Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕಾಣೆಯಾಗಿದ್ದ ಮಹಿಳೆ 23 ವರ್ಷಗಳ ನಂತರ ಕುಟುಂಬಕ್ಕೆ ಸೇರ್ಪಡೆ

ಚಂದ್ರವಳ್ಳಿನ್ಯೂಸ್, ಬೆಂಗಳೂರು:  ಸುಮಾರು 23 ವರ್ಷಗಳ ಹಿಂದೆ ಕಾಣೆಯಾಗಿದ್ದ, ಬಳ್ಳಾರಿ ಜಿಲ್ಲೆಯ (ವಿಜಯನಗರ) ಹೊಸಪೇಟೆಯ ದಣನಾಯಕನಕೆರೆಯ ಸಾಕಮ್ಮ ಅವರು ಕುಟುಂಬಕ್ಕೆ ಸೇರ್ಪಡೆಯಾಗಲು ಕಾರಣರಾದ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್. ಪಿ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದ ವಿಜಯಕುಮಾರ ಜಿ., ಸಮಾಜ ಕಲ್ಯಾಣ ಇಲಾಖೆ ಕಾರ್ಯಾಚರಣೆ ತಂಡದವರನ್ನು ಹಾಗೂ ಕಾಣೆಯಾಗಿದ್ದ ಮಹಿಳೆ ಸಾಕಮ್ಮ ಅವರನ್ನು ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ಅಭಿನಂದಿಸಿದರು.

                ಬೆಂಗಳೂರು ನಗರದ, ಶಿವಾನಂದ ವೃತ್ತದ ಹತ್ತಿರವಿರುವ ಸಮಾಜ ಕಲ್ಯಾಣ ಇಲಾಖೆ ಸಚಿವರ ಅಧಿಕೃತ ನಿವಾಸದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವರು ಮಾತನಾಡಿ, ಕಾಣೆಯಾಗಿದ್ದ ಮಹಿಳೆ ಹಾಗೂ ಇತರರನ್ನು ಅಭಿನಂದಿಸಿ, ಸಾಕಮ್ಮ ಅವರನ್ನು ಅವರ ಕುಟುಂಬದವರ ವಶಕ್ಕೆ ಹಸ್ತಾಂತರಿಸಿದರು.ಕಾಣೆಯಾಗಿದ್ದ 50 ವರ್ಷದ ಮಹಿಳೆ ಸಾಕಮ್ಮ ಅವರು ಹಲವು ವರ್ಷಗಳ ನಂತರ ಆಕೆಯ ಕುಟುಂಬವನ್ನು ಸುರಕ್ಷಿತವಾಗಿ ಸೇರಿರುವುದು ಸಂಭ್ರಮದ ವಿಷಯವಾಗಿದೆ. ಈ ಘಟನೆಯು ಸಲ್ಮಾನ್ ಖಾನ್ ಅವರ ಭಜರಂಗಿ ಭಾಯಿಜಾನ್ ಸಿನಿಮಾವನ್ನು ನೆನಪಿಸುತ್ತಿದೆ ಹಾಗೂ ಈ ಘಟನೆಗೆ ಕಾರಣವಾದ ಸಾಮಾಜಿಕ ಮಾಧ್ಯಮದ ಉತ್ತಮ ಬಳಕೆಯು ಶ್ಲಾಘನೀಯವಾದುದು ಎಂದರು.

                ಮಹಿಳೆಯು ಸುಮಾರು 23 ವರ್ಷಗಳ ಹಿಂದೆ ತನ್ನ ಕುಟುಂಬ ತೊರೆದು ಕಾಣೆಯಾಗಿರುತ್ತಾರೆ. ನಂತರ ಸುಮಾರು ಎರಡು ವರ್ಷಗಳ ಹಿಂದೆ ತಿಳಿಯದೇ ಕರ್ನಾಟಕದಿಂದ ರೈಲಿನ ಮೂಲಕ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಗೆ ತಲುಪಿ, ಕುಟುಂಬದವನ್ನು ಸೇರಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ ಎಂಬ ವಿಚಾರವನ್ನು ಕರ್ನಾಟಕ ಮೂಲದವರಾದ ಉತ್ತರಾಖಂಡದ ಐ.ಪಿ.ಎಸ್. ಅಧಿಕಾರಿ ರವಿನಂದನ್ ಅವರ ಮೂಲಕ ಮಾಹಿತಿ ಪಡೆದಿದ್ದ ಸಾಮಾಜಿಕ ಕಾರ್ಯಕರ್ತ ವಿಜಯಕುಮಾರ ಜಿ. ಎಂಬುವರು ಈ ವಿಷಯವನ್ನು 2024 ರ ಡಿಸೆಂಬರ್ 19 ರಂದು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್.ಪಿ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿ ಸಹಾಯ ಕೋರಿದ್ದರು. ಅದರಂತೆ ಪ್ರಧಾನ ಕಾರ್ಯದರ್ಶಿಯವರು ತಕ್ಷಣವೇ ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿಗೆ ಟ್ಯಾಗ್ ಮಾಡಿ ಮಹಿಳೆಯನ್ನು ಮರಳಿ ಕರ್ನಾಟಕಕ್ಕೆ ಕರೆತರುವ ನಿಟ್ಟಿಯಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಿರುತ್ತಾರೆ ಎಂದು ತಿಳಿಸಿದರು.

                ಸಾಕಮ್ಮನವರ ವಿಷಯವು ನನ್ನ ಗಮನಕ್ಕೆ ಬರುತ್ತಿದ್ದಂತೆ ಅವರನ್ನು ರಾಜ್ಯಕ್ಕೆ ಕರೆತರಲು ಅಗತ್ಯ ಕ್ರಮ ತೆಗೆದುಕೊಳ್ಳುವ ಮೂಲಕ, ಅಧಿಕಾರಿಗಳ ತಂಡವನ್ನು ವಿಮಾನದ ಮೂಲಕ ಕಳುಹಿಸಿ ಸಾಕಮ್ಮನವರನ್ನು ವಿಮಾನದಲ್ಲೇ ಸುರಕ್ಷಿತವಾಗಿ ಕರೆತರುವಂತೆ ಆದೇಶಿಸಿದೆ ಎಂದು ತಿಳಿಸಿದ ಸಚಿವರು, ಸರ್ಕಾರದ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್.ಪಿ ಅವರಿಗೆ ಉತ್ತರಾಖಂಡದ ಐ.ಪಿ.ಎಸ್. ಅಧಿಕಾರಿ ರವಿನಂದನ್ ಅವರೊಂದಿಗೆ ಉತ್ತಮ ಓಡನಾಟ ಇದ್ದುರಿಂದ ಅವರನ್ನು ಸಂಪರ್ಕಿಸಿ ಈ ವಿಚಾರವನ್ನು ಮುಂದಿನ ಕ್ರಮಕ್ಕಾಗಿ ಇಲಾಖೆಯ ಅಧಿಕಾರಿಗಳು ಹಾಗೂ ಸಹಾಯವಾಣಿಗೆ ಅನುಕೂಲವಾಗುವಂತೆ ಅಗತ್ಯ ನಿರ್ದೇಶನಗಳನ್ನು ನೀಡಿದರು.

                ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿಯು ಈ ಕುರಿತು ಕೇಂದ್ರ ಪರಿಹಾರ ಸಮಿತಿಯ ಕಾರ್ಯದರ್ಶಿ ನಾಗೇಶ್, ಬಳ್ಳಾರಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಹಾಗೂ ವಿಜಯನಗರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಅವರನ್ನು ಸಂರ್ಪಕಿಸಿತು. ಎರಡು ಜಿಲ್ಲೆಗಳ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿ ಪ್ರಶಾಂತ್ ಮಿಶ್ರಾ ಅವರೊಂದಿಗೆ ಸಮನ್ವಯ ಸಾಧಿಸಿ, ಜಿಲ್ಲಾಧಿಕಾರಿಯವರ ಅನುಮೋದನೆ ಪಡೆದು ಅವರ ನಿರ್ದೇಶನದಂತೆ ಓರ್ವ ಮಹಿಳಾ ಅಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳನ್ನು ಕಾರ್ಯಾಚರಣೆಗೆ ನಿಯೋಜಿಸಿದರು. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧೀಕ್ಷಕ ಬಸವರಾಜ, ಬಳ್ಳಾರಿ ಜಿಲ್ಲೆಯ ಎನ್.ಪಿ.ಕೆ ಕೇಂದ್ರದ ವಾರ್ಡನ್, ಬಳ್ಳಾರಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಾರ್ಡನ್ ಭಾರತಿಯವರು ಕಾರ್ಯಾಚರಣೆ ತಂಡದಲ್ಲಿ ಇದ್ದರು ಎಂದು ತಿಳಿಸಿದರು.

                ಈ ತಂಡವು 2024 ರ ಡಿಸೆಂಬರ್ 21 ರಂದು ಚಂಡೀಗಢವನ್ನು ತಲುಪಿ, ನಂತರ ಸಾಕಮ್ಮ ಅವರು ಇದ್ದ ಹಿಮಾಚಲ ಪ್ರದೇಶದ ಮಂಡಿ ಜಲ್ಲೆಯ ಬಾಲ್‌ವಲಿ ಕಲ್ಯಾಣ ಸಭಾ (ವೃದ್ದಾಶ್ರಮ)ವನ್ನು ತಲುಪಿದರು. ಸಾಕಮ್ಮ ಅವರ ಆರೋಗ್ಯವನ್ನು ವಿಚಾರಿಸಿದ ಅಧಿಕಾರಿಗಳು ವೀಡಿಯೋ ಕರೆ ಮೂಲಕ ಸಾಕಮ್ಮ ಅವರ ಕುಟುಂಬದೊಂದಿಗೆ ಸಂಪರ್ಕ ಸಾಧಿಸುವಲ್ಲಿ ಯಶಸ್ವಿಯಾದರು. 

ಈ ವೇಳೆ ಆಕೆಗೆ 3 ಮಕ್ಕಳಿದ್ದು, ಅವರು ತಮ್ಮ ತಾಯಿಯನ್ನು ಸ್ವೀಕರಿಸಲು ಕಾಯುತ್ತಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿಕೊಂಡು ವಿಡಿಯೋ ಮೂಲಕ ಮಾಹಿತಿ ನೀಡಿದರು. ಮರುದಿನ ಸಾಕಮ್ಮ ಅವರನ್ನು ನಮ್ಮ ಅಧಿಕಾರಿಗಳಿಗೆ ಬಾಲ್ ಕಣಿವೆ ಮ್ಯಾಜಿಸ್ಟ್ರೇಟ್ ಉಪ ವಿಭಾಗ ಸ್ಮೃತಿಕಾ ನೇಗಿ ಹಾಗೂ ಧರಮ್ ಶೀಲಾ ಅವರು ಮಹಿಳೆಯ ಹಸ್ತಾಂತರ ಪ್ರಕ್ರಿಯೆಯನ್ನು ಪೂರ್ಣಗೊಳಿದರು.

 ಸಾಕಮ್ಮನವರು 2024 ರ ಡಿಸೆಂಬರ್ 24 ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಸಮಾಜ ಕಲ್ಯಾಣ ಇಲಾಖೆಯ ತಂಡದೊಂದಿಗೆ ಚಂಢೀಗಢ ವಿಮಾನ ನಿಲ್ದಾಣವನ್ನು ತಲುಪಿದ ನಂತರ ರಾತ್ರಿ 08.30ಕ್ಕೆ ದೇವನಹಳ್ಳಿ ವಿಮಾನ ನಿಲ್ದಾಣದ ಮೂಲಕ ಬೆಂಗಳೂರು ತಲುಪಿದರು ಎಂದು ಸಚಿವರು ಘಟನೆಯನ್ನು ವಿವರಿಸಿದರು. ಇಂದು ಸಾಕಮ್ಮ ಅವರನ್ನು ಅವರ ಕುಟುಂಬದವರ ವಶಕ್ಕೆ ಒಪ್ಪಿಸಲಾಗಿದೆ ಎಂದರು.
 ಪತ್ರಿಕಾಗೋಷ್ಠಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ರಣದೀಪ್ ಡಿ. ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಪ್ರೀತಿ, ವಿಶ್ವಾಸ, ಸಹೋದರತ್ವ, ಆತ್ಮವಿಶ್ವಾಸ ಬೆಳೆಸುವುದೇ ಕ್ರೀಡೆಯ ಉದ್ದೇಶ ಪ್ರಾಮಾಣಿಕತೆಗೆ ಸ್ಟಿಂಗ್ ಆಪರೇಶನ್ ಭಯವೇಕೆ?:ಮನಸ್ಸಿನ ಆರೋಗ್ಯಕ್ಕೆ ಅರಿವೇ ಮೊದಲ ಚಿಕಿತ್ಸೆ:ಮೈಸೂರು ದಸರಾ ಸಂಸ್ಕೃತಿ, ಪರಂಪರೆ, ವೈಭವ  ದೃಷ್ಟಿಕೋನ ಚಿಂತನೆ ಕಾರ್ಯಕ್ರಮ ಆಯೋಜನೆವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಗೆ ಸರ್ಕಾರದಿಂದ ಆಹ್ವಾನಚಿತ್ರದುರ್ಗ ಜಿಲ್ಲೆಯ ರೈತರಿಗೆ ವಿಮಾ ಮೊತ್ತ ಶೀಘ್ರ ಬಿಡುಗಡೆಗೆ ಕೃಷಿ ಆಯುಕ್ತರಿಗೆ ಮನವಿ ಸಲ್ಲಿಸಿದ ಶಿವಲಿಂಗಪ್ಪಎನ್ ಡಿಎ ಅಭ್ಯರ್ಥಿ ಕೆ.ಎಂ ಸುರೇಶ್ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆ ಆಗುವುದು ನಿಶ್ಚಿತ-ಸಂಸದ ಕಾರಜೋಳದೇಶದ ಯುವಕರನ್ನು ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿರಾಹುಲ್ ಗಾಂಧಿ ಪ್ರಧಾನಿಯಾಗಲು ಹುಚ್ಚರಂತೆ ಓಡಾಡುತ್ತಿದ್ದಾರೆ: ಸಂಸದ ಗೋವಿಂದ್ ಕಾರಜೋಳ ವಾಗ್ದಾಳಿಅನುಭವ ಮತ್ತು ಜ್ಞಾನ ಎರಡೂ ನನ್ನಲ್ಲಿಲ್ಲ- ಸಂಸದ ಗೋವಿಂದ್ ಕಾರಜೋಳ