Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ಕುಂಚಿಟಿಗ ಅಧಿಕಾರಿಗಳ ಮತ್ತು ನೌಕರರ ಸಂಘದ
24ನೇ ಸರ್ವಸದಸ್ಯರ ಸಭೆ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ಸಂಘದ ಅಧ್ಯಕ್ಷ ಎಸ್.ಕೆ.ಲಕ್ಷ್ಮಣ್ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನೆರವೇರಿತು.

​ಬಸವೇಶ್ವರ ನಗರದಲ್ಲಿ ಆಯೋಜಿಸಿದ್ದ ಸಭೆ ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ಎಸ್.ಕೆ.ಲಕ್ಷ್ಮಣ್, ಸಮಾಜದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸರಕಾರಿ ಮತ್ತು ಖಾಸಗಿ ವಲಯದ ನೌಕರರಿದ್ದರೂ, ಸಂಘದ ಸದಸ್ಯತ್ವ ಬೆಳೆಸುವಲ್ಲಿ ಮತ್ತಷ್ಟು ಪ್ರಗತಿಯಾಗಬೇಕಿದೆ. ಸಮಾಜದ ಪ್ರತಿಯೊಬ್ಬ ನೌಕರರು ಸಂಘದ ಸದಸ್ಯರಾಗಿ ಸಂಘಟಿತರಾಗಬೇಕು ಎಂದು ಸಲಹೆ ನೀಡಿದರು.

Advertisement

​ಕೋವಿಡ್ ಕಾರಣದಿಂದ ಸ್ಥಗಿತಗೊಂಡಿದ್ದ ವಿದ್ಯಾರ್ಥಿವೇತನ ವಿತರಣೆಯನ್ನು ಈ ವರ್ಷದಿಂದ ಪುನಃ ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಮೆಡಿಕಲ್, ಎಂಜಿನಿಯರಿಂಗ್, ಬಿ.ವಿ.ಎಸ್.ಸಿ ಹಾಗೂ ಬಿ.ಎಸ್.ಸಿ ಕೃಷಿ ಕೋರ್ಸ್‌ಗಳ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆದ್ಯತೆಯ ಮೇಲೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಸಂಘದ ಆರ್ಥಿಕ ಸಂಪನ್ಮೂಲ ಹೆಚ್ಚಾದಂತೆ ಹೆಚ್ಚಿನ ತರಗತಿಗಳ ವಿದ್ಯಾರ್ಥಿಗಳಿಗೂ ಇದನ್ನು ವಿಸ್ತರಿಸಲಾಗುವುದು. ​ಸಮಾಜದ ಅಭಿವೃದ್ಧಿಗಾಗಿ ಸ್ಥಿತಿವಂತರು ಮತ್ತು ನೌಕರರು ತಮ್ಮ ಗಳಿಕೆಯ ಒಂದು ಭಾಗವನ್ನು ದೇಣಿಗೆಯಾಗಿ ನೀಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಸದಸ್ಯತ್ವಕ್ಕೆ ಅವಕಾಶ: ಸಂಘದ ಕಾರ್ಯದರ್ಶಿ ನಾಗಹನುಮಯ್ಯ ಮಾತನಾಡಿ, ​ಸರ್ಕಾರಿ ನೌಕರರು ಮಾತ್ರವಲ್ಲದೆ, ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವವರು, ಅರೆ ಸರ್ಕಾರಿ ಹಾಗೂ ವಿವಿಧ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ನೌಕರರೂ ಈ ಸಂಘಟನೆಯ ಸದಸ್ಯತ್ವವನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದರು.

​ಈ ಸಂಘಟನೆಯು ಸರ್ಕಾರಿ, ಅರೆ ಸರ್ಕಾರಿ ಮತ್ತು ಖಾಸಗಿ ವಲಯಗಳೆಲ್ಲವನ್ನೂ ಒಳಗೊಂಡ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಸಂಘಟಿತವಾಗುತ್ತಿದೆ. ಆದ್ದರಿಂದ, ಕೇವಲ ಸರ್ಕಾರಿ ನೌಕರರಷ್ಟೇ ಅಲ್ಲದೆ, ಪ್ರತಿಯೊಬ್ಬ ನೌಕರರೂ ಸದಸ್ಯರಾಗಲು ಮುಕ್ತ ಅವಕಾಶವಿದೆ ಎಂದು ಅವರು ಸ್ಪಷ್ಟಪಡಿಸಿದರು.

​ಸದಸ್ಯತ್ವ ಶುಲ್ಕದ ವಿವರ: ಸದಸ್ಯತ್ವ ಪಡೆಯಲು 100 ರೂ. ಅರ್ಜಿಯ ಶುಲ್ಕ, 1,000 ರೂ. ಸದಸ್ಯತ್ವ ಶುಲ್ಕ ಸೇರಿ ಒಟ್ಟು 1,100 ನಿಗದಿಪಡಿಸಲಾಗಿದೆ. ಅರ್ಜಿದಾರರು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಿದರೆ, ಅಗತ್ಯವಿದ್ದಲ್ಲಿ ಶುಲ್ಕದ ಪಾವತಿಗೆ ಸಂಬಂಧಿಸಿದಂತೆ ಸಂಘಟನೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಅಗತ್ಯ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.

​ಈಗಾಗಲೇ ಹಲವರು ಸದಸ್ಯತ್ವ ಪಡೆದುಕೊಂಡಿದ್ದು, ಸದಸ್ಯತ್ವ ನೋಂದಣಿ ಅಭಿಯಾನವು ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ನೌಕರರನ್ನು ಪ್ರೇರೇಪಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆಯುವಂತೆ ನಾಗಹನುಮಯ್ಯ ಅವರು ವಿನಂತಿಸಿದ್ದಾರೆ. 

​ಈ ಸಂದರ್ಭದಲ್ಲಿ ಸಮಾಜದ ಹಿರಿಯ ಮುಖಂಡರಾದ ಡಾ.ಮಾಲಿಮಾದಣ್ಣ, ಕಾರ್ಯದರ್ಶಿ ಖಜಾಂಚಿ, ಉಪಾಧ್ಯಕ್ಷರು ಹಾಗೂ ನಿರಾವರಿ ಇಲಾಖೆಯ ಮುಖ್ಯ ಎಂಜಿನಿಯರ್‌ಗಳು ಉಪಸ್ಥಿತರಿದ್ದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು