ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ, ರೆಡ್ ರಿಬ್ಬನ್ ಕ್ಲಬ್ ಕಾಲೇಜುಗಳು, ಕ್ರೀಡೆ ಮತ್ತು ಯುವ ಜನ ಸೇವಾ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಯುವ ಜನೋತ್ಸವ ಅಂಗವಾಗಿ ರೆಡ್ ರನ್-ಹೆಚ್ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯನ್ನು ಇದೇ ಅಕ್ಟೋಬರ್ 12ರಂದು ಚಿತ್ರದುರ್ಗ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಕನಕವೃತ್ತದಿಂದ ಆರಂಭವಾಗುವ ಜಾಗೃತಿ ಜಾಥಾವು ಮುಖ್ಯವೃತ್ತ, ಮದಕರಿ ನಾಯಕ ವೃತ್ತ, ಆಸ್ಪತ್ರೆ ವೃತ್ತ, ಒನಕೆ ಓಬವ್ವ ಸ್ಟೇಡಿಯಂವರೆಗೆ ನಡೆಯಲಿದೆ.
ಜಿಲ್ಲಾಧಿಕಾರಿ ಎಸ್.ರಮ್ಯಾ ಉದ್ಘಾಟನೆ ನೆರವೇರಿಸುವರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಸಿ.ಸುನೀಲ್ ಕುಮಾರ್, ಜಿಲ್ಲಾ ಏಡ್ಸ್ ಮತ್ತು ಕ್ಷಯ ರೋಗ ನಿಯಂತ್ರಣ ಹಾಗೂ ರಕ್ತ ಸುರಕ್ಷತೆ ಕಾರ್ಯಕ್ರಮ ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ.ವಿ.ತುಳಸಿ ರಂಗನಾಥ್, ಡಾನ್ ಬಾಸ್ಕೋ ಕಾಲೇಜು ಜಿಲ್ಲಾ ಎನ್ಎಸ್ಎಸ್ ನೋಡಲ್ ಅಧಿಕಾರಿ ಡಾ.ಎನ್.ಧನಕೋಟಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಜಿಲ್ಲಾಸ್ಪತ್ರೆ ಎಆರ್ಟಿ ಕೇಂದ್ರ ವೈದ್ಯಾಧಿಕಾರಿ ಡಾ.ರೂಪಶ್ರೀ, ದುರ್ಗ ರನ್ನರ್ಸ್ ಅಧ್ಯಕ್ಷರಾದ ಎಂ.ಸುಷ್ಮಾರಾಣಿ, ಚೇತನ್ ಬಾಬು ಉಪಸ್ಥಿತಿವಹಿಸುವರು ಎಂದು ಪ್ರಕಟಣೆ ತಿಳಿಸಿದೆ.



