Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹಾಲಿನ ದರ ಏರಿಕೆ: ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ- ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ನಗರದ ಫ್ರೀಡಂ ಪಾರ್ಕ್ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ತಮ್ಮನ್ನು ಭೇಟಿ ಮಾಡಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 12 ರೂಪಾಯಿಗಳಷ್ಟು ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ ಎಂದು ತಿಳಿಸಿದರು. ನೆರೆಯ ರಾಜ್ಯಗಳಾದ ತೆಲಂಗಾಣ, ತಮಿಳುನಾಡು ಮತ್ತು ಆಂಧ್ರಪ್ರದೇಶಗಳಲ್ಲಿನ ಹಾಲಿನ ಬೆಲೆ ಹಾಗೂ ಅಲ್ಲಿನ ಪರಿಸ್ಥಿತಿಯ ಬಗ್ಗೆ ವರದಿಗಳನ್ನು ಪಡೆದು, ಕೂಲಂಕಷವಾಗಿ ಪರಿಶೀಲಿಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

Advertisement

ರೈತರು ಹಾಗೂ ಒಕ್ಕೂಟಗಳ ರಕ್ಷಣೆಗೆ ಸರ್ಕಾರ ಬದ್ಧ:
ಪ್ರಸ್ತುತ ಇರುವ ಹಾಲಿನ ದರದಿಂದಾಗಿ ಹಾಲು ಉತ್ಪಾದಕ ಸಂಘಗಳಿಗೆ ನಷ್ಟವಾಗುತ್ತಿದ್ದು, ಬೆಲೆ ಏರಿಕೆ ವಿಚಾರವಾಗಿ ರೈತರಲ್ಲೂ ಅಸಮಾಧಾನವಿದೆ. ರಾಜ್ಯದ ಸುಮಾರು 50 ಸಾವಿರಕ್ಕೂ ಅಧಿಕ ಹಾಲು ಉತ್ಪಾದಕರು ಹಾಲಿನ ದರ ಏರಿಕೆಗೆ ಆಗ್ರಹಿಸಿದ್ದಾರೆ. ರೈತರು ಮತ್ತು ಒಕ್ಕೂಟಗಳನ್ನು ಆರ್ಥಿಕ ಸಂಕಷ್ಟದಿಂದ ರಕ್ಷಿಸಲು ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಸೂಕ್ತ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದರು.

 ಲೀಟರ್‌ಗೆ 10 ರೂ. ಹೆಚ್ಚಿಸಲು ಒಕ್ಕೂಟಗಳ ಆಗ್ರಹ:
ಮೂರು ತಿಂಗಳ ಹಿಂದೆ ನಡೆದ ಬೆಳವಣಿಗೆಗಳು, ಪೆಟ್ರೋಲ್, ಡೀಸೆಲ್ ಸೇರಿದಂತೆ ಇತರೆ ಅಗತ್ಯ ವಸ್ತುಗಳ ಬೆಲೆ ಏರಿಕೆಯು ರೈತರು ಮತ್ತು ಹಾಲು ಉತ್ಪಾದಕರ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದ್ದಾರೆ.

ಹಾಲು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜಸ್ಥಾನ, ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳು ಈಗಾಗಲೇ ಹಾಲಿನ ಬೆಲೆಯನ್ನು ಹೆಚ್ಚಿಸಿವೆ. ರಾಜ್ಯದಲ್ಲೂ ಹಾಲಿನ ದರವನ್ನು ಹೆಚ್ಚಿಸಬೇಕೆಂದು ಒತ್ತಾಯಿಸಿ ಒಕ್ಕೂಟಗಳು ಮತ್ತು ರೈತರು ನಿರಂತರವಾಗಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ರೈತರ ಈ ಬೇಡಿಕೆಗೆ ರಾಜ್ಯ ಸರ್ಕಾರ ಕೂಡಲೆ ಸ್ಪಂದಿಸಿ, ಪ್ರತಿ ಲೀಟರ್‌ಗೆ ಕನಿಷ್ಠ 10 ರೂಪಾಯಿಗಳವರೆಗೆ ಹೆಚ್ಚಿಸಬೇಕು ಎಂದು ಬಮೂಲ್ ಅಧ್ಯಕ್ಷರು ಒತ್ತಾಯಿಸಿದ್ದಾರೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಏಷ್ಯನ್ ಗೇಮ್ಸ್ ಕಬಡ್ಡಿ: ಇರಾನ್ ಮಣಿಸಿ ಚಿನ್ನದ ಪದಕಕ್ಕೆ ಮುತ್ತುಕ್ಕಿದ ಭಾರತೀಯ ಪುರುಷರ ತಂಡ!  ಮುಖ್ಯ ಚುನಾವಣಾ ಆಯುಕ್ತರ ವಜಾಗೆ ಒತ್ತಾಯಿಸಿ ಸಿದ್ದರಾಮಯ್ಯ ಆಗ್ರಹ: ರಾಷ್ಟ್ರಪತಿಗಳು ಮಧ್ಯಪ್ರವೇಶಿಸಲು ಕಾಂಗ್ರೆಸ್ ಮನವಿಸಾಂವಿಧಾನಿಕ ಸಂಸ್ಥೆಯ ಘನತೆಗೆ ಧಕ್ಕೆ ತರುತ್ತಿದೆ ಕಾಂಗ್ರೆಸ್: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿಶಾಸಕ ಮುನಿರತ್ನ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ: ಯುವಕನಿಂದ ತರಾಟೆ, ಕತ್ತಿನ ಪಟ್ಟಿ ಹಿಡಿದು ಆಕ್ರೋಶಎಸ್‌ಐಟಿ ರಚನೆಗೆ ತಾಯಿ ಕುಸುಮಾವತಿ ಅಸಮಾಧಾನ; ಕೆಲ ಅಧಿಕಾರಿಗಳ ನೇಮಕಕ್ಕೆ ತೀವ್ರ ವಿರೋಧಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆ ಮುಂದೂಡಲು ನಟ ದರ್ಶನ್‌ಕಸರತ್ತುಇನ್‌ಸ್ಟಾಗ್ರಾಂ ಪ್ರೇಮ; ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ ಯುವಕ ಬಂಧನಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಮುಖ್ಯಮಂತ್ರಿಗಳೇ, ಕೆಪಿಎಸ್ಸಿ ಅಕ್ರಮಗಳ ಬಗ್ಗೆ ಮೌನವೇಕೆ?: ಕುಮಾರಸ್ವಾಮಿ ತೀವ್ರ ವಾಗ್ದಾಳಿಪ್ರಧಾನಿ ಮೋದಿ 'ಭಜನೆ' ಹೇಳಿಕೆ ವಿವಾದ: ಪ್ರಿಯಾಂಕ್ ಖರ್ಗೆ ವಿರುದ್ಧ ಮುಗಿಬಿದ್ದ ಬಿಜೆಪಿ!