Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಮಾವು-ಹಲಸು ಮೇಳ ಉದ್ಘಾಟಿಸಿದ ಸಚಿವ ಮುನಿಯಪ್ಪ

ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ.ಜಿಲ್ಲೆ.:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ-2025" ವನ್ನು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ  ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಸಚಿವರು ಜಿಲ್ಲೆಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳನ್ನು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಹಾಗೂ ರೈತರನ್ನು ಪ್ರೋತ್ಸಾಹಿಸಲು, ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೈಸರ್ಗಿಕವಾಗಿ ಹಣ್ಣುಗಳು ಸಿಗುವಂತೆ ಮಾಡಲು ಮೇಳ ಆಯೋಜನೆ ಮಾಡಲಾಗಿದೆ.

ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ನಿಗದಿ ಮಾಡಿರುವ ಬೆಲೆಯಲ್ಲಿ ರಿಯಾಯಿತಿ ದರದಲ್ಲಿ ಗ್ರಾಹಕರು ಹಣ್ಣುಗಳನ್ನು ಖರೀದಿ ಮಾಡಬಹುದಾಗಿದೆ ಎಂದರು.

ಮೇಳವು ದೇವನಹಳ್ಳಿ ತಾಲ್ಲೂಕಿನ ಹೋಟೆಲ್ ನಂದಿ ಉಪಚಾರ ಮುಂಭಾಗ (ನಂದಿ ಬೆಟ್ಟಕ್ಕೆ ಹೋಗುವ ರಸ್ತೆ, ರಾಣಿ ಕ್ರಾಸ್) ಆಯೋಜಿಸಲಾಗಿದ್ದು ಜೂನ್ 13 ರಿಂದ 15 ವರೆಗೆ 2 ದಿನಗಳ ಕಾಲ ಇರಲಿದೆ. ಸಾರ್ವಜನಿಕರು ಕೂಡ ಗುಣಮಟ್ಟದ ವಿವಿಧ ತಳಿಯ ಹಣ್ಣುಗಳು ಹಾಗೂ ತಾಜಾ ಹಣ್ಣುಗಳನ್ನು ಒಂದೇ ವೇದಿಕೆಯಲ್ಲಿ ಖರೀದಿ ಮಾಡಲು ಉತ್ತಮ ಅವಕಾಶ ಇದಾಗಿದೆ.

ಸಸ್ಯ ಸಂತೆ ಕಾರ್ಯಕ್ರಮವನ್ನು ಮೇಳದಲ್ಲಿ ಏರ್ಪಡಿಸಲಾಗಿದ್ದು ಜಿಲ್ಲೆಯ ಎಲ್ಲಾ ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳಿಂದ ವಿವಿಧ ಜಾತಿಯ ಹಣ್ಣಿನ ಕಸಿ/ಸಸಿ ಗಿಡಗಳನ್ನು ಅಲಂಕಾರಿಕ ಗಿಡಗಳನ್ನು ಪ್ರದರ್ಶನಕ್ಕೆ ಹಾಗೂ ಇಲಾಖೆ ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡುವ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ.

ಮೇಳದಲ್ಲಿ ಕಂಡು ಬಂದ ವಿವಿಧ ತಳಿಯ ಮಾವು-ಹಲಸು, ಸೀಬೆ, ತೋತಾಪುರಿ, ಸೇಂದೂರ, ಬಂಗನಪಲ್ಲಿ, ಬಾದಾಮಿ, ರಸಪೂರಿ, ಮಲ್ಲಿಕಾ, ಕೇಸರ್, ದಶೇರಿ, ಕುಲ್ ಪಂದ್, ಹಿಮಾಪಸಂದ್,ಮಲಗೋವ, ಸಕ್ಕರೆಗುತ್ತಿ, ಡ್ರಾಗನ್ ಪ್ರೋಟ್ಸ್(ಕೆಂಪು), ಸೀಬೆ(ತೈವಾನ್, ಅಲಹಾಬಾದ್), ಹಲಸು(ಪ್ಯಾಕೆಟ್).

ಖುದ್ದು ಸಚಿವರು ಎಲ್ಲಾ ಮಳಿಗೆಗೆಳಿಗೆ ಭೇಟಿ ನೀಡಿ ರೈತರ ರೊಟ್ಟಿಗೆ ಸಮಾಲೋಚಿಸಿ ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಬಗ್ಗೆ ಮಾಹಿತಿ ಪಡೆದುಕೊಂಡು, ಅವುಗಳ ರುಚಿ ಸವಿದು ಹಣ್ಣುಗಳನ್ನು ಖರೀದಿಸಿದರು.

ಕಾರ್ಯಕ್ರಮದಲ್ಲಿ ಸಿಇಓ ಡಾ.ಕೆ.ಎನ್ ಅನುರಾಧ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಗುಣವಂತ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕಲಾವತಿ, ಬಯಪ ಅಧ್ಯಕ್ಷ ಶಾಂತಕುಮಾರ್, ಪುರಸಭೆ ಅಧ್ಯಕ್ಷ ಮುನಿಕೃಷ್ಣ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ರೈತ ಬಾಂಧವರು, ಗ್ರಾಹಕರು ಇದ್ದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಮತ್ತೆ ನೀರು ಹರಿಸಲು CWMA ಆದೇಶ, ಕರ್ನಾಟಕಕ್ಕೆ ತೀವ್ರ ಹಿನ್ನಡೆಮನೆ ಮುಂದೆ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ? ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ತೀವ್ರ ವಿರೋಧ: ಸಿಎಂಗೆ ಪತ್ರಅಧಿವೇಶನ ಮುಕ್ತಾಯ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಚರ್ಚೆ ಚುರುಕು: ಸಿಎಂ ಡಿಕೆ ಶಿವಕುಮಾರ್‌ಗೆ ದೆಹಲಿ ಬುಲಾವ್?ಕಾಂಗ್ರೆಸ್ ವೈಫಲ್ಯ ಖಂಡಿಸಿ ಸೆ.1ರಿಂದ ಬಿಜೆಪಿ ಬೃಹತ್ ಪಾದಯಾತ್ರೆ: ವಿಜಯೇಂದ್ರ ಘೋಷಣೆ102 ತಾಲೂಕುಗಳಲ್ಲಿ ಬರ: ಶೀಘ್ರವೇ ಕೇಂದ್ರಕ್ಕೆ ವರದಿ ಸಲ್ಲಿಕೆ - ಡಿಸಿಎಂ ಜಿ. ಪರಮೇಶ್ವರ್ ಸುಳಿವುKPSC ಕಚೇರಿ ಮೇಲೆ ಸಿಐಡಿ ದಾಳಿ, 329 ಅಭ್ಯರ್ಥಿಗಳಿಗೆ ನೋಟಿಸ್!ಸಮಾಜ ಕಲ್ಯಾಣ ಇಲಾಖೆಯ 140 ಶಿಕ್ಷಕರ ಹುದ್ದೆ ಹಾಗೂ KSET ಪರೀಕ್ಷೆಗೆ ಅರ್ಜಿ ಆಹ್ವಾನ!ಸಚಿವ ನಾಗೇಂದ್ರ ವಜಾಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 'ಬಳ್ಳಾರಿ ಚಲೋ' ಪಾದಯಾತ್ರೆ!ಮಳೆ ಕೊರತೆ ನೀಗಿಸಲು 27 ಕೋಟಿ ವೆಚ್ಚದಲ್ಲಿ ಶೀಘ್ರವೇ ಮೋಡ ಬಿತ್ತನೆ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಆರೋಪಿ ಪ್ರದೋಷ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್!