ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ‘ಅರಿವು ಶೈಕ್ಷಣಿಕ ಸಾಲ ಯೋಜನೆ'ಯಡಿ (ನವೀಕರಣ) ಸಾಲ ಸೌಲಭ್ಯ ಪಡೆಯಲು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಆನ್ಲೈಯನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮುಸ್ಲಿಂ, ಜೈನ್, ಬೌದ್ಧ, ಸಿಖ್, ಪಾರ್ಸಿ ಹಾಗೂ ಆಂಗ್ಲೋ-ಇಂಡಿಯನ್ ಸಮುದಾಯದ (ಕ್ರಿಶ್ಚಿಯನ್ ಹೊರತುಪಡಿಸಿ) ವಿದ್ಯಾರ್ಥಿಗಳು ಅರ್ಹರಾಗಿದ್ದಾರೆ.
CET/NEET ಮೂಲಕ ಪ್ರವೇಶಾತಿ ಪಡೆದು ಪದವಿ ಹಾಗೂ ವೃತ್ತಿಪರ ಕೋರ್ಸ್ಗTಳಲ್ಲಿ MBBS, B.Tech, MBA, B.Sc Agriculture ಇತ್ಯಾದಿ ವ್ಯಾಸಂಗ ಮಾಡುತ್ತಿರುವವರು ನವೀಕರಣ ಸಾಲಕ್ಕಾಗಿ kmdconline.karnataka.gov.in ವೆಬ್ಸೈಿಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಿದ್ದು, ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಈ ಹಿಂದೆ ಪಡೆದಿದ್ದ ಸಾಲದ ಮೊತ್ತದ ಶೇ. 12 ರಷ್ಟನ್ನು ಆನ್ಲೈ ನ್ನ್ಲ್ಲಿ ಪಾವತಿಸಿ ನವೀಕರಣಕ್ಕೆ ಅರ್ಜಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿ ಪ್ರಿಂಟ್ಔನಟ್ ಮತ್ತು ಅಗತ್ಯ ದಾಖಲೆಗಳನ್ನು ‘ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಜಿಲ್ಲಾ ಪಂಚಾಯತ್, ಚಿತ್ರದುರ್ಗ' ಕಚೇರಿಗೆ ಸೆಪ್ಟೆಂಬರ್ 30ರೊಳಗಾಗಿ ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08194-226412, 8277944213 ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.




