ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಗರದ ಪ್ರಧಾನ ಅಂಚೆ ಕಚೇರಿ ಪಕ್ಕದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇದೇ ಅಕ್ಟೋಬರ್ 13 ಮತ್ತು 14ರಂದು ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ನೀಡಲಾಗುವುದಿಲ್ಲ. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ಪೋರ್ಟ್ ಸೈಜ್ ಪೋಟೋ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಜಾತಿ ಪ್ರಮಾಣ ತರುವುದು.
ಹೆಚ್ಚಿನ ವಿವರಕ್ಕಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರರವರ ಮೊಬೈಲ್ ಸಂಖ್ಯೆ 9886002248, 9886803637ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.



