Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಕರೇಕಲ್‌ಕೆರೆ ಭರ್ತಿ ಶಾಸಕ ರಘುಮೂರ್ತಿ ಬಾಗಿನ ಅರ್ಪಣೆ

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಸುಮಾರು ೫೬ ವರ್ಷಗಳ ನಂತರ ತುಂಬಿ ಕೋಡಿಬಿದ್ದ  ಕರೇಕಲ್ ಕೆರೆಗೆ ಗಂಗಾಪೂಜೆ ಮತ್ತು ಬಾಗಿನವನ್ನು ಶಾಸಕ, ರಾಜ್ಯ ಸಣ್ಣಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ಅರ್ಪಿಸಿದರು. 

ಈ ವೇಳೆ ಮಾತನಾಡಿದ ಅವರು, ಈಗಾಗಲೇ ಈ ಕ್ಷೇತ್ರದ ೧೦ಕ್ಕೂ ಹೆಚ್ಚು ಕೆರೆಗಳು ಕೋಡಿಬಿದ್ದಿವೆ. ಕೆರೆ ನೀರಿನಿಂದ ಕೃಷಿ, ಕುಡಿಯುವ ನೀರಿನ ಸಮಸ್ಯೆ ದೂರವಾದಂತಾಗಿದೆ. ಮಳೆಯಿಂದ ಈ ನಾಡು ಸಮೃದ್ದವಾಗಿ ಬೆಳೆಯಲಿ ಎಂದು ಪ್ರಾರ್ಥಿಸುವೆ. ಕಳೆದ ಹಲವಾರು ವರ್ಷಗಳಿಂದ ಈ ಭಾಗದ ಜನರು ಬರಗಾಲವನ್ನು ಎದುರಿಸಿ ಬಸವಳಿದಿದ್ದರು. ಆದರೆ, ದೇವರು ಬಯಲುಸೀಮೆಯ ಮೇಲೆ ಕರುಣೆ ತೋರಿ ಕಳೆದ ಎರಡ್ಮೂರು ವರ್ಷಗಳಿಂದ ಸಮೃದ್ದ ಮಳೆಯನ್ನು ಸುರಿಸುತ್ತಿರುವುದು ನಮ್ಮ ಪುಣ್ಯ.

ಶಾಸಕನಾಗಿ ೧೨ ವರ್ಷದಲ್ಲಿ ಕಾಲಿಟ್ಟಿದ್ದು, ಇದೇ ಮೊದಲ ಬಾರಿಗೆ ಬಾಗಿನ ಅರ್ಪಿಸುವ ಕಾರ್ಯಕ್ರಮ ನನ್ನಪಾಲಿಗೆ ಬಂದಿದೆ.  ಕ್ಷೇತ್ರದ ಎರಡು ಐತಿಹಾಸಿಕ ಕೆರೆಗಳಾದ ಕರೇಕಲ್ ಕೆರೆ, ಅಜ್ಜಯ್ಯನಗುಡಿ ಕೆರೆಗಳು ಕೋಡಿಬಿದ್ದಿವೆ. ಅಲ್ಲದೆ, ದೊಡ್ಡೇರಿ, ನಗರಂಗೆರೆ, ನನ್ನಿವಾಳ, ಚಿಕ್ಕಮಧುರೆಯೂ ಸೇರಿದಂತೆ ೧೦ಕ್ಕೂ ಹೆಚ್ಚು ಕೆರೆಗಳು ಕೋಡಿಬಿದ್ದು ಜನರ ಸಂಕಷ್ಟ ನೀಗಿಸುವ ಭರವಸೆ ಇದೆ ಎಂದರು.

ಗಂಗಾಪೂಜೆ ಮತ್ತು ಬಾಗಿನ ಅರ್ಪಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದ ನಗರಸಭಾ ಸದಸ್ಯ ಟಿ.ಮಲ್ಲಿಕಾರ್ಜುನ ಮಾತನಾಡಿ, ಈ ಭಾಗದ ನಗರಸಭಾ ಸದಸ್ಯನಾಗಿ ಆರು ವರ್ಷ ಕಳೆದಿದ್ದು, ಇದೇ ಮೊದಲಬಾರಿಗೆ ಕರೇಕಲ್ ಕೆರೆ ಕೋಡಿಬಿದ್ದಿದೆ. ತುಂಬಿದ ಗಂಗಾಮಾತೆಗೆ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ಎಲ್ಲರ ಸಹಕಾರದಿಂದ ಹಮ್ಮಿಕೊಂಡಿದ್ದು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಬಾಗಿನ ಅರ್ಪಿಸಿರುವುದು ಸಂತಸ ತಂದಿದೆ ಎಂದರು.

ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಜಾತ, ಸದಸ್ಯರಾದ ಕವಿತಾ, ಸುಮಾ, ರಾಘವೇಂದ್ರ, ರಮೇಶ್‌ಗೌಡ, ನಾಮನಿರ್ದೇಶನ ಸದಸ್ಯ ಬಡಗಿಪಾಪಣ್ಣ, ಮುಖಂಡರಾದ ವೀರೇಶ್, ಕೃಷ್ಣಮೂರ್ತಿ, ಪ್ರಹ್ಲಾದ್ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!