Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುತ್ತಿಗೆದಾರರ 32 ಸಾವಿರ ಕೋಟಿ ಬಾಕಿ ಕೊಡಿ-ಕುಮಾರಸ್ವಾಮಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಾಖಲೆ ಕೊಡಿ.. ದಾಖಲೆ ಕೊಡಿ ಎನ್ನುತ್ತಿದ್ದೀರಿ.. ಇಲ್ನೋಡಿ ಸನ್ಮಾನ್ಯ ಸಿದ್ದರಾಮಯ್ಯನವರೇ.. ನಿಮ್ಮ ಖೊಟ್ಟಿ ಗ್ಯಾರಂಟಿ ಸರಕಾರದ ಲೂಟಿ ಸಾಕ್ಷಿಗುಡ್ಡೆ. ಪತ್ರಿಕೆಯವರೇ ನಿಮ್ಮ ಸಾಕ್ಷಿಗುಡ್ಡೆಯ ಸಾಕ್ಷಾತ್ಕಾರ ಮಾಡಿಸಿದ್ದಾರೆ!! ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ನಿಮ್ಮ ಸರಕಾರ ಗುತ್ತಿಗೆದಾರರನ್ನು ಎಷ್ಟು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿದೆ ಎನ್ನುವುದಕ್ಕೆ ಈ ಸಾಕ್ಷಿಗುಡ್ಡೆ ಸಾಕ್ಷ್ಯ ಸಾಲದೇ ಮುಖ್ಯಮಂತ್ರಿಗಳೇ..? ಎಂದು ಕುಮಾರಸ್ವಾಮಿ ಚುಚ್ಚಿದ್ದಾರೆ.

ಚೆಂಬು ಹಾಕಿ ಹಂಡೆ ಹೊಡೆದರು ಎನ್ನುವಂತೆ ಗ್ಯಾರಂಟಿ ಹೆಸರಿನಲ್ಲಿ ಬಿಡಿಗಾಸು ಕೊಟ್ಟು ಕೋಟಿ ಕೋಟಿ ಲೂಟಿ ಮಾಡುತ್ತಿದ್ದೀರಿ.

ಗುತ್ತಿಗೆದಾರರ 32,000 ಕೋಟಿಯಷ್ಟು ಬಿಲ್ ಬಾಕಿ ಬಿದ್ದಿದೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು ಕೂಡ ಬಿದ್ದಿದೆ! ಸಾಲಸೋಲ ಮಾಡಿ ಕಾಮಗಾರಿ ಮಾಡಿರುವ ಗುತ್ತಿಗೆದಾರರು ದಯಾಮರಣಕ್ಕೆ ಅರ್ಜಿ ಬರೆಯುತ್ತಿದ್ದಾರೆ!! ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಗುತ್ತಿಗೆದಾರರ ಬಿಲ್ ಬಾಕಿ ಪಟ್ಟಿ ನೋಡಿ..

  • ಜಲ ಸಂಪನ್ಮೂಲ: 14,600 ಕೋಟಿ, ಲೋಕೋಪಯೋಗಿ: 10,000 ಕೋಟಿ, ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್: 3,100 ಕೋಟಿ, ಸಣ್ಣ ನೀರಾವರಿ: 2,800 ಕೋಟಿ, ಇತರೆ ಇಲಾಖೆ: 1,500 ಕೋಟಿ ಒಟ್ಟು: 32,000 ಕೋಟಿ!! ಗುತ್ತಿಗೆದಾರರ ಬಾಕಿ ಇದೆ ಎಂದು ಕೇಂದ್ರ ಸಚಿವರು ಲೇವಡಿ ಮಾಡಿದ್ದಾರೆ.
    ಭಂಡತನ ಏಕೆ? ಆಗಿರುವ ತಪ್ಪು ಸರಿಪಡಿಸಿಕೊಳ್ಳಿ.


  • ವಿನಾಕಾರಣ ಸಮರ್ಥನೆ ಲಾಯಕ್ಕಲ್ಲ. ಗುತ್ತಿಗೆದಾರರ ಬದುಕು ಉಳಿಸಿ ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ಹರಿಸಿ. ಇದ್ದಿದ್ದನ್ನು ಇದ್ದಹಾಗೆ ಹೇಳಿದ್ದೇನೆ. ನೀವೂ, ನಿಮ್ಮ ಸಂಪುಟ ನನ್ನ ಮೇಲೆ ವಾಗ್ಯುದ್ಧಕ್ಕಿಳಿದರೆ ಉಪಯೋಗವೇನು? ಗುತ್ತಿಗೆದಾರರ ಬಾಕಿ ಪಾವತಿಗಿಂತ ನನ್ನನ್ನು ಟಾರ್ಗೆಟ್ ಮಾಡುವುದು ಮುಖ್ಯವಲ್ಲ ಎಂದು ಕುಮಾರಸ್ವಾಮಿ ಕಿವಿ ಮಾತು ಹೇಳಿದ್ದಾರೆ.


 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST