Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

‘ನಿತ್ಯಾನ್ನ ದಾಸೋಹ’ಕ್ಕೆ ಚಾಲನೆ: ಮಾತೃಶ್ರೀ ನಾಗವೇಣಮ್ಮನವರ ಜನ್ಮ ಶತಮಾನೋತ್ಸವದ ಸಂಭ್ರಮ

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ನಗರದ ಹೊರವಲಯದ ನರಹರಿ ನಗರದಲ್ಲಿರುವ ಶ್ರೀನರಹರಿ ಸದ್ಗುರು ಆಶ್ರಮದಲ್ಲಿ ಮಾತೃಶ್ರೀ ನಾಗವೇಣಮ್ಮನವರ ಜನ್ಮ ಶತಮಾನೋತ್ಸವದ ಅಂಗವಾಗಿ
'ನಿತ್ಯಾನ್ನ ದಾಸೋಹ' ಕಾರ್ಯಕ್ರಮಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು.

​ಗುರುಗಳ ಆಶೀರ್ವಚನ-
​ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಆಶ್ರಮದ ಪೀಠಾಧ್ಯಕ್ಷರಾದ ಪರಮಪೂಜ್ಯ ಡಾ. ವೈ. ರಾಜಾರಾಮ್ ಗುರುಗಳು ಮಾತನಾಡಿ
, "ಗುರುತಾಯಿ ಮಾತೃಶ್ರೀ ನಾಗವೇಣಮ್ಮನವರ ಜನ್ಮ ಶತಮಾನೋತ್ಸವದ ಸ್ಮರಣಾರ್ಥ ಈ ಸೇವೆಯನ್ನು ಆರಂಭಿಸಲಾಗಿದೆ. ಇಂದಿನಿಂದ ಆಶ್ರಮದಲ್ಲಿ ಪ್ರತಿನಿತ್ಯ ಮಧ್ಯಾಹ್ನ 12:30 ರಿಂದ 2:00 ಗಂಟೆಯವರೆಗೆ ಅನ್ನದಾಸೋಹ ನಡೆಯಲಿದೆ. ಭಕ್ತಾದಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು," ಎಂದು ಕರೆ ನೀಡಿದರು.

​ಗಣ್ಯರ ಉಪಸ್ಥಿತಿ-
​ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಗಣ್ಯರು ದಾಸೋಹದ ಮಹತ್ವದ ಕುರಿತು ಮಾತನಾಡಿದರು.


​ ಶ್ರೀನರಹರಿ ಸದ್ಗುರು ಆಶ್ರಮದ ಉಪಾಧ್ಯಕ್ಷ ಮಾಕಂ ಶ್ರೀನಿವಾಸಲು, ಐ.ಐ.ಎಂ ಬೆಂಗಳೂರು ನಿವೃತ್ತ ಪ್ರೊಫೆಸರ್ ಡಾ. ಬಿ. ಶೇಖರ್, ​ಪ್ರಗತಿಪರ ರೈತ ಕುಂಕಲ ಕೃಷ್ಣಯ್ಯ, ನಿವೃತ್ತ ತಹಶೀಲ್ದಾರ್ ಎನ್. ರಘುಮೂರ್ತಿ, ವೈ. ಏಕಾಂತ ರಾಮ್, ಡಾ. ವೈ. ನರಹರಿ, ಈಶ್ವರಗೆರೆ ರಂಗನಾಥ್, ರಾಜೇಶ್ವರಿ, ಲಾವಣ್ಯ, ಪದ್ಮಶ್ರೀ, ರವಿಶಂಕರ್, ಯಾದಾಟಿ ಚೇತನ್, ದೇವರಾಜರೆಡ್ಡಿ ಹಾಗೂ ಆಶ್ರಮದ ಸದ್ಭಕ್ತ ಮಂಡಳಿಯ ಸದಸ್ಯರಾದ ಮಲ್ಲಿಕಾರ್ಜುನಪ್ಪ, ರೇವಣಸಿದ್ದಪ್ಪ, ಸುಹಾಸ್, ವೈಭವ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!