E-PAPER
23 Nov 2026, 02:36:33 AM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಜನರ ಸಮಸ್ಯೆ ಬಗೆಹರಿಸುವ ನಾಯಕತ್ವ ಅಗತ್ಯ-ಸಚಿವ ಚಲುವರಾಯಸ್ವಾಮಿ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
‘ಪ್ರಜಾಸೇವಾ ಆಂದೋಲನ' ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ , ಪ್ರಜಾಪ್ರಭುತ್ವ ಜನರ ಕೈಯಲ್ಲಿದೆ; ಸರ್ಕಾರದಲ್ಲಿ ಯಾರು ಅಧಿಕಾರದಲ್ಲಿ ಇರಬೇಕು. ಜನಪ್ರತಿನಿಧಿಗಳು ಯಾರಾಗಬೇಕು ಎಂಬುದನ್ನು ಜನರೇ ನಿರ್ಧರಿಸಬೇಕು.ಮತದಾರರು ತೆಗೆದುಕೊಳ್ಳುವ ತೀರ್ಮಾನವು ನಾಡಿನ ಜನರ ಸಮಸ್ಯೆಗಳನ್ನು ಬಗೆಹರಿಸುವಂತಿರಬೇಕು ಹಾಗೂ ಕುಟುಂಬದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಾಡುವ ನಾಯಕತ್ವ ಇರಬೇಕು.ಚುನಾವಣೆ ಮುಗಿದ ಬಳಿಕ ಪಶ್ಚಾತ್ತಾಪ ಪಟ್ಟರೂ ಪ್ರಯೋಜನವಾಗುವುದಿಲ್ಲ; ಮಾತನಾಡುವವರು ಮತ್ತು ಟೀಕೆ ಮಾಡುವವರು ಅನೇಕರಿರುತ್ತಾರೆ, ಆದರೆ ಯಾರು ನಿಜವಾಗಿ ಕೆಲಸ ಮಾಡುತ್ತಾರೆ ಎಂಬುದನ್ನು ಜನರು ಗಮನದಲ್ಲಿಟ್ಟುಕೊಳ್ಳಬೇಕು ಎಂದರು.

ಭದ್ರಾ ಮೇಲ್ದಂಡೆ ಯೋಜನೆಯಡಿ ಬಯಲುಸೀಮೆಯ ಭಾಗಕ್ಕೆ ಈ ಹಿಂದೆ 3 ಟಿಎಂಸಿ ಹಂಚಿಕೆ ಮಾಡುವ ಮೂಲಕ ನೀರು ಒದಗಿಸಿ, ಗೋನೂರು ಕೆರೆ ವರೆಗೆ ನೀರು ಹರಿಸಲಾಗಿದೆ. ಇದರ ಜೊತೆಗೆ ಮತ್ತೊಂದು ಟಿಎಂಸಿ ನೀರು ಹಂಚಿಕೆಯಾಗಿದೆ. ಡಿಸೆಂಬರ್ ಅಂತ್ಯದ ವೇಳೆಗೆ 12 ಟಿಎಂಸಿ ಜೊತೆಗೆ 13 ಟಿಎಂಸಿ ನೀರನ್ನು ತುಂಗಾದಿಂದ ಭದ್ರಕ್ಕೆ ಲಿಫ್ಟ್ ಮಾಡುವ ಸಮಗ್ರ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಗುರಿ ಹೊಂದಲಾಗಿದೆ. ಡಿಸೆಂಬರ್‍ನಲ್ಲಿ ಲಿಫ್ಟ್ ಕಾರ್ಯ ಕೈಗೊಳ್ಳುವ ಯೋಜನೆಯನ್ನು ಪೂರ್ಣಗೊಳಿಸಲಾಗುತ್ತಿದೆ ಎಂದರು.

ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಸೆಂಬ್ಲಿ ಮುಗಿದ ಬಳಿಕ (ಡಿಸೆಂಬರ್ 15ರ ನಂತರ) ನೀರು ಲಭ್ಯತೆ ಆಧರಿಸಿ ತೀರ್ಮಾನ ಕೈಗೊಂಡು, ಕೆಲಸ ಪೂರ್ಣಗೊಳಿಸಿ ಮಾರ್ಚ್‍ನಲ್ಲಿ 29 ಟಿಎಂಸಿ ನೀರನ್ನು ಮುಂದಿನ ವರ್ಷದ ಮಳೆಗಾಲದಲ್ಲಿ ಯಾವುದೇ ತೊಂದರೆಯಿಲ್ಲದೆ ಬಯಲುಸೀಮೆಯ ಕೆರೆಗಳಿಗೆ ತುಂಬಿಸುವ ಭರವಸೆ ನೀಡಿದರು.

ವಾಣಿ ವಿಲಾಸದ ಕಾಲುವೆಗಳ ಆಧುನೀಕರಣಕ್ಕಾಗಿ ಡಿಪಿಆರ್ ಸಿದ್ಧಪಡಿಸಿ, ರೂ.1,500 ಕೋಟಿಗೂ ಹೆಚ್ಚು ಅನುದಾನವನ್ನು ಹಿರಿಯೂರು ಒಂದೇ ತಾಲೂಕಿಗೆ ನೀಡಲಾಗಿದೆ. ಕಳೆದ ಮಾರ್ಚ್‍ನಿಂದ ಇಲ್ಲಿಯವರೆಗೆ ಈ ಒಂದೇ ವರ್ಷದಲ್ಲಿ ಇಲಾಖೆಯಿಂದ ರೂ.3,000 ಕೋಟಿಗೂ ಹೆಚ್ಚು ಮೊತ್ತದ ಅನುದಾನವನ್ನು ವಿವಿಧ ನೀರಾವರಿ, ಚೆಕ್‍ಡ್ಯಾಂ, ಆಧುನೀಕರಣ ಹಾಗೂ ಕೆರೆ ತುಂಬುವ ಯೋಜನೆಗಳಿಗೆ ನೀಡಲಾಗಿದೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದರ ಸರ್ಕಾರ ರೂ. 5,300 ಕೋಟಿ ಘೋಷಣೆಯಾಗಿ ಆರು ವರ್ಷ ಕಳೆದರೂ ಇನ್ನೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ. ಎನ್‍ಡಿಎ ಮತ್ತು ಹಿಂದಿನ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು. ಉಪಚುನಾವಣೆಗೆ ಬರಲು ಸಿದ್ಧರಿರುವವರು, ಈ ಹಿಂದೆ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಹಾಗೂ ಕೇಂದ್ರದಲ್ಲಿ ಪ್ರಧಾನಮಂತ್ರಿಯಾಗಿದ್ದಾಗ ಘೋಷಿಸಿದ ರೂ.5,300 ಕೋಟಿ ಭದ್ರಾ ಯೋಜನೆಗೆ ಇದುವರೆಗೂ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಜಾತಿ, ವ್ಯಕ್ತಿ ನೋಡದೆ ಮತ್ತು ಭಾಷಣಗಳಿಗೆ ಮರುಳಾಗದೆ ಹಿರಿಯೂರಿನ ಭವಿಷ್ಯದ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳುವಂತೆ ಮನವಿ ಮಾಡಿದರು.

ಇದೇ ವೇಳೆ ಉಸ್ತವಾರಿ ಸಚಿವ ಟಿ.ರಘುಮೂರ್ತಿಯವರ 2 ಟಿ.ಎಂ.ಸಿ ನೀರಿನ ಬೇಡಿಕೆ ಸ್ಪಂದಿಸಿದ ಸಚಿವ ಚಲುವರಾಯಸ್ವಾಮಿ, ತುಂಗಭದ್ರಾ ನದಿ ನೀರಿನ ಹಂಚಿಕೆ ಆಂತರಿಕ ಸಲಹಾ ಸಮಿತಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದರು.

ವಸತಿ ಸಚಿವ ಜಮೀರ್ ಅಹಮದ್ ಖಾನ್ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಜನರು ಐದು ವರ್ಷಗಳ ಅವಧಿಗೆ ಡಿ.ಸುಧಾಕರ್ ಅವರನ್ನು ಆಯ್ಕೆ ಮಾಡಿದ್ದೀರಿ. ಆದರೆ, ವಿಧಿಯ ಆಟದಿಂದ ಅವರು ನಮ್ಮನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಮುಂಬರುವ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಮನವಿ ಮಾಡಿದರು.

 ಕನಕಪುರ ಮತ್ತು ಹಿರಿಯೂರು ತಾಲ್ಲೂಕುಗಳನ್ನು ಬೇರೆ ಬೇರೆಯಾಗಿ ನೋಡುವುದಿಲ್ಲ ಎಂದು ಸ್ವತಃ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಭರವಸೆ ನೀಡಿದ್ದಾರೆ. ಅವರ ಅಕಾಲಿಕ ನಿಧನದ ನಂತರ ಇಲ್ಲಿನ ಜನರ ಸೇವೆಗೆ ಸ್ವತಃ ಮುಖ್ಯಮಂತ್ರಿಗಳೇ ಮುಂದಾಗಿರುವುದು ತಾಲ್ಲೂಕಿನ ಜನರ ಸೌಭಾಗ್ಯ ಎಂದು ಬಣ್ಣಿಸಿದರು.

 ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ ಒಂದೇ ವರ್ಷದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದಿದ್ದೇವೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಸ್ಲಂ ಬೋರ್ಡ್‍ನಡಿ ಮಂಜೂರಾಗಿದ್ದ 1.80 ಲಕ್ಷ ಮನೆಗಳಿಗೆ ಬಡವರಿಂದ ವಂತಿಗೆ ಕಟ್ಟಿಸಲು ಸಾಧ್ಯವಾಗದೆ ಯೋಜನೆ ನನೆಗುದಿಗೆ ಬಿದ್ದಿತ್ತು. ನಮ್ಮ ಸರ್ಕಾರ ಬಂದ ಮೇಲೆ ಬಡವರ ಪಾಲಿನ ರೂ. 4 ಲಕ್ಷ ವಂತಿಗೆಯನ್ನು ಸರ್ಕಾರವೇ ಭರಿಸುವ ತೀರ್ಮಾನ ಕೈಗೊಂಡು, ಈಗಾಗಲೇ 80 ಸಾವಿರ ಮನೆಗಳನ್ನು ಹಂಚಿಕೆ ಮಾಡಿದೆ’ ಎಂದರು.

‘ವಸತಿ ಇಲಾಖೆಯಿಂದ 50 ಸಾವಿರ ನಿವೇಶನಗಳನ್ನು ಹಂಚಲು ನಿರ್ಧರಿಸಲಾಗಿದೆ. ಆರಂಭದಲ್ಲಿ 20x30 ಅಳತೆಯ ನಿವೇಶನ ನೀಡಲು ಪ್ರಸ್ತಾವ ಸಲ್ಲಿಸಲಾಗಿತ್ತು. ಆದರೆ, ಮುಖ್ಯಮಂತ್ರಿ ಅವರು ಬಡವರು ನೆಮ್ಮದಿಯಾಗಿ ಬದುಕಲು 30x40 (1,200 ಚದರ ಅಡಿ) ಅಳತೆಯ ನಿವೇಶನವನ್ನೇ ನೀಡುವಂತೆ ಸೂಚಿಸಿ, ಸಂಪುಟದಲ್ಲಿ ಅನುಮೋದನೆ ನೀಡಿದ್ದಾರೆ’ ಎಂದು ಸಚಿವರು ತಿಳಿಸಿದರು.

ಪ್ರಜಾ ಸೇವಾ ಆಂದಲೋನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯ ಸಭಾ ಸದಸ್ಯ ಕೆ.ಸಿ.ಚಂದ್ರಶೇಖರ್ , ಕೃಷ್ಣದೇವರಾಯರ ಆಸ್ಥಾನದಲ್ಲಿ ನಡೆದ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಲು ತೆನಾಲಿ ರಾಮಕೃಷ್ಣ ಬಂದಾಗ, ದ್ವಾರಪಾಲಕರು ತಡೆದು ಬಹುಮಾನದಲ್ಲಿ ಪಾಲು ಕೇಳಿದರು. ಕವಿಗೋಷ್ಠಿಯಲ್ಲಿ ಗೆದ್ದ ತೆನಾಲಿ ರಾಮಕೃಷ್ಣ, ಚಿನ್ನದ ನಾಣ್ಯದ ಬದಲು ದ್ವಾರಪಾಲಕರಿಗೆ ಹಂಚಲು ನೂರು ಚಡಿಯೇಟುಗಳನ್ನು ನೀಡುವಂತೆ ಮಹಾರಾಜರಲ್ಲಿ ಮನವಿ ಮಾಡಿದರು. ಸಾಮಾನ್ಯ ಜನರು ಅಧಿಕಾರ ಕೇಂದ್ರವನ್ನು ತಲುಪಲು ಎದುರಿಸುವ ಕಷ್ಟಗಳನ್ನು ಈ ಮೂಲಕ ಮನವರಿಕೆ ಮಾಡಿಕೊಡಲಾಯಿತು. ಹಣ, ಪ್ರಭಾವ ಮತ್ತು ಅಧಿಕಾರವಿಲ್ಲದ ಸಾಮಾನ್ಯ ಜನರಿಗೆ ನ್ಯಾಯ ಸಿಗದೆ ತೊಂದರೆ ಅನುಭವಿಸುತ್ತಿರುವ ಬಗ್ಗೆ ಕಥೆಯ ಮೂಲಕ ಗಮನ ಸೆಳೆದರು. ರಾಜನೇ ಜನಸಂಪರ್ಕ ಸಭೆಗಳನ್ನು ನಡೆಸಿ, ಜನರ ಬಳಿಗೆ ನೇರವಾಗಿ ತೆರಳಿ ಅವರ ಕಷ್ಟ-ಸುಖಗಳನ್ನು ಆಲಿಸಿದಾಗ ಮಾತ್ರ ಸಮಸ್ಯೆಗಳ ನಿಜವಾದ ಅರಿವಾಗಿ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ ಎಂದರು.

ಜನರ ಜೊತೆ ನಿರಂತರವಾಗಿ ಸಂಪರ್ಕದಲ್ಲಿರಬೇಕು ಎಂಬ ದೃಷ್ಟಿಯಿಂದ ಡಿ.ಕೆ. ಶಿವಕುಮಾರ್ ಅವರು 'ಪ್ರಜಾ ಸೇವಾ' ಎಂಬ ಇಲಾಖೆಯನ್ನು ಪ್ರಾರಂಭಿಸಿದ್ದಾರೆ. ಸಾರ್ವಜನಿಕರು ಮನೆಯಿಂದಲೇ ದೂರು ನೀಡಲು ಟೋಲ್-ಫ್ರೀ ಸಂಖ್ಯೆಯನ್ನು ನೀಡಲಾಗುವುದು. ಈ ಸಂಖ್ಯೆಗೆ ಕರೆ ಮಾಡಿ ಸಮಸ್ಯೆ ತಿಳಿಸಿದರೆ, ಅದು ತಕ್ಷಣವೇ ಸಂಬಂಧಪಟ್ಟ ಇಲಾಖೆಗೆ ಮತ್ತು ಮುಖ್ಯಮಂತ್ರಿಗಳ ಡ್ಯಾಶ್‍ಬೋರ್ಡ್‍ಗೆ ರವಾನೆಯಾಗುತ್ತದೆ. ಒಂದು ತಿಂಗಳೊಳಗೆ ಸಮಸ್ಯೆ ಬಗೆಹರಿಯದಿದ್ದರೆ ಸಂಬಂಧಪಟ್ಟ ಅಧಿಕಾರಿ ದಂಡ ತೆರಬೇಕಾಗುತ್ತದೆ. ಗೃಹಲಕ್ಷ್ಮಿ ಸೇರಿದಂತೆ ಗ್ಯಾರಂಟಿ ಯೋಜನೆಗಳ ಹಣ ಬಾರದಿದ್ದಲ್ಲಿ ಈ ವ್ಯವಸ್ಥೆಯ ಮೂಲಕ ದೂರು ನೀಡಬಹುದು. ಫಲಾನುಭವಿಗಳಿಗೆ ಯೋಜನೆ ತಲುಪುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಮನೆಯ ಮುಂದೆ ಗ್ಯಾರಂಟಿ ಟ್ಯಾಗ್ ಮತ್ತು ಕೋಡ್ ಹಾಕುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಸರ್ಕಾರದ ಈ ಹೊಸ ವ್ಯವಸ್ಥೆಯನ್ನು ಜನರು ನಂಬರ್‍ಗೆ ಕರೆ ಮಾಡಿ ಪರೀಕ್ಷಿಸಬೇಕು. ಪ್ರಸ್ತುತ ಸರ್ಕಾರವು ಐದು ಗ್ಯಾರಂಟಿಗಳ ಜೊತೆಗೆ 'ಭೂ ಗ್ಯಾರಂಟಿ' ನೀಡಿದೆ. ಇವುಗಳ ಲಾಭ ಪಡೆಯಲು ಪ್ರಜಾ ಸೇವೆಯ ಮೂಲಕ ನಂಬರ್ ತೆಗೆದುಕೊಂಡು ಫೆÇೀನ್ ಮಾಡುವ ವ್ಯವಸ್ಥೆ ಇದೆ. ಇದಕ್ಕೆ ಯಾರಿಗೂ ಹಣ ಕೊಡುವ ಅಥವಾ ಪ್ರಭಾವ ಬೀರುವ (ಇನ್‍ಫ್ಲುಯೆನ್ಸ್ ಮಾಡುವ) ಅಗತ್ಯವಿಲ್ಲ, ಯಾರ ಮನೆ ಬಾಗಿಲಿಗೂ ಹೋಗುವ ಅಗತ್ಯವೂ ಇಲ್ಲ. ಪ್ರಜಾ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಮತ್ತು ಇದಕ್ಕೆ ಒಳ್ಳೊಳ್ಳೆ ಅಧಿಕಾರಿಗಳನ್ನು ನೇಮಿಸಲಾಗಿದೆ. ಅವರು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಇದನ್ನು ಬಳಸಿಕೊಳ್ಳುವಂತೆ ಮನವಿ ಮಾಡಿದರು.

ಸಂಸತ್ತಿನ ಚರ್ಚೆಯಲ್ಲಿ ರಾಜ್ಯದ ಪ್ರಮುಖ ನಾಯಕರೊಬ್ಬರು ಕಾಡುಗೊಲ್ಲರನ್ನು ಎಸ್‍ಟಿ ಪಟ್ಟಿಗೆ ಸೇರಿಸುವ ವಿಚಾರವಾಗಿ ಮಾತನಾಡಿದ್ದರು. ಕೇಂದ್ರ ಸರ್ಕಾರ ಪ್ರಸ್ತಾವನೆ ತಿರಸ್ಕರಿಸಿದೆ. ಮುಖ್ಯಮಂತ್ರಿಗಳು, ಡಿ.ಕೆ. ಶಿವಕುಮಾರ್ ಹಾಗೂ ಇತರ ನಾಯಕರು ಸೇರಿ ಕಾಡುಗೊಲ್ಲರಿಗೆ ಮತ್ತು ಇತರ ಸಮುದಾಯದವರಿಗೆ ಯಾವ ರೀತಿ ನ್ಯಾಯ ಕೊಡಬೇಕು ಎಂಬುದರ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದರೆ ಎಂದರು.

ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ ಚುನಾವಣೆಗೆ ಮೊದಲು ಘೋಷಿಸಲಾದ ಐದು ಗ್ಯಾರಂಟಿ ಯೋಜನೆಗಳು ಈಡೇರುವುದಿಲ್ಲ ಎಂಬ ಟೀಕೆಗಳ ನಡುವೆಯೂ, ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿಗಳು ಸೇರಿ ಎಲ್ಲಾ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದ್ದಾರೆ ಎಂದರು. ವಿಶೇಷವಾಗಿ ಮಹಿಳೆಯರಿಗೆ ಹಲವು ಯೋಜನೆಗಳು ಸಹಾಯಕವಾಗಿವೆ ಎಂದು ತಿಳಿಸಿದರು.

ಎಸ್.ಎಂ. ಕೃಷ್ಣ ಅವರ ಕಾಲದಲ್ಲಿ ಸ್ತ್ರೀ ಶಕ್ತಿ ಗುಂಪುಗಳ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಬ್ಯಾಂಕ್‍ಗಳೊಂದಿಗೆ ವ್ಯವಹರಿಸಿದ ದಿನಗಳನ್ನು ಸ್ಮರಿಸಿದರು. ಕೇಂದ್ರದಿಂದ ಸಹಕಾರ ಇಲ್ಲದಿದ್ದರೂ ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ನೀರಿನ ಹಣಕಾಸು ನೆರವು ನೀಡುತ್ತಿದೆ, ಬೆಳೆ ವಿಮೆ ನೀಡಲಾಗುತ್ತಿದೆ, ಬಿ-ಖಾತಾ ನಿವೇಶನಗಳನ್ನು ಎ-ಖಾತಾ ಆಗಿ ಪರಿವರ್ತಿಸುವುದು ಸೇರಿದಂತೆ ಬೆಂಗಳೂರಿನ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಂಡಿದೆ ಎಂದರು. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು, ಮುಂದಿನ ದಿನಗಳಲ್ಲೂ ಜನಪರ ಆಡಳಿತ ನೀಡುವುದು ಸರ್ಕಾರದ ಧ್ಯೇಯವಾಗಿದೆ ಎಂದು ಹೇಳಿ, ಜನರ ಆಶೀರ್ವಾದ ಕೋರಿದರು.

ಕಾರ್ಯಕ್ರಮದಲ್ಲಿ ಪೌರಾಡಳಿತ ಸಚಿವ ಹೆಚ್.ಸಿ.ಬಾಲಕೃಷ್ಣ, ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ,ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ ಹಾಗೂ ಶಾಸಕ ಬಿ.ಜೆ. ಗೋವಿಂದಪ್ಪ,ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ. ಬಿ. ಯೋಗೇಶ್ ಬಾಬು, ಆದಿ ಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್. ಮಂಜುನಾಥ, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು, ರಾಜ್ಯ ಸಭಾ ಸದಸ್ಯ ಕೆ.ಸಿ.ಚಂದ್ರಶೇಖರ್,ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಆರೊಗೆರೆ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಕುಣಿಗಲ್ ಶಾಸಕ ಡಾ.ರಂಗನಾಥ್, ವಿಧಾನ ಪರಿಷತ್ ಶಾಸಕ ಡಿ.ಟಿ. ಶ್ರೀನಿವಾಸ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರು ಆರ್.ಶಿವಣ್ಣ ಗಂಜಿಗಟ್ಟೆ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್‍ಪೀರ್, ಕಂಠೀರವ ಸ್ಟೋಡಿಯೋ ಅಧ್ಯಕ್ಷ ಮೆಹಬೂಬ್ ಪಾಷ,ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಎಂ.ಚಂದ್ರಪ್ಪ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್,ಪ್ರಜಾ ಸೇವಾ ಇಲಾಖೆ ಸರ್ಕಾರದ ಕಾರ್ಯದರ್ಶಿ ಹರ್ಷಗುಪ್ತ, ಕಾರ್ಮಿಕ ಇಲಾಖೆ ಆಯುಕ್ತ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆಮ್ಲಾನ್ ಆದಿತ್ಯ ಬಿಸ್ವಾಸ್, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಕ್ಯಾಪ್ಟನ್ ರಾಜೇಂದ್ರ, ಜಿಲ್ಲಾಧಿಕಾರಿ ರಮ್ಯಾ, ಜಿ.ಪಂ.ಸಿಇಓ ಡಾ.ಆಕಾಶ್.ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಮತ್ತಿತರು ಇದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನರ ಸಮಸ್ಯೆ ಬಗೆಹರಿಸುವ ನಾಯಕತ್ವ ಅಗತ್ಯ-ಸಚಿವ ಚಲುವರಾಯಸ್ವಾಮಿಭದ್ರಾ ಜಲಾಶಯದಿಂದ ತಕ್ಷಣವೇ 2 ಟಿಎಂಸಿ ನೀರು ಬಿಡುಗಡೆಗೆ ಸಚಿವ ರಘುಮೂರ್ತಿ ಮನವಿಜನರ ಸಂಕಷ್ಟ ಆಲಿಸಿ, ಸೇವೆ ಸಲ್ಲಿಸುವುದೇ ನಿಜವಾದ ಪ್ರಜಾಸೇವೆ-ಡಿ.ಕೆ ಶಿವಕುಮಾರ್ತುರುವನಹಳ್ಳಿ ಗ್ರಾಮದ ರಸ್ತೆ ಡಾಂಬರಿಕರಣಕ್ಕೆ ಚಾಲನೆನ. 25 ರಂದು ತಾಲೂಕು ಕಚೇರಿ ಮುಂದೆ ಅನಿರ್ದಿಷ್ಟಾವದಿ ನಿರಶನನವೆಂಬರ್. 27 ರಂದು ವೀರಶೈವ ಲಿಂಗಾಯತ ಸಮುದಾಯದ ವತಿಯಿಂದ ಪ್ರತಿಭಟನೆರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ ಯಶಸ್ವಿಯಾಗಿ ನಡೆಸೋಣ: ಸಚಿವ ಡಾ. ಅಜಯ್ ಸಿಂಗ್ಕೆಯುಡಬ್ಲ್ಯೂಜೆ ವಾರ್ಷಿಕ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನಶಿಕ್ಷಕರೆಂಬ ಶೈಕ್ಷಣಿಕ ಬಂಧುಹಿರಿಯೂರಿನಲ್ಲಿ ಪ್ರಜಾಸೇವಾ ಅಭಿಯಾನದ ಇಲಾಖಾ ವಸ್ತುಪ್ರದರ್ಶನ ಮಳಿಗೆಗಳಿಗೆ ಡಿ.ಕೆ. ಶಿವಕುಮಾರ್ ಚಾಲನೆ