Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ: ಸಿಎಂ

ಚಂದ್ರವಳ್ಳಿ ನ್ಯೂಸ್, ಚನ್ನಪಟ್ಟಣ:
ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.


ಯೋಗೀಶ್ವರ್ ಪರ ರೋಡ್ ಶೋ ನಲ್ಲಿ‌ಭಾಗವಹಿಸಿ ಚನ್ನಪಟ್ಟಣ ಜನತೆಗೆ ಕರೆ ನೀಡಿದರು. ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದು ಕಾಂಗ್ರೆಸ್ಸಿಗೆ ಮರಳಿದ್ದಾರೆ. ಇವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಯೋಗೀಶ್ವರ್ ಗೆಲ್ಲುವ ಮೂಲಕ‌ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿ ಎಂದು ಕರೆ ನೀಡಿದರು.

 ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ  ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೀಶ್ವರ್ ಅವರೇ ಭರ್ಜರಿ ಜಯಗಳಿಸೋದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದರು.

ಸರ್ಕಾರದಲ್ಲಿ ಯೋಗೀಶ್ವರ್ ಇರ್ತಾರೆ-
ನಮ್ಮದು ಜನಕಲ್ಯಾಣದ ಸರ್ಕಾರ. ಈ ಸರ್ಕಾರದಲ್ಲಿ ಯೋಗೀಶ್ವರ್ ಅವರು ಇರಬೇಕು. ಹೆಚ್.ಡಿ.ಕುಮಾರಸ್ವಾಮಿಯವರು ಶಾಸಕರಾಗಿ, ಮುಖ್ಯಮಂತ್ರಿ ಆಗಿದ್ದಾಗಲೂ ಮಾಡದ ಚನ್ನಪಟ್ಟಣದ ಅಭಿವೃದ್ಧಿ ಕೆಲಸಗಳು ಮುಂದಿನ ತಿಂಗಳಿನಿಂದ ಶಾಸಕರಾಗಿ ಯೋಗೀಶ್ವರ್ ಅವರು ಮುಂದುವರೆಸುತ್ತಾರೆ. ಇವತ್ತು ನಾಮಪತ್ರ ಸಲ್ಲಿಕೆ ಬಳಿಕ ನಾನು ಮತ್ತೆ ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಬರುತ್ತೇನೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಮಾಜಿ ಸಚಿವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣಮಾಜಿ ಸಂಸದ ಡಿ.ಕೆ.ಸುರೇಶ್ ಸೇರಿ ಹತ್ತಕ್ಕೂ ಹೆಚ್ಚು ಮಂದಿ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!