Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ತುಮಕೂರಿನಲ್ಲಿ ನಕ್ಸಲ್ ಚಟುವಟಿಕೆ ಶಂಕೆ: ಎಚ್ಚೆತ್ತ ಸರ್ಕಾರ

ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ಜಿಲ್ಲೆಯ ಪಾವಗಡ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ಸಂಬಂಧಿಸಿದ ಪೋಸ್ಟರ್‌ಗಳು ಪ್ರತ್ಯಕ್ಷವಾಗಿರುವ ವಿಚಾರ ತಮ್ಮ ಗಮನಕ್ಕೆ ಬಂದಿರುವುದಾಗಿ ತಿಳಿಸಿದ ಡಿಸಿಎಂ ಪರಮೇಶ್ವರ್, ಈ ಕುರಿತು ಅಂದೇ ತುಮಕೂರಿಗೆ ಭೇಟಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ಅಂತಹ ಯಾವುದೇ ಅಂಚಿನ ಬೆಳವಣಿಗೆಗಳು ಕಂಡುಬಂದಲ್ಲಿ ತಕ್ಷಣವೇ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲು ಸರ್ಕಾರ ಸಿದ್ಧವಿದೆ ಎಂದರು.

Advertisement

ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಘೋಷಿಸಿದ ಬಳಿಕ ಕಾರ್ಕಳದಲ್ಲಿದ್ದ ನಕ್ಸಲ್ ನಿಗ್ರಹ ದಳವನ್ನು ಸಂಪೂರ್ಣವಾಗಿ ಮುಚ್ಚಿಲ್ಲ. ಬದಲಿಗೆ ಅದರ ಅರ್ಧ ಪಡೆಯನ್ನು ಕೋಮು ಗಲಭೆ ನಿಯಂತ್ರಣಕ್ಕಾಗಿ 'ಸ್ಪೆಷಲ್ ಆ್ಯಕ್ಷನ್ ಫೋರ್ಸ್' ಆಗಿ ಪರಿವರ್ತಿಸಲಾಗಿದೆ.

ಉಳಿದರ್ಧ ಪಡೆ ಈಗಲೂ ನಕ್ಸಲ್ ನಿಗ್ರಹ ದಳವಾಗಿಯೇ ಕಾರ್ಯಾಚರಣೆ ಮುಂದುವರಿಸಿದೆ. ಪಾವಗಡದಲ್ಲಿ ನಕ್ಸಲ್ ಚಟುವಟಿಕೆಗಳು ಖಚಿತಗೊಂಡರೆ, ತಕ್ಷಣವೇ ಎಎನ್‌ಎಫ್ ಪಡೆಯನ್ನು ತುಮಕೂರಿಗೆ ರವಾನಿಸಲಾಗುವುದು ಎಂದು ತಿಳಿಸಿದರು.

ಮಾಜಿ ಯೋಧರಿಗೂ ಸಿಗಲಿದೆ ಉಚಿತ ನಿವೇಶನ: ರಾಜ್ಯದಲ್ಲಿ ವಸತಿ ರಹಿತ ಬಡವರಿಗಾಗಿ ಪ್ರತಿ ಜಿಲ್ಲೆಗೆ 30x40 ಅಳತೆಯ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡುವ ಮಹತ್ತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯಡಿಯಲ್ಲಿ ದೇಶಕ್ಕಾಗಿ ಸೇವೆ ಸಲ್ಲಿಸಿದ ಮಾಜಿ ಯೋಧರಿಗೂ ಆದ್ಯತೆಯ ಮೇರೆಗೆ ನಿವೇಶನಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು. ಮೊದಲ ಹಂತವಾಗಿ ಮುಂದಿನ ಎರಡು ತಿಂಗಳ ಒಳಗಾಗಿ ರಾಜ್ಯಾದ್ಯಂತ ಬರೋಬ್ಬರಿ 5 ಲಕ್ಷ ನಿವೇಶನಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಮಾಹಿತಿ ನೀಡಿದರು.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾವೇರಿ ನೀರು ಹರಿಸುವ ಕುರಿತ ಮೇಲ್ಮನವಿ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಇಡಿ ದಾಳಿಯಲ್ಲಿ ಸಿಕ್ಕ 2 ಕೋಟಿ ರೂ. ನಮಗೆ ದೊಡ್ಡ ಮೊತ್ತವಲ್ಲ; ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆಚಹಾ ಕಪ್ ರಸ್ತೆ ಬದಿ ಎಸೆದಿದ್ದನ್ನು ಪ್ರಶ್ನಿಸಿದ ಪೌರಕಾರ್ಮಿಕನ ಮೇಲೆ ಹಲ್ಲೆನಕಲಿ ಔಷಧ ಜಾಲ; ಏಕಕಾಲಕ್ಕೆ ಎಸ್‌ಐಟಿ ದಾಳಿ, ಕೋಟ್ಯಂತರ ಮೌಲ್ಯದ ಔಷಧ ಜಪ್ತಿ2028ರ ಚುನಾವಣೆ ಸ್ಪರ್ಧೆ ನಿರಾಕರಣೆ ಹೇಳಿಕೆ: ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಕಿವಿಮಾತುರಸ್ತೆ ಗುಂಡಿ ಮುಚ್ಚಲು ಜೆಟ್ ಪ್ಯಾಚರ್: ಸಚಿವ ಕೃಷ್ಣಭೈರೇಗೌಡ ಚಾಲನೆಸಿಕ್ಕಿರುವುದು ನಮ್ಮದೇ ಹಣ, ಕಾನೂನು ಮೂಲಕ ವಾಪಸ್ ಪಡೆಯುತ್ತೇವೆ: ಸಚಿವ ಸತೀಶ್ ಜಾರಕಿಹೊಳಿನವೆಂಬರ್ 1ರೊಳಗೆ ಪರವಾನಗಿ ಇಲ್ಲದ ಅಕ್ರಮ ಬಂದೂಕು ಒಪ್ಪಿಸಿ: ಸಿಎಂ ಡಿ.ಕೆ ಶಿವಕುಮಾರ್ಇ.ಡಿ ದಾಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈವಾಡವಿಲ್ಲವಿದೇಶದಲ್ಲಿ ಹೂಡಿಕೆ ಸುಳ್ಳು, ಕುಟುಂಬದ ಹೆಸರು ಕೆಡಿಸಬೇಡಿ: ಬಾಲಚಂದ್ರ ಜಾರಕಿಹೊಳಿ