Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಮುಂದಿನ ಜೀವನವನ್ನು ಸಾರ್ವಜನಿಕರ ಸೇವೆಗೆ ಮೀಸಲಿಡುವೆ-ಕೆ.ಜಿ ಜಗದೀಶ್

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಸರ್ಕಾರಿ ನೌಕರರು ಕಚೇರಿಗೆ ಕೆಲಸದ ನಿಮಿತ್ತ ಬರುವ ಸಾರ್ವಜನಿಕರ ಸೇವೆಗೆ ಮೀಸಲಿರಬೇಕೆಂದು ರಾಷ್ಟ್ರೀಯ ಹೆದ್ದಾರಿ ವಲಯದ ನಿವೃತ್ತ ಮುಖ್ಯ ಇಂಜಿನಿಯರ್ ಕೆ.ಜಿ.ಜಗದೀಶ್ ಕರೆ ನೀಡಿದರು.


ಜಿಲ್ಲಾ ಗುತ್ತಿಗೆದಾರರ ಸಂಘ, ಲೋಕೋಪಯೋಗಿ, ಯೋಜನಾ, ಕುಡಿಯುವ ನೀರು ಪೂರೈಕೆ ಯೋಜನೆ, ಪಂಚಾಯತ್‌ರಾಜ್ ಇಂಜಿನಿಯರಿಂಗ್, ಸಣ್ಣ ನೀರಾವರಿ ರಾಷ್ಟ್ರೀಯ ಹೆದ್ದಾರಿ ವಿಭಾಗಗಳು, ನಿರ್ಮಿತಿ ಕೇಂದ್ರ ಇವುಗಳ ಸಹಯೋಗದೊಂದಿಗೆ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಅಧಿಕಾರವಿರುವುದು ದರ್ಪ ತೋರುವುದಕ್ಕಲ್ಲ ಎನ್ನುವುದನ್ನು ನಾನು ಸೇವೆಗೆ ಸೇರಿದಾಗಿನಿಂದಲೂ ಮನವರಿಕೆ ಮಾಡಿಕೊಂಡು ಕೈಲಾದಷ್ಟು ಜನಸೇವೆ ಸಲ್ಲಿಸಿದ್ದೇನೆ. ಶೇ.೧ ರಷ್ಟು ಮಂದಿಗೆ ಮಾತ್ರ ಸರ್ಕಾರಿ ನೌಕರಿ ಸಿಗುತ್ತದೆ. ಉಳಿದವರಿಗೆ ಈ ಅವಕಾಶವಿಲ್ಲ. ನನಗೆ ಜನಸಾಮಾನ್ಯರು ಕೊಟ್ಟ ನೌಕರಿಯನ್ನು ಅವರ ಸೇವೆಗಾಗಿಯೇ ಮುಡುಪಾಗಿಟ್ಟಿದ್ದೆ. ನನ್ನ ಅಧಿಕಾರವಧಿಯಲ್ಲಿ ಎಲ್ಲರ ಪ್ರೀತಿ ವಿಶ್ವಾಸ ಗಳಿಸಿ ಕೆಲವು ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡು ಕೆಲಸ ಮಾಡಿದ್ದೇನೆ. ನಿವೃತ್ತಿಯ ನಂತರವೂ ಈ ಜಿಲ್ಲೆಗೆ ನನ್ನ ಸೇವೆಯಿರುತ್ತದೆಂದು ಭರವಸೆ ನೀಡಿದರು.

ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ನಿವೃತ್ತ ಅಧೀಕ್ಷಕ ಇಂಜಿನಿಯರ್ ಎಂ.ರಮೇಶ್ ನಿವೃತ್ತಿ ನಂತರ ಜೀವನ ಕಷ್ಟಕರವಾಗಿರುತ್ತದೆ. ಸುಮ್ಮನೆ ಕುಳಿತು ಕಾಲ ಕಳೆಯುವುದು ಬಲು ಬೇಸರ. ಅಭಿವೃದ್ದಿ ಕೆಲಸಗಳಿಗೆ ಇವರ ಕೊಡುಗೆ ಸಾಕಷ್ಟಿದೆ. ಸರ್ಕಾರದಿಂದ ಅನುದಾನ ತಂದು ಅದನ್ನು ಯಾವ ಕಾಮಗಾರಿಗೆ ಹೇಗೆ ಎಷ್ಟು ಬಳಸಬೇಕೆಂಬ ಬುದ್ದಿವಂತಿಕೆಯಿಂದ ಕೆ.ಜಿ.ಜಗದೀಶ್ ಕೆಲಸ ಮಾಡುತ್ತಿದ್ದರು. ನಿವೃತ್ತಿಯ ನಂತರವೂ ಅವರ ಸಲಹೆ ಸಹಕಾರವನ್ನು ಇಂಜಿನಿಯರ್‌ಗಳು ಪಡೆದುಕೊಳ್ಳುವುದು ಉತ್ತಮ ಎಂದು ಹೇಳಿದರು.

ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಮಾತನಾಡುತ್ತ ಮುಂದಿನ ಯೋಜನೆಗಳ ಬಗ್ಗೆ ನಿಮ್ಮ ಕನಸು ಸಾಕಾರಗೊಳ್ಳಲಿ. ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳನ್ನು ಜೊತೆಯಲ್ಲಿಟ್ಟುಕೊಳ್ಳಿ. ಬಯಲುಸೀಮೆ ಚಿತ್ರದುರ್ಗ ಜಿಲ್ಲೆ ಅಭಿವೃದ್ದಿಗೆ ನಿಮ್ಮ ಸೇವೆ ಸಿಗಲೆಂದು ಕೆ.ಜಿ.ಜಗದೀಶ್‌ರವರಲ್ಲಿ ಮನವಿ ಮಾಡಿದರು.

ನಿವೃತ್ತ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಂಗನಾಥ್ ಮಾತನಾಡಿ ಸದಾ ಸರ್ಕಾರಿ ನೌಕರರ ಪರವಾಗಿದ್ದ ಕೆ.ಜಿ.ಜಗದೀಶ್‌ರವರು ಕರ್ನಾಟಕದಲ್ಲಿ ಭೀಕರ ಬರಗಾಲ ಕಾಣಿಸಿಕೊಂಡಾಗ ನೌಕರರಿಂದ ಸಂಗ್ರಹಿಸಿದ ೭೪ ಲಕ್ಷ ರೂ.ಗಳನ್ನು ಸರ್ಕಾರಕ್ಕೆ ನೀಡಿ ಮಾನವೀಯತೆ ಮೆರೆದರು. ೨೦೧೩ ರಲ್ಲಿ ಚಿತ್ರದುರ್ಗದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ನಡೆದಾಗಲು ಇವರ ಪಾತ್ರವಿತ್ತು. ಅನೇಕರಿಗೆ ಸಹಾಯ ಮಾಡಿದ್ದಾರೆ.

ಸಹನೆ, ತೃಪ್ತಿ, ಮಾನವೀಯತೆಯನ್ನಿಟ್ಟುಕೊಂಡು ಅಧಿಕಾರವಧಿಯಲ್ಲಿ ಕೆಲಸ ಮಾಡಿರುವ ನಿಮ್ಮ ನಿವೃತ್ತಿ ಜೀವನ ಸುಖಮಯವಾಗಿರಲೆಂದು ಹಾರೈಸಿದರು.

ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಕೆ.ಮಲ್ಲೇಶಪ್ಪ ಮಾತನಾಡಿದರು. ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಬಿ.ಎಸ್.ಹರೀಶ್‌ಕುಮಾರ್, ಕಾರ್ಯಪಾಲಕ ಇಂಜಿನಿಯರ್‌ಗಳಾದ ನಾಗರಾಜ್, ಎಲ್.ಹನುಮಂತಪ್ಪ, ಕೆ.ಮಲ್ಲಿಕಾರ್ಜುನ್ ಇವರುಗಳು ವೇದಿಕೆಯಲ್ಲಿದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!