Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ತೆರೆದ ಕೊಳವೆಬಾವಿ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಚಿವ ಡಾ. ಅಜಯ್ ಧರ್ಮಸಿಂಗ್ ಸಂಕಲ್ಪ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಫಲ ಹಾಗೂ ನಿರುಪಯುಕ್ತ ತೆರೆದ ಕೊಳವೆಬಾವಿಗಳಿಂದ ಮಕ್ಕಳು ಅಪಘಾತಕ್ಕೀಡಾಗುವ ಮತ್ತು ಜಾನುವಾರುಗಳಿಗೆ ಅಪಾಯ ಉಂಟಾಗುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯು
, ರಾಜ್ಯಾದ್ಯಂತ 'ಕೊಳವೆಬಾವಿ ಸುರಕ್ಷತಾ ಅಭಿಯಾನ' ಆರಂಭಿಸಲು ಮುಂದಾಗಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸಿಂಗ್ ತಿಳಿಸಿದ್ದಾರೆ.

ಅಭಿಯಾನದ ರೂಪುರೇಷೆ, ಅನುಷ್ಠಾನ ವಿಧಾನ, ಇಲಾಖಾವಾರು ಮಾಹಿತಿ ಸಂಗ್ರಹ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದಂತೆ ಸಮಗ್ರ ಕಾರ್ಯಯೋಜನೆಯನ್ನು ಸಿದ್ಧಪಡಿಸುವಂತೆ ಅಂತರ್ಜಲ ಅಭಿವೃದ್ಧಿ ನಿರ್ದೇಶನಾಲಯಕ್ಕೆ ಅವರು ಸ್ಪಷ್ಟ ಸೂಚನೆ ನೀಡಿದ್ದಾರೆ.

Advertisement

ಸುಪ್ರೀಂ ಕೋರ್ಟ್ ನಿರ್ದೇಶನ ಮತ್ತು ಸುರಕ್ಷತಾ ಕ್ರಮಗಳು: ಕೊಳವೆಬಾವಿ ಕೊರೆಯುವ ಸಂದರ್ಭದಲ್ಲಿ ನೀರು ಸಿಗದೇ ವಿಫಲವಾದ ಅಥವಾ ಬಳಕೆಗೆ ಯೋಗ್ಯವಾಗದ ಕೊಳವೆಬಾವಿಗಳನ್ನು ಸುರಕ್ಷಿತವಾಗಿ ಮುಚ್ಚುವುದು ಕಡ್ಡಾಯವಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಈ ಕುರಿತು ಅಗತ್ಯ ಸುರಕ್ಷತಾ ಕ್ರಮಗಳು ಹಾಗೂ ಮೇಲ್ವಿಚಾರಣಾ ವ್ಯವಸ್ಥೆಗೆ ಕಾನೂನುಬದ್ಧ ಅವಕಾಶ ಕಲ್ಪಿಸಲಾಗಿದೆ. ಆದರೂ, ದಾಖಲೆಗಳಿಗೆ ಬಾರದ ಅಥವಾ ಸಮರ್ಪಕವಾಗಿ ಮುಚ್ಚದೇ ಬಿಟ್ಟಿರುವ ಕೊಳವೆಬಾವಿಗಳು ಇರುವ ಸಾಧ್ಯತೆಯನ್ನು ಸಂಪೂರ್ಣವಾಗಿ ತಳ್ಳಿ ಹಾಕಲಾಗುವುದಿಲ್ಲ ಎಂದು ಸಚಿವರು ಕಳವಳ ವ್ಯಕ್ತಪಡಿಸಿದ್ದಾರೆ.

ಅಭಿಯಾನದ ಹಂತಗಳು: ಮೊದಲ ಹಂತ: ಸಣ್ಣ ನೀರಾವರಿ ಇಲಾಖೆಯೇ ಕೊರೆಸಿರುವ ಎಲ್ಲ ವಿಫಲ ಮತ್ತು ನಿರುಪಯುಕ್ತ ಕೊಳವೆಬಾವಿಗಳನ್ನು ಗುರುತಿಸಿ, ಅವು ಸುರಕ್ಷಿತವಾಗಿ ಮುಚ್ಚಲಾಗಿದೆಯೇ ಎಂಬುದನ್ನು ಪರಿಶೀಲಿಸಲಾಗುವುದು. ಅಗತ್ಯವಿರುವ ಕಡೆ ತಕ್ಷಣವೇ ಮುಚ್ಚುವ ಕ್ರಮ ಕೈಗೊಳ್ಳಲಾಗುತ್ತದೆ.

ಎರಡನೇ ಹಂತ: ಇತರ ಸರ್ಕಾರಿ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿರುವ ವಿಫಲ ಅಥವಾ ತೆರೆದ ಕೊಳವೆಬಾವಿಗಳ ಮಾಹಿತಿಯನ್ನು ಸಂಗ್ರಹಿಸಿ, ಸಂಬಂಧಿಸಿದ ಇಲಾಖೆಗಳ ಸಮನ್ವಯದಲ್ಲಿ ಸುರಕ್ಷಿತವಾಗಿ ಮುಚ್ಚಲು ಕ್ರಮ ವಹಿಸಲಾಗುತ್ತದೆ.

ಸಾರ್ವಜನಿಕರ ಸಹಭಾಗಿತ್ವ ಮತ್ತು ತಂತ್ರಜ್ಞಾನದ ಬಳಕೆ: ಸಾರ್ವಜನಿಕರಿಂದ ಅಪಾಯಕಾರಿ ತೆರೆದ ಕೊಳವೆಬಾವಿಗಳ ಮಾಹಿತಿ ಪಡೆಯಲು ಈ ಕೆಳಗಿನ ನೂತನ ತಂತ್ರಜ್ಞಾನ ಆಧಾರಿತ ವ್ಯವಸ್ಥೆಗಳನ್ನು ರೂಪಿಸುವಂತೆ ಸಚಿವರು ಸೂಚಿಸಿದ್ದಾರೆ.

ಮೀಸಲು ವಾಟ್ಸ್​ಆ್ಯಪ್​ ಸಂಖ್ಯೆ ಹಾಗೂ ವೆಬ್ ಆಧಾರಿತ ವರದಿ ವ್ಯವಸ್ಥೆ.
ಸ್ಥಳದ ಜಿಯೋ - ಟ್ಯಾಗ್ಡ್ (Geo-tagged) ಚಿತ್ರಗಳ ಸೆರೆಹಿಡಿಯುವಿಕೆ. ಕೊಳವೆಬಾವಿ ಮುಚ್ಚುವವರೆಗೆ ಅದರ ಸಂಪೂರ್ಣ ಪ್ರಕ್ರಿಯೆಯನ್ನು ಟ್ರ್ಯಾಕಿಂಗ್ ಮಾಡುವ ವ್ಯವಸ್ಥೆ.
"ಒಂದು ತೆರೆದ ಕೊಳವೆಬಾವಿಯೂ ಮಗುವಿನ ಜೀವಕ್ಕೆ ಅಪಾಯವಾಗಬಾರದು. ನಮ್ಮ ಗುರಿ ಕೇವಲ ಇಲಾಖೆಯ ದಾಖಲೆಗಳಲ್ಲಿರುವ ಕೊಳವೆಬಾವಿಗಳನ್ನು ಮುಚ್ಚುವುದಲ್ಲ; ಸರ್ಕಾರದ ಗಮನಕ್ಕೆ ಬಾರದ ಅಪಾಯಕಾರಿ ತೆರೆದ ಕೊಳವೆಬಾವಿಗಳನ್ನೂ ಗುರುತಿಸಿ ಸುರಕ್ಷಿತಗೊಳಿಸಬೇಕು. ರಾಜ್ಯವನ್ನು ‘ತೆರೆದ ಕೊಳವೆಬಾವಿ ಮುಕ್ತ ಕರ್ನಾಟಕ’ವನ್ನಾಗಿಸುವುದು ನಮ್ಮ ಸರ್ಕಾರದ ಧೃಡ ಸಂಕಲ್ಪವಾಗಿದೆ" ಎಂದು ಡಾ. ಅಜಯ್ ಧರ್ಮಸಿಂಗ್ ಪುನರುಚ್ಚರಿಸಿದ್ದಾರೆ.

ಈ ಅಭಿಯಾನಕ್ಕೆ ಸಂಬಂಧಿಸಿದ ಸಮಗ್ರ ಕಾರ್ಯಯೋಜನೆಯನ್ನು ಸಿದ್ಧಪಡಿಸುವಂತೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ರಾಜೇಶ್ ಅಮ್ಮಿನಬಾವಿ ಹಾಗೂ ಅಂತರ್ಜಲ ಅಭಿವೃದ್ಧಿ ನಿರ್ದೇಶನಾಲಯದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಚಾರಿಕತೆಯ ದಾರಿದೀಪ: ಡಾ. ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಅಮೃತ ಮಹೋತ್ಸವಪತ್ರಕರ್ತರ ಮೇಲೆ ಹಲ್ಲೆ, ಮಹಿಳಾ ಪತ್ರಕರ್ತೆಗೆ ಕಿರುಕುಳ: ಕೆಯುಡಬ್ಲ್ಯೂಜೆ ಖಂಡನೆಲವರ್‌ಬಾಯ್‌ಅವತಾರದಲ್ಲಿ ಬರುತ್ತಿರುವ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ:  ಹೊಸ ಸಿನಿಮಾ 'ಕೆಮಿಸ್ಟ್ರಿ'!ಗಾಜಾ ಪ್ರತೀಕಾರಕ್ಕಾಗಿ ಕೃತ್ಯ ಎಸಗಿರುವುದಾಗಿ ಸಹ-ಪೈಲಟ್ ಒಮಾನ್ ಒಪ್ಪಿಗೆ!ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ವೇಳೆ ಸಂವಿಧಾನ ಪ್ರಸ್ತಾವನೆ ಪಠಣ ಕಡ್ಡಾಯ ಕೋರಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ!ಇಂಡಿಯಾ ಬಣದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಬೃಹತ್ ಪಾದಯಾತ್ರೆಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ 1 ಕೋಟಿ ನಗದು ಪುರಸ್ಕಾರ, ಸರ್ಕಾರಿ ಹುದ್ದೆಗಳಲ್ಲಿ ಶೇ. 2 ಮೀಸಲಾತಿ: ಸರ್ಕಾರ!ಪವಿತ್ರಾ ಗೌಡಗೆ ಬ್ಯಾರಕ್ ಬದಲಾವಣೆ ಮಾಡದ ಜೈಲಾಧಿಕಾರಿಗಳ ವಿರುದ್ಧ ಕೋರ್ಟ್ ಗರಂ!'ಇಂಡಿಯಾ' ಒಕ್ಕೂಟ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಸೇರಿ ಪ್ರಮುಖ ನಾಯಕರು ವಶಕ್ಕೆ!ಪಂಚಮಸಾಲಿ ಮಠದಲ್ಲಿ ಅಕ್ಟೋಬರ್‌31ರವರೆಗೆ ನಿಷೇಧಾಜ್ಞೆ; ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ