Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ತಂತ್ರಜ್ಞಾನ ಆಧಾರಿತ ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಟೂಲ್ ಪ್ರಾರಂಭ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ತಂತ್ರಜ್ಞಾನ ಆಧಾರಿತ ಕೃಷಿಗೆ ಒತ್ತು ನೀಡುವ ಸಲುವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ರ ಕೇಂದ್ರ ಬಜೆಟ್‌ನಲ್ಲಿ ಭಾರತ್ ವಿಸ್ತಾರ್ಕೃತಕ ಬುದ್ಧಿಮತ್ತೆ ಟೂಲ್ ಪ್ರಾರಂಭಿಸುವುದಾಗಿ ಘೋಷಿಸಿದರು.

ಇದು ಬಹುಭಾಷಾ ಕೃತಕ ಬುದ್ಧಿಮತ್ತೆ (AI) ಸಾಧನವಾಗಿದ್ದು ರೈತರಿಗೆ ಬೆಳೆಗಳು, ಮಣ್ಣು, ಹವಾಮಾನ ಮತ್ತು ಸರ್ಕಾರಿ ಯೋಜನೆಗಳ ಕುರಿತು ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಮತ್ತು ವೈಜ್ಞಾನಿಕ ಸಲಹೆಯನ್ನು ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.


ಇದನ್ನು ಅಗ್ರಿಸ್ಟ್ಯಾಕ್ ಮತ್ತು ICAR ನಿಂದ ಪ್ರಮಾಣೀಕೃತ ಡೇಟಾವನ್ನು ಸಂಯೋಜಿಸುವ ಮೂಲಕ ಅಭಿವೃದ್ಧಿಪಡಿಸಲಾಗುತ್ತಿದೆ. ಕೃಷಿ ನಿರ್ಧಾರಗಳನ್ನು ಹೆಚ್ಚು ನಿಖರ, ವೇಗ ಮತ್ತು ಕಡಿಮೆ ಸಮಸ್ಯೆಗಳು ಇರುವಂತೆ ನೋಡಿಕೊಳ್ಳುವುದು ಇದರ ಉದ್ದೇಶವಾಗಿದೆ.

ಏನಿದು ಭಾರತ್ ವಿಸ್ತಾರ್?
ಎಐ ಟೂಲ್ ಹೇಗೆ ಕೆಲಸ ಮಾಡುತ್ತೆ
? ಭಾರತ್ ವಿಸ್ತಾರ್, ಇದರ ವಿಸ್ತರಿತ ರೂಪ ವರ್ಚುವಲಿ ಇಂಟಿಗ್ರೇಟೆಡ್ ಸಿಸ್ಟಮ್ ಟು ಆಕ್ಸೆಸ್ ಅಗ್ರಿಕಲ್ಚರಲ್ ರಿಸೋರ್ಸಸ್ (VISTAAR) ಪ್ಲಾಟ್‌ಫಾರ್ಮ್.
ಇದು ಕೃಷಿ-ಸ್ಟ್ಯಾಕ್ ಪೋರ್ಟಲ್ ಮತ್ತು
ICAR ಅನುಮೋದಿತ ಕೃಷಿ ಪದ್ಧತಿಗಳನ್ನು ಎಐ ವ್ಯವಸ್ಥೆಗಳೊಂದಿಗೆ ಸಂಯೋಜಿಸುತ್ತದೆ. ರೈತರಿಗೆ ಒಂದೇ ಕಡೆ ವಿಶ್ವಾಸಾರ್ಹ, ವೈಜ್ಞಾನಿಕ ಸಲಹೆಯನ್ನು ಒದಗಿಸುವುದು ಇದರ ಗುರಿಯಾಗಿದೆ. ಇದು ಡೇಟಾ ಮತ್ತು ಸಂಶೋಧನೆಯ ಆಧಾರದ ಮೇಲೆ ಕೃಷಿ ಚಟುವಟಿಕೆಗಳ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಅನುವು ಮಾಡಿಕೊಡುತ್ತದೆ.

ಭಾರತ್ ವಿಸ್ತಾರ್ ಎಐ ಟೂಲ್ ಬೆಳೆ ಮಾದರಿಗಳು, ಮಣ್ಣಿನ ಗುಣಮಟ್ಟ, ಹವಾಮಾನ ಪ್ರವೃತ್ತಿಗಳು ಮತ್ತು ಇತರ ಕೃಷಿ ದತ್ತಾಂಶಗಳನ್ನು ವಿಶ್ಲೇಷಿಸಿ ರೈತರಿಗೆ ಸಲಹೆ ಅಥವಾ ಶಿಫಾರಸುಗಳನ್ನು ಮಾಡುತ್ತದೆ. ಸರ್ಕಾರದ ಪ್ರಕಾರ, ಇದು ರೈತರಿಗೆ ಸರಳ ಮತ್ತು ಪ್ರಾಯೋಗಿಕ ರೀತಿಯಲ್ಲಿ ವೈಜ್ಞಾನಿಕ ಮಾಹಿತಿಯನ್ನು ತಲುಪಿಸುತ್ತದೆ. ಕೃಷಿ ಚಟುವಟಿಕೆಗಳಲ್ಲಿನ ನಷ್ಟವನ್ನು ಕಡಿಮೆ ಮಾಡುವುದು ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವುದು ವೇದಿಕೆಯ ಗುರಿಯಾಗಿದೆ. ಸರಿಯಾದ ಸಮಯದಲ್ಲಿ ನಿಖರವಾದ ಮಾಹಿತಿಯನ್ನು ಒದಗಿಸುವುದು ವೆಚ್ಚಗಳನ್ನು ನಿಯಂತ್ರಿಸಲು ಮತ್ತು ಉತ್ಪಾದನೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಕಿಸಾನ್ ಕಾಲ್ ಸೆಂಟರ್:
ಭಾರತ್ ವಿಸ್ತಾರ್ ಟೂಲ್ ಕಿಸಾನ್ ಕಾಲ್ ಸೆಂಟರ್ ಸೇವೆಗಳೊಂದಿಗೆ ಲಿಂಕ್ ಆಗಲಿದೆ. ಇದರಿಂದಾಗಿ ರೈತರು ನೇರವಾಗಿ ಅನುಮಾನಗಳನ್ನು ಬಗೆಹರಿಸಿಕೊಳ್ಳಲು ಮತ್ತು ಸಮಸ್ಯೆಗಳಿಗೆ ಪರಿಹಾರಗಳನ್ನು ಪಡೆಯಲು ಸಾಧ್ಯವಾಗಲಿದೆ.


ರಿಯಲ್ ಟೈಂ ಹವಾಮಾನ ಮುನ್ಸೂಚನೆಗಳನ್ನು ಲಭ್ಯವಾಗುವಂತೆ ಮಾಡಲಾಗುತ್ತದೆ.ಪ್ರಸ್ತುತ ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಉತ್ತರ ಪ್ರದೇಶಗಳಲ್ಲಿ ಸುಮಾರು 4,000 ಮಂದಿ ಆಧಾರಿತ ಟೆಲಿಗ್ರಾಮ್ ಚಾಟ್‌ಬಾಟ್‌ನಿಂದ ಕೃಷಿ ಸಲಹೆಯನ್ನು ಪಡೆಯುತ್ತಿದ್ದಾರೆ.


ಡಿಜಿಟಲ್ ಗ್ರೀನ್ ಭಾಷಿಣಿ ತಂತ್ರಜ್ಞಾನವನ್ನು ಬಳಸಿಕೊಂಡು ಈ ಚಾಟ್‌ಬಾಟ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಇದು ಹಿಂದಿ, ತೆಲುಗು ಮತ್ತು ಇಂಗ್ಲಿಷ್‌ನಲ್ಲಿ ಪ್ರತಿಕ್ರಿಯಿಸುತ್ತದೆ. ಇದೀಗ ಭಾರತ್ ವಿಸ್ತಾರ್ ಎಐ ಟೂಲ್​​ನೊಂದಿಗೆ ದೇಶದ ಎಲ್ಲ ಭಾಗದ ರೈತರಿಗೆ ಅವರದೇ ಭಾಷೆಗಳಲ್ಲಿ ಸಲಹೆ ಸೂಚನೆ ಪಡೆಯಬಹುದಾಗಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!