ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೇಕೆದಾಟು ಮತ್ತು ಮಹದಾಯಿ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಶೀಘ್ರ ಅನುಮತಿ ನೀಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ತಮಿಳುನಾಡಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾದ 177 ಟಿಎಂಸಿ ನೀರನ್ನು ನಾವು ನೀಡುತ್ತೇವೆ. ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಸಮ್ಮತಿ ಇದ್ದರೂ ತಮಿಳುನಾಡು ರಾಜಕೀಯ ಕಾರಣಕ್ಕೆ ವಿರೋಧಿಸುತ್ತಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಬಿಜೆಪಿ ನಾಯಕರು ಕೇಂದ್ರದ ಮೇಲೆ ಒತ್ತಡ ಹೇರಿ ಮಹದಾಯಿ, ಕೃಷ್ಣಾ ಮೇಲ್ದಂಡೆ ಮತ್ತು ಮೇಕೆದಾಟು ಯೋಜನೆಗಳಿಗೆ ಪರಿಸರ ಹಾಗೂ ಇತರ ಅಗತ್ಯ ಅನುಮತಿಗಳನ್ನು ಕೊಡಿಸಲಿ" ಎಂದು ಒತ್ತಾಯಿಸಿದರು.




