ಚಂದ್ರವಳ್ಳಿ ನ್ಯೂಸ್ ಬೆಂಗಳೂರು:
ಕರ್ನಾಟಕ ಸರ್ಕಾರವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದು, ಬೆಂಗಳೂರಿನ ಆಡಳಿತ ವಿಭಾಗದ ಡೆಪ್ಯೂಟಿ ಕಮಿಷನರ್ ಆಫ್ ಪೊಲೀಸ್ (DCP) ಆಗಿ ಕಾರ್ಯನಿರ್ವಹಿಸುತ್ತಿದ್ದ ಕುಶಾಲ್ ಚೌಕ್ಸೆ (IPS 2018) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಚಿತ್ರದುರ್ಗ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) ವರ್ಗಾಯಿಸಿ ಆದೇಶಿಸಿದೆ.
ಈ ಹಿಂದೆ ಚಿತ್ರದುರ್ಗ ಎಸ್‌ಪಿಯಾಗಿದ್ದ ರಂಜಿತ್ ಕುಮಾರ್ ಬಂಡಾರು ಅವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಕುಶಾಲ್ ಚೌಕ್ಸೆ ಅವರನ್ನು ನೇಮಕ ಮಾಡಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (DPAR) ಅಧೀನ ಕಾರ್ಯದರ್ಶಿ ಸಂಜಯ್ ಬಿ. ಎಸ್. ಅವರು ರಾಜ್ಯಪಾಲರ ಆದೇಶದ ಮೇರೆಗೆ ಸೆಪ್ಟೆಂಬರ್ 23, 2026 ರಂದು ಈ ಅಧಿಸೂಚನೆಯನ್ನು ಹೊರಡಿಸಿದ್ದಾರೆ.




