ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕಿನ ಉಡುವಳ್ಳಿಯಲ್ಲಿರುವ ಪಿಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ 9 ಮತ್ತು 11ನೇ ತರಗತಿಗಳ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ.
ನವೋದಯ ವಿದ್ಯಾಲಯಕ್ಕೆ ‘ಲ್ಯಾಟರಲ್ ಎಂಟ್ರಿ ಸೆಲೆಕ್ಷನ್ ಟೆಸ್ಟ್ (LEST) - 2027' ರ ಆನ್‍ಲೈನ್ ನೋಂದಣಿ ಪ್ರಕ್ರಿಯೆಯು ಸೆಪ್ಟೆಂಬರ್ 1 ರಿಂದ ಆರಂಭವಾಗಿತ್ತು. ಇದೀಗ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ವಿಸ್ತರಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಜಾಲತಾಣದ ಲಿಂಕ್‍ಗಳಿಗೆ ಭೇಟಿ ನೀಡುವ ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
9ನೇ ತರಗತಿ ಪ್ರವೇಶಕ್ಕಾಗಿ https://cbseitms.nic.in/2026/nvsix_9 ಹಾಗೂ 11ನೇ ತರಗತಿ ಪ್ರವೇಶಕ್ಕಾಗಿ https://cbseitms.nic.in/2026/nvsxi_11 ಲಿಂಕ್ ಬಳಸಬಹುದಾಗಿದೆ ಎಂದು ಉಡುವಳ್ಳಿಯ ಪಿಎಂ ಶ್ರೀ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.




