Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಭಾಷೆಯ ಅಸ್ಮಿತೆಗಾಗಿ ಕನ್ನಡ ಅನುಷ್ಠಾನ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕನ್ನಡ ಭಾಷೆಯ ಅಸ್ಮಿತೆಗಾಗಿ  ಕನ್ನಡದ ಅನುಷ್ಠಾನವನ್ನು ಸರ್ಕಾರ ಮಾಡುತ್ತಿದೆ. ಇದರ ಜೊತೆಗೆ ಕರ್ನಾಟಕ ರಾಜ್ಯದ  ಪ್ರತಿಯೊಬ್ಬರೂ ಕನ್ನಡ ಮಾತನಾಡುವಂತೆ ಆಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ ತಿಳಿಸಿದರು.


ನಗರದ ಕನ್ನಡ ಜಾಗೃತ ಭವನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಬೆಂಗಳೂರು ಗ್ರಾಮಾಂತರ ಜಿಲ್ಲಾ  ಕನ್ನಡ ಜಾಗೃತಿ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಕನ್ನಡ ಸಾಹಿತ್ಯ ಪರಿಷತ್ತುಕನ್ನಡ ಜಾಗೃತ ಪರಿಷತ್ತು  ವತಿಯಿಂದ ನಡೆದ ಕನ್ನಡ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕನ್ನಡಿಗರು ಮೊದಲು ದಿನನಿತ್ಯ ಮತ್ತು ಸಾರ್ಜನಿಕವಾಗಿ ಕನ್ನಡವನ್ನು ಬಳಸಬೇಕು.‌ಕನ್ನಡಿಗರು  ತಮ್ಮ ಪತ್ರ ವ್ಯವಹಾರಗಳನ್ನು  ಕನ್ನಡದಲ್ಲಿ ರಾಜ್ಯ ಸರ್ಕಾರಕ್ಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೂ ಮಾಡಬೇಕು. ಬೆಂಗಳೂರಿನಲ್ಲಿ ಹಲವು ಭಾಷೆಗಳನ್ನು ಮಾತನಾಡುವ ಜನರಿದ್ದಾರೆ.   ಇವರುಗಳ ಮಧ್ಯೆ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಕನ್ನಡಿಗರಿಗೆ ಇದೆ. ಕನ್ನಡ ಅಭಿವೃದ್ದಿ ಪ್ರಾಧಿಕಾರ ಕನ್ನಡೇತರಿಗೆ ಕನ್ನಡ ಕಲಿಸುವ ಯೋಜನೆಯನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಟಿ.ತಿಮ್ಮೇಶ್ ಮಾತನಾಡಿ, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡ ಉಳಿಸಿ ಬೆಳೆಸುವಲ್ಲಿ ಕನ್ನಡಪರ ಸಂಘಟನೆಗಳು ಪ್ರಧಾನ ಪಾತ್ರ ವಹಿಸಿವೆ. ಇದರಿಂದ  ಕನ್ನಡಕ್ಕಾಗಿ ದುಡಿಯುವರಿಗೆ ಸಾರ್ಥಕತೆ ಇದೆ. ಬೆಂಗಳೂರಿನಲ್ಲಿ ಕನ್ನಡಿಗರ ಸಂಖ್ಯೆ ಶೇ.40 ರಷ್ಟು ಮಾತ್ರವಿದೆ. ಕನ್ನಡವನ್ನು ನಿರ್ಲಕ್ಷಿಸುವ ಕನ್ನಡ ವಿರೋಧಿಗಳ ಬಗ್ಗೆ ಸದಾ ಎಚ್ಚರವಹಿಸಬೇಕಾಗಿದೆ.  ಕರ್ನಾಟಕದಲ್ಲಿ ಕನ್ನಡ ಶೇ.100 ರಷ್ಡು ಜಾರಿಗೆ ಬರಬೇಕು. ಕನ್ನಡಿಗರು ಕನ್ನಡ ನಾಡಿನಲ್ಲಿ ವಿದ್ಯೆ ಮತ್ತು ಉದ್ಯೋಗದಿಂದ ವಂಚಿತರಾಗಬಾರದು. ಕನ್ನಡದ ಅನುಷ್ಠಾನಕ್ಕೆ ಪ್ರಸ್ತುತ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಮಿತಿಗಳು  ಮತ್ತು ಸದಸ್ಯರು ಇದ್ದಾರೆ. ಇವರು ಕನ್ನಡಪರ ಸಂಘಟನೆಗಳೊಂದಿಗೆ ಸೇರಿ ಕನ್ನಡ ಅನುಷ್ಠಾನ ಸಮರ್ಪಕವಾಗಿ ಜಾರಿಗೊಳಿಸಬೇಕೆಂದರು.


ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಮಾತನಾಡಿನಮ್ಮ ರಾಜ್ಯದಲ್ಲಿ  ಕಾರ್ಯನಿರ್ವಹಿಸುವ ಬಹುರಾಷ್ಟ್ರೀಯ ಕಂಪನಿಗಳು ಮತ್ತು ರಾಷ್ಟ್ರೀಕೃತ ಬ್ಯಾಂಕುಗಳು , ಸ್ವಾಯತ್ತತೆಯ ವಿಶ್ವವಿದ್ಯಾಲಯಗಳು ಮುಂತಾದವು ಕನ್ನಡ ಭಾಷೆಯನ್ನು ನಿರ್ಲಕ್ಷ್ಯ ಮಾಡುತ್ತಿವೆ.  ಇದರ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗಮನ‌ನೀಡಬೇಕಾಗಿದೆ. ಕನ್ನಡ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಬೇಕಾಗಿದೆ ಎಂದರು.

 ಮನವಿ ಮತ್ತು ಒತ್ತಾಯ. ಶಿಕ್ಷಣದಲ್ಲಿ ದ್ವಿಭಾಷಾ ನೀತಿಯನ್ನು ಶಾಸನವಾಗಿ ರೂಪಿಸಿ ಜಾರಿಗೊಳಿಸಬೇಕೆಂದು ದೊಡ್ಡಬಳ್ಳಾಪುರ ವಿವಿಧ ಕನ್ನಡಪರ ‌ಸಂಘಟನೆಗಳು  ಮುಖ್ಯಮಂತ್ರಿಗಳಿಗೆ ಮನವಿಯನ್ನು  ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್ಲ ಅವರಿಗೆ ನೀಡಿದರು. ದ್ವಿಭಾಷಾ ನೀತಿಯನ್ನು ಶಾಸನಗೊಳಿಸಿ    ಜಾರಿಗೆ ತರುವ ಮೂಲಕ ಕನ್ನಡ ಭಾಷೆಯ ಬಳಕೆ ಮತ್ತು  ಕನ್ನಡ ಭಾಷೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ದ್ವಿಭಾಷಾ ನೀತಿಯನ್ನು ಕಡ್ಡಾಯಗೊಳಿಸುವುದರಿಂದ ಪ್ರತಿಯೊಬ್ಬರೂ ಕನ್ನಡವನ್ನು ಶಿಕ್ಷಣದಲ್ಲಿ ಕಲಿಯುವಂತೆ ಕಡ್ಡಾಯಗೊಳಿಸುತ್ತದೆ ಎಂದು ಕನ್ನಡಪರ ಸಂಘಟನೆಗಳ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು  ತಹಶಿಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಶಂಕರಯ್ಯ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕನ್ನಡಿಗೆ ಸ್ನೇಹಕೂಟದ ಅಧ್ಯಕ್ಷ ರಾಂ.ಕೆ.ಹನುಮಂತಯ್ಯಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರುಗಳಾದ ಕೆ.ಮಹಾಲಿಂಗಯ್ಯನಾಗರತ್ನಮ್ಮ, ವಿ.ಬಸವರಾಜು, ಯು.ಸಿರಾಜ್ ಅಹಮದ್, ರವಿಚಂದ್ರ, ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!