Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಅಕ್ರಮ: ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಗಂಭೀರ ‘ಲೂಟಿ’ ಆರೋಪ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿಯೋಜನೆಯ ಅನುಷ್ಠಾನದಲ್ಲಿ ಭಾರಿ ಪ್ರಮಾಣದ ಆಡಳಿತಾತ್ಮಕ ಮತ್ತು ತಾಂತ್ರಿಕ ಲೋಪಗಳು ನಡೆದಿರುವುದನ್ನು ಭಾರತೀಯ ಲೆಕ್ಕಪರಿಶೋಧಕರು ಮತ್ತು ತನಿಖಾಧಿಕಾರಿಗಳ ವರದಿ ಬಹಿರಂಗಪಡಿಸಿದೆ. ಇದನ್ನು ಅಸ್ತ್ರವಾಗಿಸಿಕೊಂಡಿರುವ ಜೆಡಿಎಸ್, ಕಾಂಗ್ರೆಸ್ ಸರ್ಕಾರದ ವಿರುದ್ಧ "ಮಹಾ ಲೂಟಿ" ಆರೋಪ ಹೊರಿಸಿದ್ದು, ತೀವ್ರ ವಾಗ್ದಾಳಿ ನಡೆಸಿದೆ.

​ಮಹಾಲೇಖಪಾಲರ ಡೇಟಾ ಅನಾಲಿಟಿಕ್ಸ್ ವಿಭಾಗ ನಡೆಸಿರುವ ವಿಶೇಷ ಆಡಿಟ್‌ನಲ್ಲಿ ಪತ್ತೆಯಾಗಿರುವ ಶಾಕಿಂಗ್ ಅಂಶಗಳನ್ನು ಉಲ್ಲೇಖಿಸಿ ಜೆಡಿಎಸ್ ಬಿಡುಗಡೆ ಮಾಡಿರುವ ಸುದ್ದಿಯ ವಿವರ ಇಲ್ಲಿದೆ:

​ಸಿಎಜಿ ವರದಿಯಲ್ಲಿ ಬಯಲಾದ ಪ್ರಮುಖ ಲೋಪಗಳು:
​ಖಾತೆಯೇ ಇಲ್ಲದಿದ್ದರೂ 46.52 ಕೋಟಿ ಪಾವತಿ: ರಾಜ್ಯದ 23,262 ಮಹಿಳೆಯರ ಬ್ಯಾಂಕ್ ಖಾತೆಯ ಕನಿಷ್ಠ ವಿವರಗಳೇ ಸಿಸ್ಟಮ್‌ನಲ್ಲಿ ಇಲ್ಲದಿದ್ದರೂ, ಅವರ ಹೆಸರಿನಲ್ಲಿ ಬರೋಬ್ಬರಿ 46.52 ಕೋಟಿ ಹಣ ಪಾವತಿಯಾಗಿದೆ! "ಖಾತೆಯೇ ಇಲ್ಲದವರಿಗೂ ಹಣ ಪಾವತಿ ಮಾಡುವ ಜಗತ್ತಿನ ಎಂಟನೇ ಅದ್ಭುತವನ್ನು ಈ ಸರ್ಕಾರ ಸೃಷ್ಟಿಸಿದೆ. ಈ ಹಣ ಯಾರ ಜೇಬಿಗೆ ಹೋಯ್ತು?" ಎಂದು ಜೆಡಿಎಸ್ ಪ್ರಶ್ನಿಸಿದೆ.

​19,020 ಫಲಾನುಭವಿಗಳಿಗೆ ಒಂದೇ ಬ್ಯಾಂಕ್ ಖಾತೆ: ನೇರ ನಗದು ವರ್ಗಾವಣೆ ನಿಯಮಗಳ ಪ್ರಕಾರ ಒಬ್ಬ ಫಲಾನುಭವಿಗೆ ಒಂದು ಪ್ರತ್ಯೇಕ ಖಾತೆ ಇರಬೇಕು. ಆದರೆ, ಇಲ್ಲಿ 19,020 ಫಲಾನುಭವಿಗಳಿಗೆ ಒಂದೇ ಬ್ಯಾಂಕ್ ಖಾತೆಯನ್ನು ಲಿಂಕ್ ಮಾಡಲಾಗಿದೆ. ಇದು ಲೂಟಿಗಾಗಿಯೇ ಮಾಡಿದ ವ್ಯವಸ್ಥಿತ ಪ್ಲಾನ್ ಎಂದು ಜೆಡಿಎಸ್ ಆರೋಪಿಸಿದೆ.
​ಹೆಚ್ಚುವರಿ ಹಣ ಜಮೆ: ಸುಮಾರು 8,995 ಖಾತೆಗಳಿಗೆ ನಿಯಮಬಾಹಿರವಾಗಿ 1.80 ಕೋಟಿಗೂ ಅಧಿಕ ಮೊತ್ತದ ಹೆಚ್ಚುವರಿ ಹಣ ಸಂದಾಯವಾಗಿದೆ.

5,000 ಕೋಟಿ ಎಲ್ಲಿ ಹೋಯಿತು?: ಫೆಬ್ರವರಿ ಮತ್ತು ಮಾರ್ಚ್ 2025ರ ಎರಡು ತಿಂಗಳ ಅವಧಿಯ ಫಲಾನುಭವಿಗಳ ಗೃಹಲಕ್ಷ್ಮಿ ಯೋಜನೆಯ ಸುಮಾರು 5,000 ಕೋಟಿ ಹಣ ಎಲ್ಲಿ ಮಾಯವಾಗಿದೆ ಎಂದು ಜೆಡಿಎಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

​'ದಾಖಲೆ ಮುಚ್ಚಿಡುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ':
​ಸಿಎಜಿ ಆಡಿಟ್ ಟೀಮ್ ಪದೇ ಪದೇ ನೆನಪೋಲೆ ಹಾಗೂ ವಿನಂತಿ ಕಳುಹಿಸಿದರೂ, ಅನರ್ಹ ಫಲಾನುಭವಿಗಳ ಪಟ್ಟಿ, ಇಲಾಖೆಯಿಂದ ಕೈಬಿಡಲಾದ ಫಲಾನುಭವಿಗಳ ಐಡಿ ಮತ್ತು ಕಾರಣಗಳ ಅಧಿಕೃತ ದಾಖಲೆಗಳನ್ನು ನೀಡದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಚ್ಚಿಡುತ್ತಿದೆ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

​"ಗ್ಯಾರಂಟಿ ಯೋಜನೆಯ ಹೆಸರಲ್ಲಿ ಜನರ ತೆರಿಗೆ ಹಣವನ್ನು ನುಂಗಿ ನೀರು ಕುಡಿಯುತ್ತಿರುವ ಲೂಟಿಕೋರರ ಅಸಲಿ ಮುಖವಾಡ ಈಗ ಕಳಚಿದೆ. ದಾಖಲೆಗಳನ್ನು ಮುಚ್ಚಿಡುತ್ತಿರುವ ಇಲಾಖೆಯ ಹಿಂದೆ ಕಬಳಿಸುತ್ತಿರುವ ಆ 'ಕೈ' ಯಾರದ್ದು?" ಎಂದು ಜೆಡಿಎಸ್ ನೇರವಾಗಿ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕರನ್ನು ಪ್ರಶ್ನಿಸಿದೆ.

​ಈಗಾಗಲೇ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಸಿಎಜಿ ವರದಿಯ ಈ ಸ್ಫೋಟಕ ಅಂಶಗಳು ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಮಟ್ಟದ ಮುಜುಗರ ತಂದಿಟ್ಟಿದ್ದು, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟಕ್ಕೆ ಸರ್ಕಾರದ ವಿರುದ್ಧ ಹೋರಾಡಲು ದೊಡ್ಡ ರಾಜಕೀಯ ಅಸ್ತ್ರ ಸಿಕ್ಕಂತಾಗಿದೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!