Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯೂರು ರೈತರಿಂದ ಬೆಳೆ ವಿಮೆ ನೋಂದಣಿಗೆ ಕೆರೆ-ಅಶೋಕ್

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕಿನಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯನ್ನು ಜಾರಿಗೊಳಿಸಿ ಅಧಿಸೂಚಿಸಲಾಗಿದ್ದು, ಬೆಳೆ ವಿಮೆ ನೋಂದಣಿ ಪ್ರಾರಂಭವಾಗಿದೆ.
ಭತ್ತ (ನೀರಾವರಿ), ಕಡಲೆ (ಮಳೆ ಆಶ್ರಿತ), ಗೋಧಿ (ನೀರಾವರಿ),

ಮುಸುಕಿನಜೋಳ (ಮಳೆ ಆಶ್ರಿತ), ಮುಸುಕಿನಜೋಳ (ನೀರಾವರಿ) ಬೆಳೆಗಳಿಗೆ ವಿಮಾ ನೊಂದಣಿಗೆ 2025ರ ಡಿಸೆಂಬರ್ 15 ಕೊನೆಯ ದಿನವಾಗಿದೆ. ತಮ್ಮ ಹೋಬಳಿ ಮಟ್ಟದ ಬೆಳೆಯ ವಿವರವನ್ನು ಸಂಬಂಧಪಟ್ಟ ಕೃಷಿ ಅಧಿಕಾರಿಗಳು, ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ.


ಬ್ಯಾಂಕಿನಲ್ಲಿ ಬೆಳೆಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿಯಲ್ಲಿ ಒಳಪಡಿಸಲಾಗುವುದು. ತದನಂತರ ಬೆಳೆಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛಿಸದಿದ್ದಲ್ಲಿ, ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದಲ್ಲಿ ಅಂತಹ ರೈತರನ್ನು ಬೆಳೆವಿಮೆ ಯೋಜನೆಯಿಂದ ಕೈ ಬಿಡಲಾಗುವುದು.


ಆರ್ಥಿಕ ಸಂಸ್ಥೆಗಳು, ಬ್ಯಾಂಕ್, ಸಾರ್ವಜನಿಕ ಸೇವಾ ಕೇಂದ್ರ(Common Service Center)ಗಳಲ್ಲಿ ರೈತರನ್ನು ಬೆಳೆ ವಿಮಗೆ ನೊಂದಾಯಿಸಿದಾಗ ಬೆಳೆವಿಮೆ ಪ್ರಸ್ತಾವನೆಯನ್ನು ಹಾಗೂ ವಿಮಾ ಕಂತನ್ನು ನಿಗಧಿತ ಸಮಯದೊಳಗೆ ನಿಯಮಾನುಸಾರ ಅನುಷ್ಠಾನ ವಿಮಾ ಸಂಸ್ಥೆಗಳಿಗೆ ವರ್ಗಾಯಿಸಲು ಕ್ರಮ ಕೈಗೊಳ್ಳತಕ್ಕದ್ದು, ನೋಂದಣಿ ಪ್ರಕ್ರಿಯೆಯ ಹಂತದಲ್ಲಿ ಮೇಲೆ ತಿಳಿಸಿದ ಸಂಸ್ಥೆಗಳ ನಿರ್ಲಕ್ಷ್ಯದಿಂದ ಯಾವುದೇ ಲೋಪ ದೋಷಗಳು ಉಂಟಾದಲ್ಲಿ ಅದರಿಂದಾಗುವ ಬೆಳೆವಿಮೆ ಪರಿಹಾರ ವ್ಯಾಜ್ಯಗಳಿಗೆ ಸಂಬಂಧಿಸಿದ ಸಂಸ್ಥೆಗಳ ನೇರ ಹೊಣೆಗಾರರಾಗಿರುತ್ತಾರೆ.


ಆಸಕ್ತ ರೈತರು ತಮ್ಮ ವ್ಯಾಪ್ತಿಯ ಬ್ಯಾಂಕುಗಳಲ್ಲಿ ಹಾಗೂ ಅನುಮೋದಿತ ಸಾರ್ವಜನಿಕ ಸೇವಾ ಕೇಂದ್ರಗಳಲ್ಲೂ ವಿಮೆಗೆ ನೋಂದಣಿ ಮಾಡಬಹುದಾಗಿದೆ. ಚಿತ್ರದುರ್ಗ ಜಿಲ್ಲೆಗೆ Oriental General Insurance Company ಅನುಷ್ಠಾನ ಸಂಸ್ಥೆಯಾಗಿರುತ್ತದೆ.

ರೈತರು ನೋಂದಣೆಗಾಗಿ ಕಡ್ಡಾಯವಾಗಿ ಫ್ರೂಟ್ಸ್ ಐಡಿ (ಎಫ್‍ಐಡಿ) ಹೊಂದಿರಬೇಕು.
ಆಸಕ್ತ ರೈತರು ನಿಗಧಿತ ದಿನಾಂಕದೊಳಗೆ ಬೆಳೆ ವಿಮೆಗೆ ನೊಂದಣಿ ಮಾಡಲು ಕೋರಿದೆ. ಅಂತಿಮ ಸಮಯದಲ್ಲಿ ಜನದಟ್ಟಣೆಯಿಂದಾಗಿ ನೊಂದಣಿಯಲ್ಲಿ ತಪ್ಪುಗಳು ಆಗುವ ಸಂಭವವಿರುತ್ತದೆ. ಆದ್ದರಿಂದ ಸಕಾಲದಲ್ಲಿ ನೊಂದಣಿ ಮಾಡಿಕೊಳ್ಳುವಂತೆ ಹಿರಿಯೂರು ಸಹಾಯಕ ಕೃಷಿ ನಿರ್ದೇಶಕ ಜೆ.ಅಶೋಕ್ ಮನವಿ ಮಾಡಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST