Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾವೇರಿ-2, ಇ-ಸ್ವತ್ತು ಡಿಜಿಟಲ್ ಡೇಟಾ ಲಿಂಕ್: ಸಚಿವ ಕೃಷ್ಣ ಬೈರೇಗೌಡ

Advertisement
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ರಾಜ್ಯದಲ್ಲಿ ಕಾವೇರಿ-2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡುವಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವುದಾಗಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಹೇಳಿದರು.


ಪರಿಷತ್ತಿನಲ್ಲಿ ಸದಸ್ಯರಾದ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಾವೇರಿ 2.0 ತಂತ್ರಾಂಶದಲ್ಲಿ ವಿಭಾಗ ಪತ್ರ ಹಾಗೂ ದಾನ ಪತ್ರಗಳ ನೋಂದಣಿ ಸ್ಥಗಿತವಾಗಿರುವುದಿಲ್ಲ. ಆರ್.ಟಿ.ಸಿ, ಮೋಜಿಣಿ ನಕ್ಷೆ, ಇ ಸ್ವತ್ತು ಖಾತಾ, ಇ-ಆಸ್ತಿ ಖಾತಾ ಹಾಗೂ ಯುಎಲ್ ಎಮ್ ಎಸ್ ಖಾತಾ ಹೊಂದಿರುವ ಸ್ವತ್ತುಗಳ ವಿಭಾಗಪತ್ರ ಹಾಗೂ ದಾನಪತ್ರಗಳು ಎಂದಿನಂತೆ ನೋಂದಣಿ ಆಗುತ್ತಿವೆ.

ಕಾವೇರಿ 2.0 ತಂತ್ರಾಂಶದಲ್ಲಿ 2024-25ನೇ ಸಾಲಿನಲ್ಲಿ 1,15,068 ವಿಭಾಗ ಪತ್ರಗಳು ಮತ್ತು 1,39,134 ದಾನ ಪತ್ರಗಳು ಅದೇ ರೀತಿ 2025-26ನೇ ಸಾಲಿನಲ್ಲಿ 79,515 ವಿಭಾಗ ಪತ್ರಗಳು ಹಾಗೂ 92,618 ದಾನ ಪತ್ರಗಳು ನೋಂದಣಿ ಆಗಿವೆ ಎಂದು ಸಚಿವರು ಮಾಹಿತಿ ನೀಡಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST