Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕುಮಾರಸ್ವಾಮಿಯವರು ಬಂದೂಕು ಹಿಡಿದು ಯುದ್ಧ ಮಾಡ್ತಾರಾ?

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿಯವರು ರಾಜಕೀಯ ಯುದ್ಧ ಅಂದ್ರೆ ಬಂದೂಕು ಹಿಡಿದು ಮಾಡ್ತಾರಾ
? ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವ್ಯಂಗ್ಯವಾಡಿದರು.

ಸದಾಶಿವನಗರದ ನಿವಾಸದ ಬಳಿ ಇಂದು ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಯುದ್ಧ ಅಂದ್ರೆ ಟೀಕೆ, ಟಿಪ್ಪಣಿ. ಸರ್ಕಾರ ಉತ್ತರ ಕೊಡಲು ಸಮರ್ಥವಿದೆ. ಅವರು ದಾಖಲಾತಿ ಬಿಡುಗಡೆ ಮಾಡುತ್ತೇನೆ ಅಂತ ಹೇಳಿದ್ದಾರೆ. ಬಿಡುಗಡೆ ಮಾಡಲಿ, ಆಮೇಲೆ ಉತ್ತರ ಕೊಡುತ್ತೇವೆ ಎಂದು ಪರಮೇಶ್ವರ್ ಹೇಳಿದರು. ಕುಮಾರಸ್ವಾಮಿ ಅವರು ಕೇಂದ್ರದ ಯೋಜನೆಗಳ ಸಂಬಂಧ ರಾಜ್ಯಕ್ಕೆ ಸಹಾಯ ಮಾಡಬೇಕು. ಯುದ್ಧ ಮಾಡ್ತೇನೆ ಅಂದ್ರೆ ಜನರು ಗಮನಿಸುತ್ತಾರೆ. ಕೇಂದ್ರ ಸಚಿವರಿದ್ದಾರೆ, ದೊಡ್ಡ ಖಾತೆ ಅವರ ಬಳಿ ಇದೆ. ರಾಜ್ಯ ಸರ್ಕಾರಕ್ಕೆ ಏನು ಕೊಡುಗೆ ಕೊಡ್ತಾರೆ ನೋಡೋಣ ಎಂದು ಗೃಹ ಸಚಿವರು ಪ್ರಶ್ನಿಸಿದರು.

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಕೊಡುವಂತೆ ಬಿಜೆಪಿಗರು ಆಗ್ರಹ ಮಾಡುತ್ತಿದ್ದಾರೆ. ಈಗಾಗಲೇ ತನಿಖೆ ನಡೆಯುತ್ತಿದೆ. ಸಿಬಿಐಗೆ ಕೊಡುವ ಅಗತ್ಯವೇನೂ ಕಾಣಿಸುತ್ತಿಲ್ಲ. ನಮ್ಮ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಏನಾದರೂ ಲ್ಯಾಪ್ಸ್ ಇದ್ರೆ ಗೊತ್ತಾಗುತ್ತದೆ. ಲ್ಯಾಪ್ಸ್ ಇದ್ರೆ ಬೇರೆ ಕ್ರಮ ತೆಗೆದುಕೊಳ್ಳುತ್ತೇವೆ. ಶಾಸಕರ ಹೆಸರನ್ನು ಬಿಜೆಪಿಗರು ಹೇಳುತ್ತಿದ್ದಾರೆ. ಎಫ್ಐಆರ್ ನಲ್ಲಿ ಹೆಸರು ಬಿಟ್ಟಿದ್ದಾರೆ. ಡೆತ್​ನೋಟ್​ನಲ್ಲಿ ಶಾಸಕರ ಹೆಸರಿದೆ ಅಂತಿದ್ದಾರೆ. ಎಲ್ಲವನ್ನೂ ನೋಡುತ್ತೇವೆ, ಕಾನೂನು ಪ್ರಕಾರ ತನಿಖೆ ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಚಿವ ಜಿ.ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸದಾಶಿವ ನಗರದ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿ ಮಾತನಾಡಿದ ಅವರು, ರಾಜಕೀಯ ವಿಚಾರಗಳ ಬಗ್ಗೆ ಏನೂ ಚರ್ಚೆ ಮಾಡಿಲ್ಲ. ಖರ್ಗೆಯವರು ನನಗೆ ಹಿರಿಯಣ್ಣ. ಕಾಫಿ ಕುಡಿದೆವು, ಕುಟುಂಬದ ಬಗ್ಗೆ ಮಾತನಾಡಿದ್ದೇವೆ. ಅವರ ಆರೋಗ್ಯ ವಿಚಾರಿಸಿದ್ದೇನೆ. ನಮ್ಮದು ಒಂದೇ ಕುಟುಂಬ, ಸೌಜನ್ಯದ ಭೇಟಿ. ನಾವು ರಾಜಕೀಯ ಏನೂ ಮಾತಾಡಲ್ಲ ಎಂದು ತಿಳಿಸಿದರು.

ಪ್ರಿಯಾಂಕ್ ಖರ್ಗೆ, ಸಂಸದ ರಾಧಾಕೃಷ್ಣ ಇದ್ದಾರೆ. ನಾವೆಲ್ಲ ಮಾತಾಡ್ತೇವೆ. ಪ್ರಿಯಾಂಕ್​ ಅವರನ್ನು ಚಿಕ್ಕಂದಿನಿಂದ ನೋಡಿದ್ದೇನೆ. ಅವರ ಕುಟುಂಬದ ಜೊತೆಗೆ 40 ವರ್ಷದ ಸಂಬಂಧವಿದೆ. ಎಐಸಿಸಿ ಅಧ್ಯಕ್ಷರಿಗೆ ಅವರದೇ ಆದ ಚಾನೆಲ್ ಇದೆ. ಅವರು ಮಾಹಿತಿ ಪಡೆದುಕೊಂಡಿರ್ತಾರೆ. ಅವರೇನೂ ಕೇಳಿಲ್ಲ, ನಾನೇನೂ ಹೇಳಿಲ್ಲ ಎಂದು ತಿಳಿಸಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!