ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಲ್ ಇಂಡಿಯಾ ದಲಿತ ಆಕ್ಷನ್ ಕಮಿಟಿಯ ಅಧ್ಯಕ್ಷ ಸಿ.ಎಚ್.ಎನ್ ರಾಮು ಅವರು ಬರೆದಿರುವ 'Sacrificed Dalit Oppression; My People Are Orphans' ಪುಸ್ತಕದ 3ನೇ ಆವೃತ್ತಿಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಬೆಂಗಳೂರಿನಲ್ಲಿ ನಡೆದ ಅರ್ಥಪೂರ್ಣ ಸಮಾರಂಭದಲ್ಲಿ ಬಿಡುಗಡೆ ಮಾಡಿದರು.
ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು, ದಲಿತ ಸಮುದಾಯ ಎದುರಿಸುತ್ತಿರುವ ಸವಾಲುಗಳು ಮತ್ತು ಶೋಷಣೆಯ ಕುರಿತು ಬೆಳಕು ಚೆಲ್ಲುವ ಇಂತಹ ಕೃತಿಗಳು ಸಮಾಜದಲ್ಲಿ ಜಾಗೃತಿ ಮೂಡಿಸಲು ಅತ್ಯಂತ ಅಗತ್ಯ ಎಂದು ಹೇಳಿದರು.
ಈ ಮಹತ್ವದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಡಾ. ಕೆ. ಅನ್ನದಾನಿ, ಹಿರಿಯ ವಕೀಲರಾದ ರವಿಶಂಕರ್, ಕರ್ನಾಟಕ ಬೋವಿ ಮಹಾಸಭಾದ ಅಧ್ಯಕ್ಷ ಚಿನ್ನಸ್ವಾಮಿ ಸೇರಿದಂತೆ ಅನೇಕ ಗಣ್ಯರು ಹಾಗೂ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಅಪಾರ ಅನುಯಾಯಿಗಳು ಉಪಸ್ಥಿತರಿದ್ದರು.




