯರ ಬ್ಯೂಟಿ ಪಾರ್ಲರ್ ತರಬೇತಿ, ಹಾಗೂ ಎಲ್ಲರಿಗೂ 38 ದಿನಗಳು ಕಂಪ್ಯೂಟರ್ ಅಕೌಂಟಿಂಗ್ ತರಬೇತಿ ನೀಡಲಾಗುವುದು.

  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 19 ರಿಂದ 50 ವರ್ಷ ವಯೋಮಿತಿಯೊಳಗಿರಬೇಕು. ಕನ್ನಡ ಓದಲು ಮತ್ತು ಬರೆಯಲು ಬರಬೇಕು. ತರಬೇತಿಗೆ ಸಂಬಂಧಿಸಿದಂತೆ ಪ್ರಾಥಮಿಕ ಜ್ಞಾನ ಹಾಗೂ ಸ್ವಯಂ ಉದ್ಯೋಗ ಮಾಡುವ ಆಸಕ್ತಿ ಇರಬೇಕು. ಸಂಬಂಧಪಟ್ಟ ಕೌಶಲದಲ್ಲಿ ಪ್ರಾಥಮಿಕ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ಈ ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರಲಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಮೊಬೈಲ್ ಸಂಖ್ಯೆ ಹೊಂದಿರುವ ಸ್ವವಿವರದ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಮೇ 18, 2026 ರಂದು ನೇರವಾಗಿ ರುಡ್‍ಸೆಟ್ ಸಂಸ್ಥೆಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8431329162, 8618282445, 8660627785, 9019244300 ಸಂಪರ್ಕಿಸಬಹುದು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಕಂಡುಕೊಳ್ಳಲು ಸಾಧ್ಯ-- ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಟೈಲರಿಂಗ್ ತರಬೇತಿ ಹಾಗೂ ಯಂತ್ರೋಪಕರಣಗಳ ವಿತರಣೆಗೆ ಅರ್ಜಿ ಆಹ್ವಾನಪ್ರತಿಷ್ಠಿತ ಶಾಲೆಗಳ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ: 321 ವಿದ್ಯಾರ್ಥಿಗಳು ಹಾಜರುನಿರುದ್ಯೋಗಿಗಳಿಗೆ ರುಡ್‍ಸೆಟ್  ಸಂಸ್ಥೆಯಿಂದ ಉದ್ಯೋಗ ತರಬೇತಿಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಅದ್ದೂರಿಯಾಗಿ ನಡೆದ ಉಜ್ಜನಿ ಬೀರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ರಾಯಭಾರಿ ಸ್ವಾಮಿ ರಂಗನಾಥಾನಂದಜೀಡಾ. ಅಂಬೇಡ್ಕರ್ ಅವರ ಜಯಂತಿ ಕೇವಲ ಒಂದು ಜಾತಿ ಧರ್ಮಕ್ಕೆ ಮೀಸಲಾಗಬಾರದುಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮೋತ್ಸವಕ್ಕೆ ಸಚಿವ ಎಂ.ಬಿ. ಪಾಟೀಲ್‌ಗೆ ಆಮಂತ್ರಣಜನರ ಅಹವಾಲು ಆಲಿಸಿದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್: ದಾವಣಗೆರೆಯಲ್ಲಿ ‘ಜನತಾದರ್ಶನ’