Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ತಲೆಕೆಡಿಸಿಕೊಳ್ಳುವುದಿಲ್ಲ: ಡಿಸಿಎಂ ಶಿವಕುಮಾರ್

Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇ 15ರ ಜನ್ಮದಿನದ ಹಿನ್ನೆಲೆಯಲ್ಲಿ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿರುವ ಬೆನ್ನಲ್ಲೇ, ಡಿಸಿಎಂ ತಮ್ಮ ಅಭಿಮಾನಿಗಳಿಗೆ ಹಾಗೂ ಕಾರ್ಯಕರ್ತರಿಗೆ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ.

ಫ್ಲೆಕ್ಸ್ ಸಂಸ್ಕೃತಿಗೆ ಬ್ರೇಕ್:
ತಮ್ಮ ಹುಟ್ಟುಹಬ್ಬದ ಹೆಸರಿನಲ್ಲಿ ನಗರದಾದ್ಯಂತ ಫ್ಲೆಕ್ಸ್, ಬ್ಯಾನರ್ ಅಥವಾ ಬಂಟಿಂಗ್ಸ್ ಹಾಕಿ ಸಾರ್ವಜನಿಕರಿಗೆ ತೊಂದರೆ ಕೊಡಬಾರದು ಮತ್ತು ರಸ್ತೆಯ ಸೌಂದರ್ಯವನ್ನು ಹಾಳು ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ. "ಜಾಹೀರಾತು ನೀಡಬೇಕೆಂಬ ಹಂಬಲವಿದ್ದರೆ ನಿಯಮದಂತೆ ಹಣ ಪಾವತಿಸಿ ಮಾಡಿಕೊಳ್ಳಿ, ಆದರೆ ರಸ್ತೆಬದಿಗಳಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಹಾಕುವಂತಿಲ್ಲ" ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪಕ್ಷದ ಬೆಳವಣಿಗೆಗಳ ಬಗ್ಗೆ ವಿಶ್ವಾಸ:
ಇದೇ ವೇಳೆ ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನಾರಚನೆ ಹಾಗೂ ನಾಯಕತ್ವದ ಬದಲಾವಣೆ ಕುರಿತು ಕೇಳಿಬರುತ್ತಿರುವ ಗೊಂದಲಗಳ ಬಗ್ಗೆ ಮಾತನಾಡಿದ ಅವರು, ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಅಥವಾ ಪಕ್ಷದ ಒಳಗಿನ ಬೆಳವಣಿಗೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ.

ನಮಗೆ ನಮ್ಮ ಪಕ್ಷದ ಹೈಕಮಾಂಡ್ ಮೇಲೆ ಸಂಪೂರ್ಣ ವಿಶ್ವಾಸವಿದೆ.
"ಯಾವ ಸಮಯದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳಬೇಕೋ ಅದನ್ನು ಪಕ್ಷ ತೆಗೆದುಕೊಳ್ಳುತ್ತದೆ" ಎಂದು ಹೇಳುವ ಮೂಲಕ ಸದ್ಯದ ಚರ್ಚೆಗಳಿಗೆ ತೆರೆ ಎಳೆಯಲು ಪ್ರಯತ್ನಿಸಿದರು.

ಡಿಸಿಎಂ ಅವರ ಈ ಹೇಳಿಕೆಯು ಒಂದೆಡೆ ಶಿಸ್ತಿನ ನಡೆಯನ್ನು ತೋರುತ್ತಿದ್ದರೆ, ಮತ್ತೊಂದೆಡೆ ಪಕ್ಷದ ಆಂತರಿಕ ನಿರ್ಧಾರಗಳ ಕುರಿತು ಕಾದು ನೋಡುವ ತಂತ್ರ ಅನುಸರಿಸಿದಂತಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್. ಜೆ. ಸಿ. ಎಸ್ ಪ್ರೌಢಶಾಲೆಗೆ ಶೇ. ನೂರು ಫಲಿತಾಂಶಟ್ರಾಕ್ಟರ್ ಬೈಕ್ ಡಿಕ್ಕಿ ಬೈಕ್ ಸವಾರರ ಸಾವುಬಡಪ್ಪನಕಟ್ಟೆ  ಕಥೆ ಭಾಗ-5: ಕುಮಾರ್ ಬಡಪ್ಪಸಮಯ ಬಂದಾಗ ಎಲ್ಲವೂ ಗೊತ್ತಾಗಲಿದೆ; ನಾಯಕತ್ವ ಬದಲಾವಣೆಗೆ ಶಿವಕುಮಾರ್ ಮಾರ್ಮಿಕ ನುಡಿಶೃಂಗೇರಿ ಅಂಚೆ ಮತಗಳ ಮರು ಎಣಿಕೆ: ಮೇ 2ಕ್ಕೆ ಹೈಕೋರ್ಟ್ ಆದೇಶದಂತೆ ಪ್ರಕ್ರಿಯೆ ಆರಂಭಟಿಸಿಎಸ್ ವರ್ಲ್ಡ್ 10K ಮ್ಯಾರಥಾನ್: ದಾಖಲೆ ಬರೆದ ಕ್ವಿಜೆರಾ; ಸಂಜೀವನಿ ಜಾಧವ್‌ಗೆ ಹ್ಯಾಟ್ರಿಕ್ ಸಾಧನೆಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ತಲೆಕೆಡಿಸಿಕೊಳ್ಳುವುದಿಲ್ಲ: ಡಿಸಿಎಂ ಶಿವಕುಮಾರ್ಸಾಂಬಾರ್ ಮಾಡಿಲ್ಲವೆಂದು ತಂದೆ ಬೈದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ3ನೇ ಬಾರಿಯೂ ತಪ್ಪಿದ ವಿಮಾನದ ಸಕಾಲಿಕ ಲ್ಯಾಂಡಿಂಗ್; ಆಕಾಶದಲ್ಲೇ 40 ನಿಮಿಷ ಸುತ್ತಾಡಿದ ಪ್ರಯಾಣಿಕರು!ಹರಿಯಬ್ಬೆ ಕರ್ನಾಟಕ ಪಬ್ಲಿಕ್ ಶಾಲೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 90.47 ಫಲಿತಾಂಶ: ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ