Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೋದಿ ನೇತೃತ್ವದ ಕೇಂದ್ರ ಸರ್ಕಾರ 12 ವರ್ಷ ಆಡಳಿತ ಪೂರ್ಣ ವಿಶೇಷ ಪೂಜೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ವಿಜಯನಗರ 
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 12 ವರ್ಷಗಳ ಆಡಳಿತ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.

ನಗರದ ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸೇರಿ ವಿಶೇಷ ಪೂಜೆ ನೆರವೇರಿಸಿದರು. ದೇಶದ ಸರ್ವಾಂಗೀಣ ಅಭಿವೃದ್ಧಿ, ಆರ್ಥಿಕ ಪ್ರಗತಿ ಹಾಗೂ ವಿಶ್ವಗುರು ಭಾರತದ ಕನಸನ್ನು ಸಾಕಾರಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವ ಮತ್ತಷ್ಟು ಬಲಿಷ್ಠವಾಗಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡರು, ಕಳೆದ 12 ವರ್ಷಗಳಲ್ಲಿ ದೇಶ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಮೂಲಸೌಕರ್ಯ ಅಭಿವೃದ್ಧಿ, ಡಿಜಿಟಲ್ ಭಾರತ, ಆತ್ಮನಿರ್ಭರ ಭಾರತ ಸೇರಿದಂತೆ ಹಲವು ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿವೆ ಎಂದು ಅಭಿಪ್ರಾಯಪಟ್ಟರು.

ಮುಂದಿನ ದಿನಗಳಲ್ಲಿಯೂ ದೇಶಕ್ಕೆ ಉತ್ತಮ ಆಡಳಿತ, ಅಭಿವೃದ್ಧಿ ಹಾಗೂ ಜನಪರ ಯೋಜನೆಗಳು ದೊರೆಯಲಿ ಎಂದು ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ದೇವಸ್ಥಾನದಲ್ಲಿ ಪೂಜೆ ಬಳಿಕ ಪ್ರಸಾದ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST