ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಪಿಸಿಸಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ನೂತನ ಅಧ್ಯಕ್ಷರ ಸಭೆ ಹಿರಿಯ ನಾಯಕರ ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ಜರುಗಿತು. ಜಿಲ್ಲಾ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಬಲಪಡಿಸುವುದು ಹಾಗೂ ಸರ್ಕಾರದ ಜನಪರ ಯೋಜನೆಗಳನ್ನು ಪ್ರತಿಯೊಬ್ಬ ನಾಗರಿಕರಿಗೂ ತಲುಪಿಸುವ ಕುರಿತು ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಲಾಯಿತು.
ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕರ್ತರನ್ನು ಒಗ್ಗೂಡಿಸಿ ಮುನ್ನಡೆಸುವ ಹಾಗೂ ಕೆಳಹಂತದಿಂದ ಪಕ್ಷದ ಚಟುವಟಿಕೆಗಳಿಗೆ ಮರುಜೀವ ನೀಡುವ ಕುರಿತು ನೂತನ ಜಿಲ್ಲಾಧ್ಯಕ್ಷರಿಗೆ ಹಲವು ಪ್ರಮುಖ ಸಲಹೆ-ಸೂಚನೆಗಳನ್ನು ನೀಡಿದರು.
ಈ ಮಹತ್ವದ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಕೆ.ಸಿ. ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ಸೇರಿದಂತೆ ಹಲವು ಪ್ರಮುಖ ನಾಯಕರು ಪಾಲ್ಗೊಂಡು ನೂತನ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡಿದರು.
ಸಭೆಯಲ್ಲಿ ಪಕ್ಷದ ಆಂತರಿಕ ಶಕ್ತಿ ವರ್ಧನೆ ಮತ್ತು ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಸಕ್ರಿಯವಾಗಿಡುವ ಕುರಿತು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು.




